Sat,May04,2024
ಕನ್ನಡ / English

ಸರ್ಕಾರಿ ನೌಕರಿ ಕೊಡಿಸಿವುದಾಗಿ 55 ಜನರಿಂದ 1.62 ಕೋಟಿ ವಸೂಲಿ, ಬಂಧನ! | ಜನತಾ ನ್ಯೂಸ್

29 Sep 2021
3872

ಬೆಂಗಳೂರು : ಗೃಹ ಇಲಾಖೆಯಲ್ಲಿ ಸಹಾಯಕರ ಹುದ್ದೆ ಕೊಡಿಸುವುದಾಗಿ 55 ಜನರಿಂದ 1.62 ಕೋಟಿ ರೂ. ವಸೂಲಿ ಮಾಡಿ ವಂಚಿಸಿರುವ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮಂಜುನಾಥ್ ಎಂಬುವರು ನೀಡಿದ ದೂರಿನನ್ವಯ ವಸಂತನಗರದಲ್ಲಿರುವ ರೂರಲ್ ಎಸ್​ಪಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿ(SDA)ಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀಲೇಖಾ ಎಂಬುವರನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ಶ್ರೀಲೇಖಾ ಮತ್ತು ಸಂಪತ್‌ಕುಮಾರ್ ಬಂಧಿತ ಆರೋಪಿಗಳು. ಇನ್ನೊರ್ವ ಆರೋಪಿ ರಾಧ ಉಮೇಶ್​ಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಘಟನೆ:
2019ರ ಮಾರ್ಚ್‌ನಲ್ಲಿ ರಾಧ ಉಮೇಶ್, ಕೆಪಿಸಿಸಿ ಕಾರ್ಮಿಕ ವಿಭಾಗ ಉಪಾಧ್ಯಕ್ಷೆ ಎಂದು ಪರಿಚಯ ಮಾಡಿಕೊಂಡರು. ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳು ಪರಿಚಯವಿದ್ದು, ದಿನಗೂಲಿ ನೌಕರರ ಏಜೆನ್ಸಿ ಕೊಡಿಸುವುದಾಗಿ 15 ಲಕ್ಷ ರೂ. ಕೇಳಿದರು.

ಅದನ್ನು ನಂಬಿ 4 ಕಂತುಗಳಲ್ಲಿ 15 ಲಕ್ಷ ರೂ. ನೀಡಿದೆ. ಆನಂತರ ಶ್ರೀಲೇಖಾ, ಏಜೆನ್ಸಿ ಬೇಡ. ಗೃಹ ಇಲಾಖೆಯಲ್ಲಿ ಕಿರಿಯ, ಹಿರಿಯ ಮತ್ತು ಅಧೀಕ್ಷರ ಹುದ್ದೆಗೆ ನೇರ ನೇಮಕಾತಿ ನಡೆಯುತ್ತಿದೆ. ಅದರಲ್ಲಿ ಕೆಲಸ ಕೊಡಿಸುವುದಾಗಿ ಮಾತು ಬದಲಾಯಿಸಿದರು. ಶ್ರೇಲೇಖಾ ಮಾತು ನಂಬಿ 55 ಮಂದಿ ಉದ್ಯೋಗ ಆಕಾಂಕ್ಷಿಗಳು ಒಟ್ಟಿಗೆ ಸೇರಿ ಹಂತ ಹಂತವಾಗಿ ಮೂವರು ಆರೋಪಿಗಳಿಗೂ 1.61 ಕೋಟಿ ರೂ. ಕೊಟ್ಟಿದ್ದೆವೆ.

ಹಣ ಸ್ವೀಕರಿಸಿದ ಆರೋಪಿಗಳು ನೇಮಕಾತಿ ಆದೇಶ ಪತ್ರವನ್ನು ನೀಡಿದರು. ಸೆ.24ರಂದು ವಿಧಾನಸೌಧ ಆರ್ಥಿಕ ಇಲಾಖೆಗೆ ಹೋಗಿ ನೇಮಕಾತಿ ಆದೇಶ ಪ್ರಮಾಣ ಪತ್ರವನ್ನು ನೀಡಿದಾಗ ನಕಲಿ ಎಂಬುದು ಗೊತ್ತಾಗಿದೆ. ಅಲ್ಲದೆ, ಇಂತಹ ಹುದ್ದೆಗಳಿಗೆ ನೇಮಕಾತಿಯೇ ನಡೆದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.

ಆರೋಪಿಗಳನ್ನು ಪ್ರಶ್ನಿಸಿದಾಗ ಸಬೂಬು ಹೇಳಿ ಮೋಸ ಮಾಡಿದ್ದಾರೆ. ಈ ಮೂವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ಮಂಜುನಾಥ್ ಎಂಬಾತ ಮನವಿ ಮಾಡಿದ್ದರು.

RELATED TOPICS:
English summary :Bangalore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...