Fri,May03,2024
ಕನ್ನಡ / English

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂಸ್

14 Oct 2021
2965

ಬೆಂಗಳೂರು : ರಾಜ್ಯದ ಮೂರು ಉಷ್ಣ ವಿದ್ಯುತ್ ಸ್ಥಾವರಗಳಿಂದ ಒಟ್ಟಾರೆ 5020 ಮೆ.ವ್ಯಾ ಉತ್ಪಾದನೆಯಾಗುತ್ತಿದ್ದು ಕಲ್ಲಿದ್ದಲ ಕೊರತೆಯಿಂದ ವಿದ್ಯುತ್ ಉತ್ಪಾದನೆಗೆ ಯಾವುದೇ ಅಡಚಣೆ ಆಗಿಲ್ಲ ಎಂದು ಇಂಧನ ಸಚಿವ ವಿ ಸುನೀಲ್‌ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸದ್ಯ ಕೋಲ್‌ ಇಂಡಿಯಾ ಲಿಮಿಟೆಡ್ ಹಾಗೂ ಎಸ್ ಸಿ ಸಿ‌ಎಲ್‌ನಿಂದ ದಿನಂಪ್ರತಿ 12-13 ರೇಕ್‌ ಕಲ್ಲಿದ್ದಲು ಪೂರೈಕೆ‌ ಆಗುತ್ತಿದ್ದು ಬೇಡಿಕೆ ಪೂರೈಸಲು ಸಾಧ್ಯವಾಗಿದೆ ಹಾಗೂ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲ ಕೊರತೆಯಿಂದಾಗಿ ಯಾವುದೇ ಸಮಸ್ಯೆಯಾಗಿಲ್ಲ ಎಂದು ಇಂಧನ ಪತ್ರಿಕಾ ಪ್ರಕಟಣೆಯಲ್ಲಿ‌ ತಿಳಿಸಿದ್ದಾರೆ.

ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟಿಡ್ ನಿಂದ ಮೂರು ವಿದ್ಯುತ್ ಸ್ಥಾವರಗಳಾದ ರಾಯಚೂರು, ಬಳ್ಳಾರಿ ಹಾಗೂ ಯರಮರಸ್ ಉಷ್ಣ ವಿದ್ಯುತ್ ಸ್ಥಾವರಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ ರಾಯಚೂರು ಉಷ್ಣ ವಿದ್ಯುತ್ ಸ್ಥಾವರದಲ್ಲಿ 8 ಘಟಕಗಳಿದ್ದು‌ 1720 ಮೆ.ವ್ಯಾ ವಿದ್ಯುತ್ ಉತ್ಪಾದನೆಯ ಶಕ್ತಿ ಹೊಂದಿದೆ. ಬಳ್ಳಾರಿ ಸ್ಥಾವರದ 3 ಘಟಕಗಳಲ್ಲಿ 1700 ಮೆ.ವ್ಯಾ ವಿದ್ಯುತ್ ಉತ್ಪಾದನೆಗೆ ಅವಕಾಶವಿದೆ. ಇನ್ನು ಯರಮರಸ್ ಸ್ಥಾವರದ 2 ಘಟಕಗಳು 1600 ಮೆ.ವ್ಯಾ ವಿದ್ಯುತ್ ಉತ್ಪಾದನಾ ಶಕ್ತಿ ಹೊಂದಿದೆ.

ಒಟ್ಟಾರೆ 3 ಸ್ಥಾವರಗಳ 13 ಘಟಕಗಳ ಒಟ್ಟು ಉತ್ಪಾದನೆ 5020 ಮೆ.ವ್ಯಾ ಗಳಾಗಿದ್ದು. ಈ 13 ಘಟಕಗಳ ಪೈಕಿ 8 ಘಟಕಗಳು ಕಾರ್ಯಾಚರಿಸುತ್ತಿದ್ದು, ಇನ್ನುಳಿದ 5 ಘಟಕಗಳು ಬೇಡಿಕೆ ಕಡಿಮೆ ಇರುವ ಕಾರಣದಿಂದ ಸ್ಥಬ್ಧವಾಗಿದೆ ಎಂದಿದ್ದಾರೆ.

ಇನ್ನುಳಿದಂತೆ ರಾಜ್ಯದ ಒಟ್ಟಾರೆ ಬೇಡಿಕೆ‌ ಹಾಗೂ ಪೂರೈಕೆಯ ಅಂಕಿ ಅಂಶದಂತೆ, ಬೇಡಿಕೆಗಿಂತ ಪೂರೈಕೆ ಹೆಚ್ಚಿದ್ದು ರಾಜ್ಯದ ಜನರು ವಿದ್ಯುತ್ ಪೂರೈಕೆಯ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಇಂಧನ ಸಚಿವ ವಿ ಸುನೀಲ್‌ ಕುಮಾರ್ ಸ್ಪಷ್ಟಪಡಿಸಿದ್ದಾರೆ.

RELATED TOPICS:
English summary :Bangalore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...