Mon,May13,2024
ಕನ್ನಡ / English

ಹಾನಗಲ್ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರಗೆ ಸ್ಥಾನ! | ಜನತಾ ನ್ಯೂಸ್

05 Oct 2021
2458

ಬೆಂಗಳೂರು : ಕರ್ನಾಟಕದ ಹಾನಗಲ್ ಹಾಗೂ ಸಿಂಧಗಿ ಉಪಚುನಾವಣೆ ಉಸ್ತುವಾರಿಗಳ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮಗ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೆಸರಿಲ್ಲ ಎಂಬ ಕಾರಣಕ್ಕೆ ಅವರ ಅಭಿಮಾನಿಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು.

ಉಪ ಚುನಾವಣಾ ಜವಾಬ್ದಾರಿ ನೀಡದಿರುವುದಕ್ಕೆ ವಿಜಯೇಂದ್ರ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರು ಮಾಡಿದ್ದರು. ವಿಜಯೇಂದ್ರ ಅವರ ರಾಜಕೀಯ ಏಳಿಗೆ ಸಹಿಸದೆ ತುಳಿಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಟೀಕಿಸಿದ್ದರು.

ಅದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿ.ವೈ. ವಿಜಯೇಂದ್ರ, ಪಕ್ಷದ ರಾಜ್ಯ ಉಪಾಧ್ಯಕ್ಷನಾಗಿ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವುದೂ ಸೇರಿದಂತೆ ಪಕ್ಷ ನೀಡುವ ಜವಾಬ್ದಾರಿಯನ್ನು ನಿರ್ವಹಿಸಲು ನಾನು ಕಟಿಬದ್ಧನಾಗಿದ್ದೇನೆ. ಪಕ್ಷದ ಗೆಲುವೇ ನಮಗೆ ಮುಖ್ಯ. ಭಿನ್ನಾಭಿಪ್ರಾಯದಿಂದ ಕಾರ್ಯಕರ್ತರಲ್ಲಿ ಗೊಂದಲ ಮೂಡುತ್ತದೆ. ಇದರಿಂದ ವಿಪಕ್ಷಗಳಿಗೆ ಪರೋಕ್ಷವಾಗಿ ಸಹಾಯ ಮಾಡಿದಂತಾಗುತ್ತದೆ. ಯಾರೂ ಈ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡಬೇಡಿ ಎಂದಿದ್ದರು.

ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಕೋರ್ ಕಮಿಟಿ ಸಭೆ ನಿರ್ಧಾರದಂತೆ ಉಸ್ತುವಾರಿಗಳ ತಂಡವನ್ನು ರಚಿಸಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ಈ ಹಿಂದೆ ನಡೆದ ಉಪ ಚುನಾವಣೆಗಳಲ್ಲಿ ಗಣನೀಯ ಸಾಧನೆ ಮಾಡಿ ಪಕ್ಷ ಸಂಘಟಿಸಿ ಸಾಮರ್ಥ್ಯ ಸಾಬೀತುಪಡಿಸಿರುವ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಹೆಸರು ಉಸ್ತುವಾರಿಗಳ ಪಟ್ಟಿಯಲ್ಲಿ ಇರಲಿಲ್ಲ.

ಇದೀಗ ಬಿಜೆಪಿ ಹೊಸದಾಗಿ ಬಿಡುಗಡೆ ಮಾಡಿರುವ ಹಾನಗಲ್ ಉಪಚುನಾವಣೆಯ 13 ಉಸ್ತುವಾರಿಗಳ ಪಟ್ಟಿಯಲ್ಲಿ ಬಿ.ವೈ. ವಿಜಯೇಂದ್ರ ಅವರ ಹೆಸರು ಕೂಡ ಸೇರ್ಪಡೆಯಾಗಿದೆ.

ಬಿ.ವೈ. ವಿಜಯೇಂದ್ರ ಅವರ ಜೊತೆಗೆ ಸಚಿವರಾದ ಮುರುಗೇಶ್ ನಿರಾಣಿ. ಬಿ.ಸಿ. ಪಾಟೀಲ್, ಜೆ.ಸಿ. ಮಾಧುಸ್ವಾಮಿ, ಶಿವರಾಮ್ ಹೆಬ್ಬಾರ್, ಸಂಸದ ಶಿವಕುಮಾರ್ ಉದಾಸಿ ಮುಂತಾದ ನಾಯಕರ ಹೆಸರನ್ನು ನಮೂದಿಸಲಾಗಿದೆ. ಸಿಂಧಗಿ ಉಪಚುನಾವಣೆಯ ಬಿಜೆಪಿ ಉಸ್ತುವಾರಿಗಳಾಗಿ ಸಚಿವರಾದ ಗೋವಿಂದ ಕಾರಜೋಳ, ವಿ. ಸೋಮಣ್ಣ, ಸಿ.ಸಿ. ಪಾಟೀಲ್, ಶಶಿಕಲಾ ಜೊಲ್ಲೆ ಮುಂತಾದವರಿದ್ದಾರೆ.

RELATED TOPICS:
English summary :Karnataka Bypolls 2021

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...