Sun,May05,2024
ಕನ್ನಡ / English

ಮಾ. 11 ರಿಂದ ಪಲ್ಸ್ ಪೊಲಿಯೋ ಅಭಿಯಾನ

08 Mar 2018
716

ಕಾರವಾರ : ರಾಜ್ಯಾದ್ಯಂತ ಮಾ.11 ರಿಂದ ಪಲ್ಸ್ ಪೊಲಿಯೋ ಅಭಿಯಾನ ನಡೆಯಲಿದ್ದು ಇದರ ಅಂಗವಾಗಿ ಜಿಲ್ಲೆಯ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಎರಡು ಹನಿ ಪಲ್ಸ ಪೊಲಿಯೋ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಿ.ಎನ್. ಅಶೋಕಕುಮಾರ ತಿಳಿಸಿದ್ದಾರೆ. ಜಿಲ್ಲೆಯ ನಗರ ಪ್ರದೇಶಗಳಲ್ಲಿ 26,015 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 83,340 ರಷ್ಟು 5 ವರ್ಷದೊಳಗಿನ ಮಕ್ಕಳನ್ನು ಗುರುತಿಸಿದ್ದು, ಪೂರ್ಣ ಪ್ರಗತಿ ಸಾಧಿಸಲು ಆರೋಗ್ಯ ಮತ್ತು ಕು.ಕ. ಇಲಾಖೆ ಸಜ್ಜಾಗಿದೆ.

ಜಿಲ್ಲೆಯ ಎಲ್ಲ ಇಲಾಖೆಗಳು ಈ ಕಾರ್ಯಕ್ಕೆ ಸಹಕಾರ ನೀಡುತ್ತಿವೆ. ಜಿಲ್ಲೆಯಲ್ಲಿ ಒಟ್ಟು 866 ಪಲ್ಸ ಪೊಲಿಯೋ ಬೂತ್‍ಗಳನ್ನು ನಿರ್ಮಿಸಿದ್ದು ಒಟ್ಟು 3600 ಇಲಾಖೆ ಹಾಗೂ ಇಲಾಖೇತರ ಮತ್ತು ಸ್ವಯಂ ಸೇವಾ ಸಂಸ್ಥೆಯ ಸದಸ್ಯರನ್ನು ನಿಯೋಜಿಸಲಾಗಿದೆ. ಅಭಿಯಾನದ ಮೇಲ್ವಿಚಾರಣೆಗಾಗಿ ಒಟ್ಟು 198 ಮೇಲ್ವಿಚಾರಕರನ್ನು ಹಾಗೂ ಎಲ್ಲ ತಾಲೂಕುಗಳಿಗೆ ನೋಡೆಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ವಿಶೇಷವಾಗಿ ರೋಟರಿ ಕ್ಲಬ್ ಹಾಗೂ ಇತರೇ ಸ್ವಯಂ ಸೇವಾ ಸಂಸ್ಥೆಗಳು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿವೆ. ಪಲ್ಸ್ ಪೊಲಿಯೋ ಅಭಿಯಾನ ಉದ್ಘಾಟನೆಯನ್ನು ಜಿಲ್ಲಾಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಹಾಗೂ ಚುನಾಯಿತ ಪ್ರತಿನಿಧಿಗಳಿಂದ ತಾಲೂಕಾ ಮಟ್ಟದಲ್ಲಿ ಶಾಸಕರಿಂದ ಹಾಗೂ ಚುನಾಯಿತ ಪ್ರತಿನಿಧಿಗಳಿಂದ, ಗ್ರಾಮ ಪಂಚಾಯತ್ ಉಪಕೇಂದ್ರ ಮಟ್ಟದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರಿಂದ ಚಾಲನೆ ನೀಡಲು ಕ್ರಮ ವಹಿಸಲಾಗಿದೆ. ಕಾರ್ಯಕ್ರಮದ ಪ್ರಚಾರಾರ್ಥ ಮೈಕಿಂಗ್ ವ್ಯವಸ್ಥೆ, ಬ್ಯಾನರ ಪೊಸ್ಟರಗಳ ಪ್ರದರ್ಶನ, ಕೇಬಲ್ ಟಿವಿ ಸ್ಕ್ರಾಲಿಂಗ್ ಬಸ್ ನಿಲ್ದಾಣಗಳಲ್ಲಿ ಪ್ರಚಾರ ವ್ಯವಸ್ಥೆ ಮಾಡಲಾಗಿದೆ. ಮಾರ್ಚ್12 ಹಾಗೂ 13 ರಂದು ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಮಾರ್ಚ್ 12,13 ಮತ್ತು 14 ರಂದು ನಗರ ಪ್ರದೇಶಗಳಲ್ಲಿ ತಂಡದ ಸದಸ್ಯರು ಮನೆ ಭೇಟಿ ಮಾಡಿ ಬಿಟ್ಟು ಹೋದ ಮಕ್ಕಳಿಗೆ ಲಸಿಕೆ ಹಾಕಿಸುವ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ವಿವರಿಸಿದ್ದಾರೆ.

English summary :Pulse polio drive on March 11

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...