Mon,May20,2024
ಕನ್ನಡ / English

ಚಿತ್ರರಂಗದ ಹಿರಿಯ ನಟ ಇನ್ನಿಲ್ಲ, ಅಗಲಿಕೆಗೆ ಸಂತಾಪ ಸೂಚಿಸಿದ ಚಿತ್ರರಂಗ ಹಾಗು ರಾಜಕೀಯ ನಾಯಕರು! | ಜನತಾ ನ್ಯೂಸ್

10 Oct 2021
2574

ಬೆಂಗಳೂರು : ಅನಾರೋಗ್ಯದಿಂದ‌ ಬಳಲುತ್ತಿದ್ದ ಕನ್ನಡದ ಹಿರಿಯ ಪೋಷಕ ನಟ ಸತ್ಯಜಿತ್ ಇಂದು ಇಹಲೋಕ ತ್ಯಜಿಸಿದ್ದಾರೆ.

ಸತ್ಯಜಿತ್ ಗೆ 72 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಗಡೆ ನಗರದ ಶಬರಿ ನಗರದ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 1.30ರ ನಂತರ ಸತ್ಯಜಿತ್ ಅಂತ್ಯಕ್ರಿಯೆ ನಡೆಯಲಿದೆ.

986ರಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು, 650ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅಪ್ಪು, ಅರಸು, ಅಭಿ, ಆಪ್ತಮಿತ್ರ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ಜನಪ್ರಿಯತೆ ಪಡೆದಿದ್ದರು. ಹಲವು ಬಗೆಯ ಪಾತ್ರಗಳಿಗೆ ಅವರು ಬಣ್ಣ ಹಚ್ಚಿದ್ದು, ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಗಮನ ಸೆಳೆದಿದ್ದರು.

ಸತ್ಯಜಿತ್​ ಅವರಿಗೆ ಈ ಮೊದಲು ಗ್ಯಾಂಗ್ರಿನ್​ ಆಗಿತ್ತು. ಹೀಗಾಗಿ, ಅವರ ಕಾಲನ್ನು ಕತ್ತರಿಸಲಾಗಿತ್ತು. ಹೀಗಾಗಿ, ವ್ಹೀಲ್​ಚೇರ್​ ಮೇಲೆಯೇ ಅವರು ಕುಳಿತಿರುತ್ತಿದ್ದರು. ಒಂದು ವರ್ಷದ ಹಿಂದೆ ಸತ್ಯಜಿತ್​ ಅವರು ಪುನೀತ್​ ಮನೆಗೂ ಆಗಮಿಸಿದ್ದರು. ಆ ದಿನವನ್ನು ಅಪ್ಪು ನೆನೆದಿದ್ದಾರೆ.

ಮೃತರ ಕುಟುಂಬ, ಬಂಧುಮಿತ್ರರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ನಳಿನ್‍ಕುಮಾರ್ ಕಟೀಲ್ ಅವರು ಪ್ರಾರ್ಥಿಸಿದ್ದಾರೆ.

ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಮಾಜಿ ಸಚಿವರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಸತ್ಯಜಿತ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ಸದಸ್ಯರಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಆಶಿಸಿದ್ದಾರೆ.

ಸಂಸದ ಡಿ.ಕೆ ಸುರೇಶ್ ಸಹ ಟ್ವೀಟ್ ಮಾಡಿ ಸತ್ಯಜಿತ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದು, ಕುಟುಂಬ ಮತ್ತು ಬಂಧುಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕಲೆಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ನಟ ಸತ್ಯಜಿತ್ ಅವರನ್ನು ಗೌರವಪೂರ್ವಕವಾಗಿ ಸ್ಮರಿಸುತ್ತೇನೆ ಎಂದಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್‌ ಅವರ ನಿಧನಕ್ಕೆ ಸಚಿವ‌ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು‌ ಸಂತಾಪ‌ ವ್ಯಕ್ತಪಡಿಸಿದ್ದಾರೆ. ಖಳನಾಯಕ, ಪೋಷಕನಟ ಸೇರಿದಂತೆ ವೈವಿಧ್ಯಮಯ ಪಾತ್ರಗಳಲ್ಲಿ‌ 600 ಕ್ಕೂ ಹೆಚ್ಷು‌ ಸಿನಿಮಾಗಳಲ್ಲಿ‌ ಅವರು ಅಭಿನಯಿಸಿದ್ದರು. ತಮ್ಮ ನಟನೆಯ ಮೂಲಕ ಜನರ‌ ಹೃದಯವನ್ನು ಗೆದ್ದಿದ್ದರು. ತಮ್ಮ ಕಲಾಸೇವೆಯಿಂದಾಗಿ ಅವರ ಹೆಸರು ಕನ್ನಡ ಸಾಂಸ್ಕೃತಿಕ ಕ್ಷೇತ್ರದಲ್ಲಿ‌ ಚಿರಸ್ಥಾಯಿಯಾಗಿರುತ್ತದೆ ಎಂದಿದ್ದಾರೆ. ಮೃತರ ಕುಟುಂಬ, ಬಂಧುಮಿತ್ರರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

RELATED TOPICS:
English summary :Kannada actor Sathyajith dies at 72 in Bengaluru

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...