Sat,May04,2024
ಕನ್ನಡ / English

ಅ.1 ರಿಂದ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ, ರಾತ್ರಿ ಕರ್ಫ್ಯೂ ಅವಧಿ ಸಡಿಲ: ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

24 Sep 2021
2237

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿನ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಉನ್ನತ ಮಟ್ಟದ ತಜ್ಞರ ಸಮಿತಿ ಸಭೆ ನಡೆಯಿತು.

ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದಲ್ಲಿನ ಕೋವಿಡ್-19 ಸ್ಥಿತಿಗತಿ ಕುರಿತ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಕರ್ಫ್ಯೂ ವನ್ನು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನಿಗದಿಪಡಿಸಲಾಗುವುದು. 6 ರಿಂದ 12ನೆ ತರಗತಿ ವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು. ವಾರದಲ್ಲಿ ಐದು ದಿನ ಶಾಲಾ, ಕಾಲೇಜುಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ದಸರಾ ಬಗ್ಗೆ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು, ಗಡಿಭಾಗಗಳಲ್ಲಿ ಹೆಚ್ಚು ನಿಗಾ, ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಲಸಿಕಾ ಅಭಿಯಾನ ತೀವ್ರಗೊಳಿಸಲು ಜನರಲ್ಲಿ ಲಸಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆಯಲ್ಲಿ ಸೂಚಿಸಲಾಯಿತು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಅಕ್ಟೋಬರ್ 3 ರಿಂದ ಪಬ್ ಗಳಿಗೆ ಅನುಮತಿ ನೀಡಲು ಹಾಗೂ 1-5 ಶಾಲೆಗಳನ್ನು ಸದ್ಯಕ್ಕೆ ತೆರೆಯದಿರಲು ನಿರ್ಧರಿಸುವುದಾಗಿ ಹೇಳಿದರು.

ಚಿತ್ರಮಂದಿರಕ್ಕೆ ಬರುವವರು ಕೊವಿಡ್​ ಒಂದು ಡೋಸ್​ಪಡೆದಿರುವುದು ಕಡ್ಡಾಯವಾಗಿದೆ. ಪಾಸಿಟಿವಿಟಿ ದರ ಶೇ.1ಕ್ಕಿಂತ ಹೆಚ್ಚಾದರೆ ಶೇ.50ರಷ್ಟು ಸೀಟ್‌ ಭರ್ತಿಗೆ ಮಾತ್ರ ಅವಕಾಶ, ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಾದರೆ ಚಿತ್ರಮಂದಿರ ಬಂದ್‌ ಮಾಡಲಾಗುವುದು, ಚಿತ್ರಮಂದಿರಕ್ಕೆ ಗರ್ಭಿಣಿಯರಿಗೆ, ಮಕ್ಕಳಿಗೆ ಅವಕಾಶವಿಲ್ಲ ಎಂದು ತಿಳಿಸಿದರು.

ಪಬ್​ಗಳಿಗೂ ಇದೇ ಮಾನದಂಡ ಅನುಸರಿಸಲಾಗುವುದು. ಕನಿಷ್ಟ ಒಂದು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಪ್ರವೇಶ. ಗರ್ಭಿಣಿಯರು ಮತ್ತು ಮಕ್ಕಳಿಗೆ ಪಬ್​ಗಳಿಗೆ ಪ್ರವೇಶಕ್ಕೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ. ನೈಟ್​ ಕರ್ಫ್ಯೂವನ್ನ ರಾತ್ರಿ 10 ರಿಂದ ಬೆಳಿಗ್ಗೆ 5 ರ ವರೆಗೆ ನಿಗದಿ ಪಡಿಸಲಾಗುವುದು. 6 ರಿಂದ 12 ನೇ ತರಗತಿ ವರೆಗೆ ಶೇ.100 ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಲಾಯಿತು. ವಾರದಲ್ಲಿ ಐದು ದಿನ ಶಾಲಾ-ಕಾಲೇಜು ನಡೆಸಲು ನಿರ್ಧರಿಸಲಾಯಿತು.

RELATED TOPICS:
English summary :Basavaraj bommai

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...