Fri,May03,2024
ಕನ್ನಡ / English

ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್ಯೂಸ್

20 Sep 2021
3142

ಬೆಂಗಳೂರು : ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರದೆಂದು ಹೇಳಲಾದ ವೀಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆ ವೀಡಿಯೊವನ್ನು ಫಾರ್ವರ್ಡ್ ಮಾಡುವ/ಅಪ್‌ಲೋಡ್ ಮಾಡುವವರ ವಿರುದ್ಧ ಸಂಸದರು ದೂರು ದಾಖಲಿಸಿದ್ದಾರೆ.

ಈ ಕುರಿತು ಬರೆದಿರುವ ಮಾಜಿ ಕೇಂದ್ರ ಸಚಿವರು, ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ತಿಳಿಸಲು ಇಚ್ಚಿಸುತ್ತೇನೆ, ಎಂದು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟಪಡಿಸಿದ್ದಾರೆ.

ನಾನು ಈಗಾಗಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ನನಗೆ ನಂಬಿಕೆ ಇದೆ, ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಅಲ್ಲದೇ, ನಾನು ನ್ಯಾಯಾಲಯದ ತಡೆಯಾಜ್ಞೆಯ ಪ್ರಕಾರ, ವಿಷಯವನ್ನು ಫಾರ್ವರ್ಡ್ ಮಾಡುವ/ಅಪ್‌ಲೋಡ್ ಮಾಡುವ ಯಾರಾದರೂ ಕಾನೂನಿನ ಸಂಬಂಧಿತ ವಿಭಾಗಗಳ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ, ಎಂದು ಈ ವೀಡಿಯೊ ಫಾರ್ವರ್ಡ್ ಮಾಡುವವರಿಗೆ ಎಚ್ಚರಿಕೆ ರವಾನಿಸಿದ್ದಾರೆ.

ಈ ರೀತಿ ಮಾಡುವ ಯಾರಾದರೂ ನಿಮಗೆ ತಿಳಿದಿದ್ದರೆ, ದಯವಿಟ್ಟು ನನಗೆ ಇನ್ ಬಾಕ್ಸ್ ಮಾಡಿ, ಎಂದು ತಮ್ಮ ಹಿತೈಷಿಗಳನ್ನು ಉದ್ದೇಶಿಸಿ ಬರೆದಿದ್ದಾರೆ.

ನನ್ನ ರಾಜಕೀಯ ಜೀವನ ಹಾಗೂ ನನ್ನ ಏಳಿಗೆಯನ್ನು ಸಹಿಸದ ದುಷ್ಕರ್ಮಿಗಳು ನನ್ನ ತೇಜೋವಧೆ ಮಾಡಲು ಅಶ್ಲೀಲ ನಕಲಿ ವಿಡಿಯೋ ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ನೋವು ತಂದಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು, ಎಂದು ಮನವಿ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಮಾಜಿ ಸಚಿವರೊಬ್ಬರ ವೀಡಿಯೊ ಪ್ರಕರಣದ ಬೆನ್ನಲ್ಲೇ, ತಮ್ಮ ವಿರುದ್ಧ ಅವಹೇಳನಕಾರಿಯಾಗುವಂಥ ಸುದ್ದಿ-ದೃಶ್ಯಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯದ ತಡೆಯಾಜ್ಞೆಯನ್ನು ತಂದಿದ್ದರು ಎನ್ನಲಾಗಿದೆ.

RELATED TOPICS:
English summary :It is not me in the video, morphed(deep fake) video of mine - Sadananda Gowda

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...