Sun,May19,2024
ಕನ್ನಡ / English

ಜನರ ಹಣ ಜನರಿಗೆ ಕೊಡಲು ನಿಮಗೆ ಹೊಟ್ಟೆ ಉರಿ ಏಕೆ? | ಜನತಾ ನ್ಯೂಸ್

07 Sep 2021
2700

ಬೆಂಗಳೂರು : ಜನರ ಹಣ ಜನರಿಗೆ ಕೊಡಲು ನಿಮಗೆ ಹೊಟ್ಟೆ ಉರಿ‌ ಏಕೆ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ, ಇಂದಿರಾ ಕ್ಯಾಂಟೀನ್‌ ಹೆಸರು ಬದಲಿಸಲು ಹೋಗಿದ್ದಾರೆ. ಅವನ್ಯಾರೋ ಸಿಟಿ ರವಿ ಎಂದು ಹೇಳಿದ್ರು. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತನೊಬ್ಬ ಅವನು ಅಯೋಗ್ಯ ಎಂದರು. ಇದಕ್ಕೆ ಸಿದ್ಧರಾಮಯ್ಯನವ್ರು ನಾನು ಅಂತಹ ಪದ ಬಳಸಬಾರದು ಸುಮ್ಮನಿರಪ್ಪ ಎಂದು ಹೇಳಿದರು.

ಇನ್ನು ಮಾತು ಮುಂದುವರೆಸಿದ ಸಿದ್ದರಾಮಯ್ಯ, ಸಿಟಿ ರವಿಗೆ ಅವರ ನಾಯಕನ ಹೆಸರನ್ನು ಇಡಬಹುದು. ನಮ್ಮ ನಾಯಕರ ಹೆಸರು ಇಟ್ಟರೆ ಇವ್ರಿಗೆ ಹೊಟ್ಟೆ ಉರಿ ಎಂದು ಕಿಡಿಕಾರಿದರು.

ಆಹಾರ ಸಚಿವ ಕತ್ತಿ ಇದ್ದಾನೆ. ಅವನು ಒಬ್ಬರಿಗೆ ನಾಲ್ಕು ಕೆಜಿ ಅಕ್ಕಿ ಸಾಕು ಎಂದು ಹೇಳ್ತಾನೆ. ಇವನಿಗೇನೋ ಸಕ್ಕರೆ ಖಾಯಿಲೆ ಇರಬಹುದು. ಬೇರೆಯವರಿಗೆ ನಾಲ್ಕು ಕೆಜಿ ಸಾಲುತ್ತಾ ಎಂದು, ಒಬ್ಬರಿಗೆ ತಿಂಗಳಿಗೆ ಐದು ಕೆಜಿ ಅಕ್ಕಿ ಸಾಕು ಎಂದಿದ್ದ ಸಚಿವ ಉಮೇಶ್ ಕತ್ತಿ ವಿರುದ್ಧ ಏಕವಚನದಲ್ಲಿ ಕಿಡಿಕಾರಿದರು.

ಆರೋಗ್ಯ ಸಚಿವರಿಗೆ ಕೋವಿಡ್ ಸೋಂಕಿತರಿಗೆ ಬೆಡ್ ಸಹ ನೀಡಲು ಆಗಲಿಲ್ಲ. ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೇ ಜನರು ಸತ್ತರೆ, ಅದರ ಬಗ್ಗೆ ಸಹ ಸುಳ್ಳು ಮಾಹಿತಿ ಕೊಡುತ್ತಾರೆ. ಇದಕ್ಕೆ ನ್ಯಾಯಾಲಯ ಕೂಡಾ ಛೀಮಾರಿ ಹಾಕಿದೆ ಎಂದು ಟೀಕಿಸಿದರು.

ಭಾರತೀಯ ಜನತಾ ಪಕ್ಷದವರು ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಜನರಿಗೆ ಅರ್ಥ ಮಾಡಿಸಬೇಕು. ಹಿಂಬಾಗಿಲಿನಿಂದ ಬಂದ ಯಡಿಯೂರಪ್ಪ ಅವರನ್ನು ಬಿಜೆಪಿ ಅವರೇ ಕಳಿಸಿದ್ದಾರೆ. ಇವರಿಂದ ನಾವು ಏನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದರು.

RELATED TOPICS:
English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...