Mon,May13,2024
ಕನ್ನಡ / English

ಸಾರಿಗೆ ನೌಕರನ ಪತ್ನಿ, ಮಕ್ಕಳ ಆತ್ಮಹತ್ಯೆ ಹೃದಯ ವಿದ್ರಾವಕ: ಹೆಚ್​ಡಿಕೆ | ಜನತಾ ನ್ಯೂಸ್

03 Oct 2021
2925

ಬೆಂಗಳೂರು : ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಹಾಗೂ ಆಕೆಯ ಮಕ್ಕಳ ಆತ್ಮಹತ್ಯೆ ಘಟನೆ ಹೃದಯ ವಿದ್ರಾವಕ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಆತ್ಮಹತ್ಯೆಯನ್ನು ಸರ್ಕಾರ ತಡೆಯಬಹುದಿತ್ತು. ಇದು ಕೊಲೆಗಡುಕ ಸರ್ಕಾರ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು ಎಂದು ಹೆಚ್​ಡಿಕೆ ಕಿಡಿಕಾರಿದ್ದಾರೆ.

ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಸರ್ಕಾರ ಇಂಥವರ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ರಾಜ್ಯ ಸರಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ‌ ಎಂದು ಮಾಜಿ ಸಿಎಂ ಆರೋಪಿಸಿದ್ದಾರೆ.

ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನ ಹರಿಸಿ ಕೊರೋನ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೆರವಾಗಿ ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯ ಮಾಡುತ್ತೇನೆ.

RELATED TOPICS:
English summary :H D Kumaraswamy

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...