Sat,May04,2024
ಕನ್ನಡ / English

ಕಲುಷಿತ ನೀರು ಸೇವನೆ ಪ್ರಕರಣ; ಮೃತ ಕುಟುಂಬಕ್ಕೆ 3 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ | ಜನತಾ ನ್ಯೂಸ್

05 Oct 2021
1915

ವಿಜಯನಗರ : ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ 6 ಜನ ಕುಟುಂಬಕ್ಕೆ ಸರ್ಕಾರದಿಂದ ತಲಾ 3 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಲುಷಿತ ನೀರು‌ ಈವರೆಗೆ 6 ಮಂದಿ ಕೆಲವರು ಸಾವನ್ನಪ್ಪಿರುವುದು ಗಂಭೀರ ವಿಚಾರ. ಪ್ರಕರಣವನ್ನು ಸರ್ಕಾರ ಬಹಳ‌ ಗಂಭೀರವಾಗಿ ಪರಿಗಣಿಸಿದೆ. ಕಲುಷಿತ ವಾಟರ್, ಕುಡಿಯುವ ನೀರಿಗೆ ಹೇಗೆ ಮಿಶ್ರಿತ ಆಯ್ತು ಅನ್ನೋ ಬಗ್ಗೆ ವರದಿ ಕೊಡಲು ಹೇಳಿದ್ದೇನೆ. ವರದಿ ಕೊಟ್ಟ ನಂತರ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ತೇನೆ. ಮೃತಪಟ್ಟವರ ಪ್ರತಿ ಕುಟುಂಬಕ್ಕೆ 3 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡ್ತಿದ್ದೇವೆ ಎಂದು ತಿಳಿಸಿದರು.

ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವನ್ನಪ್ಪಿರುವ ಕಾರಣ ಆತಂಕಗೊಂಡ ಕೆಲ ಕುಟುಂಬಗಳು ಗ್ರಾಮವನ್ನು ತೊರೆದು ಹೋಗಿವೆ. ಕೆಲ ಜನರು ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಅಸ್ವಸ್ಥಗೊಂಡ ಕೆಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಹುಬ್ಬಳ್ಳಿ, ದಾವಣಗೆರೆ, ಹಾವೇರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಕರಬ್ಬಿ ಗ್ರಾಮದಲ್ಲಿ ಶಾಲೆಗೆ ತಾತ್ಕಾಲಿಕವಾಗಿ ರಜೆ ಘೋಷಣೆ ಮಾಡಲಾಗಿದೆ.

ವಾಂತಿಭೇದಿಯಿಂದ ಅಸ್ವಸ್ಥರಾಗಬಹುದೆಂಬ ಆತಂಕದಲ್ಲಿ ತಮ್ಮ ತಮ್ಮ ಮಕ್ಕಳನ್ನು ಗ್ರಾಮಸ್ಥರು ಸಂಬಂಧಿಕರ ಮನೆಗಳಿಗೆ ಕಳುಹಿಸಿದ್ದಾರೆ. ಸರಣಿ ಸಾವಿನಿಂದ ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಉಳಿದವರಿಗೆ ಚಿಕಿತ್ಸೆ ಮುಂದುವರಿದಿದ್ದು, ಗ್ರಾಮದ ಸರ್ಕಾರಿ ಶಾಲೆಯಲ್ಲಿ 7-8 ತರಗತಿ ಮಕ್ಕಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಕಳೆದೊಂದು ವಾರದಿಂದ ಘಟನೆಯಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆ ಇಂದು ನೂತನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ಅರುಣ್​ ಕೆ ಮಕರಬ್ಬಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಇವರ ಜೊತೆಗೆ ಹೊಸಪೇಟೆ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ಹಡಗಲಿ ತಹಸೀಲ್ದಾರ್ ಮಹೇಂದ್ರ, ತಾಲೂಕುಪಂಚಾಯತಿ ಇಒ ಪ್ರಭಾಕರ ರೆಡ್ಡಿ, ಆರೋಗ್ಯಾಧಿಕಾರಿ ವಿನೋದ್, ನೈರ್ಮಲ್ಯ ಇಲಾಖೆ ಎಡಬ್ಲ್ಯೂಇ ಕೂಡ ಭೇಟಿ ನೀಡಿದ್ದಾರೆ.

RELATED TOPICS:
English summary :Basavaraj bommai

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...