Wed,May01,2024
ಕನ್ನಡ / English

ಖಾಸಗಿ ಇಂಜಿನಿಯರಿಂಗ್ ಕಾಲೇಜು ಸಂಸ್ಥೆಗಳ ಜತೆ ಚರ್ಚೆ, ಶುಲ್ಕ ಹೆಚ್ಚಳ ಇಲ್ಲ: ಡಾ.ಅಶ್ವತ್ಥನಾರಾಯಣ | ಜನತಾ ನ್ಯೂಸ್

29 Sep 2021
2078

ಬೆಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಕೋರ್ಸಿನ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದೇ ಹಿಂದಿನ ದರವನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಖಾಸಗಿ ಇಂಜಿನಿಯರಿಂಗ್ ಕಾಲೇಜು ಸಂಸ್ಥೆಗಳ ಜತೆ ವೃತ್ತಿಪರ ಕೋರ್ಸಗಳ ಶುಲ್ಕ ವಿಚಾರದಲ್ಲಿ ಚರ್ಚೆ ನಡೆಸಲಾಗಿದ್ದು, ಯಾವುದೇ ಹೆಚ್ಚಳ ಇಲ್ಲದೆ ಹಿಂದಿನ ರೀತಿಯಲ್ಲೇ ಶುಲ್ಕ ನಿಗದಿ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳಿಗೆ ಪ್ರವೇಶ ಒದಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವ್ಯವಸ್ಥಿತವಾದ ಕೌನ್ಸೆಲಿಂಗ್ ನಡೆಸಲಾಗುವುದು. ಆದರೆ, ಇದಕ್ಕೂ ಮುನ್ನ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾದ ನೀಟ್ ಪರೀಕ್ಷೆಯ ಕೌನ್ಸೆಲಿಂಗ್ ಗಮನಿಸಿ ಸಿಇಟಿ ಕೌನ್ಸೆಲಿಂಗ್ ಏರ್ಪಡಿಸುತ್ತೇವೆ. ಕಾರಣ ಸಿಇಟಿ ಕೌನ್ಸೆಲಿಂಗ್ ನಲ್ಲಿ ಎಂಜಿನಿಯರಿಂಗ್ ಸೀಟು ಪಡೆದ ವಿದ್ಯಾರ್ಥಿಗಳು ಮೆಡಿಕಲ್ ಸೀಟ್ ಸಿಕ್ಕರೆ ಇಂಜಿನಿಯರಿಂಗ್ ರದ್ದು ಮಾಡಿ ಮೆಡಿಕಲ್ ಗೆ ತೆರಳುತ್ತಾರೆ. ಈ ಗೊಂದಲ ತಪ್ಪಿಸಲು ಅಗತ್ಯ ಮುಂಜಾಗ್ರತೆ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶುಲ್ಕ ಹೆಚ್ಚಳಕ್ಕೆ ಖಾಸಗಿ ಕಾಲೇಜುಗಳು ಮನವಿಮಾಡಿದ್ದರು ಆದರೆ ಚರ್ಚೆಯಲ್ಲಿ ಯಾವುದೇ ಶುಲ್ಕ ಹೆಚ್ಚಳ ಮಾಡದಿರಲು ತಿರ್ಮಾನ ಮಾಡಿದ್ದೇವೆ. ಇತರೆ ಶುಲ್ಕ 20 ಸಾವಿರಕ್ಕಿಂತ ಹೆಚ್ಚು ತೆಗೆದುಕೊಳ್ಳಬಾರದು ಎಂದು ತಿರ್ಮಾನಿಸಿದ್ದೇವೆ ಎಂದರು.

ಈ ಮುಂಚಿನಂತೆಯೇ ಸರ್ಕಾರಿ ಕೋಟಾದಡಿ ಪ್ರವೇಶಾತಿ ಪಡೆಯುವವರಿಗೆ ರೂ 65,340, ರೂ 58,806 ಈ ಎರಡು ಸ್ಲ್ಯಾಬ್ ಗಳಲ್ಲಿ ಶುಲ್ಕಗಳು ಮುಂದುವರಿಯಲಿವೆ ಎಂದು ಅವರು ಸ್ಪಷ್ಟಪಡಿಸಿದರು.

ಇದೇ ವೇಳೆ, ಖಾಸಗಿ ಕಾಲೇಜುಗಳು ಇತರ ಶುಲ್ಕ ನೆಪದಲ್ಲಿ ಮಿತಿಮೀರಿ ಪಡೆಯುವುದಕ್ಕೂ ಕಡಿವಾಣ ಹಾಕಿ, ಗರಿಷ್ಠ ಮಿತಿಯನ್ನು 20 ಸಾವಿರ ರೂಪಾಯಿಕ್ಕೆ ನಿಗದಿಪಡಿಸಲಾಗಿದೆ.

ಹಲವು ಕಾಲೇಜುಗಳು ಇತರ ಶುಲ್ಕದ ನೆಪದಲ್ಲಿ 70 ಸಾವಿರ ರೂ.ವರೆಗೂ ಶುಲ್ಕ ವಸೂಲಿ ಮಾಡುತ್ತಿವೆ ಎನ್ನುವ ಆರೋಪಗಳ ಹಿನ್ನಲೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಇದಕ್ಕೆ ಕಾಲೇಜು ಸಂಘದ ಪ್ರತಿನಿಧಿಗಳು ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವರು ವಿವರಿಸಿದರು.

RELATED TOPICS:
English summary :Ashwath Narayan

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...