Tue,May07,2024
ಕನ್ನಡ / English

2-18 ವರ್ಷ ವಯಸ್ಸಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ! | ಜನತಾ ನ್ಯೂಸ್

12 Oct 2021
2705

ನವದೆಹಲಿ : ಕೋವಿಡ್ 19 ಸೋಂಕಿನ ವಿರುದ್ಧದ ಭಾರತದ ಹೋರಾಟಕ್ಕೆ ಮತ್ತಷ್ಟು ಉತ್ತೇಜನಕಾರಿ ಬೆಳವಣಿಗೆ ನಡೆದಿದ್ದು, 2ರಿಂದ 18 ವರ್ಷದ ನಡುವಿನ ಮಕ್ಕಳಿಗೆ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆ ನೀಡಲು ಡಿಸಿಜಿಐ(ಭಾರತೀಯ ಔಷಧೀಯ ನಿಯಂತ್ರಣ ಪ್ರಾಧಿಕಾರ) ಮಂಗಳವಾರ ಒಪ್ಪಿಗೆ ನೀಡಿರುವುದಾಗಿ ವರದಿ ತಿಳಿಸಿದೆ.

ಎರಡು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಲಸಿಕೆಯ ಪರೀಕ್ಷೆ ನಡೆದಿದ್ದು, ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆಯ ಕ್ಲಿನಿಕಲ್ ಪ್ರಯೋಗಕ್ಕೆ ಸಂಬಂಧಿಸಿದ ದತ್ತಾಂಶವನ್ನು ಭಾರತ್ ಬಯೋಟೆಕ್ ಕಂಪನಿ ಡಿಸಿಜಿಐಗೆ ಸಲ್ಲಿಸಿತ್ತು. ಐಸಿಎಂಆರ್ ಮತ್ತು ಹೈದರಾಬಾದ್ ಮೂಲದ ಲಸಿಕೆ ತಯಾರಕ ಭಾರತ್ ಬಯೋಟೆಕ್ ಕೊವಾಕ್ಸಿನ್ ಅನ್ನು ಅಭಿವೃದ್ಧಿಪಡಿಸಿದ್ದು, ಭಾರತದ ಮೊದಲ ಸ್ಥಳೀಯ ಕೋವಿಡ್ -19 ಲಸಿಕೆ ಆಗಿದೆ.

2ರಿಂದ 18 ವರ್ಷದ ಮಕ್ಕಳಿಗೆ ಸ್ವದೇಶಿ ಕೋವಿಡ್ ಲಸಿಕೆಯಾದ ಕೋವ್ಯಾಕ್ಸಿನ್ ನೀಡುವ ಬಗ್ಗೆ ಒಂದು ವಾರದ ಹಿಂದೆ ಕ್ಲಿನಿಕಲ್ ಪ್ರಯೋಗದ ವರದಿಯನ್ನು ಡಿಸಿಜಿಐಗೆ ಸಲ್ಲಿಸಲಾಗಿತ್ತು. ಈ ವರದಿ 1, 2 ಮತ್ತು 3ನೇ ಹಂತದ ಕ್ಲಿನಿಕಲ್ ಪರೀಕ್ಷೆಯ ವಿವರ, ಫಲಿತಾಂಶವನ್ನು ಒಳಗೊಂಡಿತ್ತು. ಸೆ. 21ರಂದು ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡುವ 3ನೇ ಹಂತದ ಪ್ರಯೋಗ ಪೂರ್ಣಗೊಂಡಿತ್ತು. ಒಟ್ಟು 1,000 ಮಕ್ಕಳ ಮೇಲೆ ಪ್ರಯೋಗ ನಡೆಸಲಾಗಿತ್ತು.

ವಿವರವಾದ ಚರ್ಚೆಯ ನಂತರ 2 ರಿಂದ 2 ರಿಂದ 18ರ ವಯೋಮಾನದವರಿಗೆ ಲಸಿಕೆಯ ಮಾರುಕಟ್ಟೆ ಅನುಮತಿಯನ್ನು ನೀಡಲು ಸಮಿತಿಯು ಶಿಫಾರಸು ಮಾಡಿದೆ ಎನ್ನಲಾಗಿದೆ.

RELATED TOPICS:
English summary :Covaxin for Children

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...