Sat,May11,2024
ಕನ್ನಡ / English

ಅನಂತಕುಮಾರ ಹೆಗಡೆ ಕುರಿತು ಅಪಪ್ರಚಾರ : ದೂರು ದಾಖಲು

11 Mar 2018
836

ಶಿರಸಿ : ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರ ಕುರಿತು ವ್ಯಾಪಕ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಚಿವರ ಆಪ್ತ ಸಹಾಯಕ ಸುರೇಶ ಶೆಟ್ಟಿ ಶಿರಸಿಯ ಮಾರ್ಕೇಟ್ ಯಾರ್ಡ್ ಪೋಲಿಸ್ ಠಾಣೆಯಲ್ಲಿ ರವಿವಾರ ದೂರು ದಾಖಲಿಸಿದ್ದಾರೆ.
ಸುರೇಶ ಶೆಟ್ಟಿ ಪೋಲಿಸ್ ಠಾಣೆಯಲ್ಲಿ ದಾಖಲಿಸಿದ ತಮ್ಮ ದೂರಿನಲ್ಲಿ, ಪ್ರಜಾಕೀಯ ಎಂಬ ಹೆಸರಿನ ಫೇಸ್‍ಬುಕ್ ಖಾತೆಯಿಂದ, ಬಿಜೆಪಿ ಅಧಿಕಾರಕ್ಕೆ ಬಂದರೆ ಕೆಂಪೇಗೌಡ ಪ್ರತಿಮೆಯನ್ನು ಉರುಳಿಸಿ ಶಿವಾಜಿ ಪ್ರತಿಮೆಯನ್ನು ಸ್ಥಾಪಿಸುತ್ತೇವೆ ಎಂದು ಅನಂತಕುಮಾರ ಹೆಗಡೆ ಹೇಳಿಕೆ ನೀಡಿದ್ದಾರೆ, ಎಂದು ಪೋಸ್ಟ್ ಮಾಡಲಾಗಿದೆ ಹಾಗೂ ಈ ಪೋಸ್ಟ್ ಗಳನ್ನು ಇತರರಿಗೂ ಸಹ ಕಳುಹಿಸಲಾಗಿದೆ. ಈ ರೀತಿಯ ಅಪಪ್ರಚಾರದಿಂದ ಕೇಂದ್ರ ಸಚಿವರ ಬಗ್ಗೆ ಕನ್ನಡಿಗರಿಗೆ ದ್ವೇಷ ಹುಟ್ಟಿಸಿ, ಸಮಾಜದಲ್ಲಿ ಶಾಂತಿಭಂಗಮಾಡುವ ದುರುದ್ದೇಶದಿಂದ ಈ ಸುಳ್ಳು ಸುದ್ದಿಯನ್ನು ಹರಿಬಿಡಲಾಗಿದೆ, ಎಂದು ದೂರಿದ್ದಾರೆ. ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ನಾಡಪ್ರಭು ಕೆಂಪೆಗೌಡರ ಬಗ್ಗೆ ಎಲ್ಲಿಯೂ ಈ ರೀತಿಯ ಹೇಳಿಕೆಯನ್ನು ನೀಡಿಲ್ಲ. ಚುನಾವಣೆಯ ಸಂದರ್ಭದಲ್ಲಿ ಈ ರೀತಿಯ ಸಂದೇಶಗಳನ್ನು ಹರಿಯಬಿಟ್ಟಿರುವದರ ಹಿಂದೆ ಕಾಣದ ಕೈಗಳು ಕೆಲಸಮಾಡಿದೆ, ಎಂದು ಸುರೇಶ ಶೆಟ್ಟಿ ದೂರಿನಲ್ಲಿ ಹೇಳಿದ್ದಾರೆ.

ಇದಲ್ಲದೆ ಮಂಜು ಪವರ್ ಸ್ಟಾರ್ ಎಂಬಾತನು ಈ ಫೋಸ್ಟ್ ಗೆ, ಅನಂತಕುಮಾರ ಹೆಗಡೆ ಬೆಂಗಳೂರಿಗೆ ಬರುವಂತಿಲ್ಲ, ಎಂದು ಬೆದರಿಕೆಯ ಕಮೆಂಟ್ ಹಾಕಿದ್ದಾನೆ. ನರೇಂದ್ರ ಯಾದವ್ ತಿಮ್ಮನಹಳ್ಳಿ ಎಂಬ ಫೇಸ್‍ಬುಕ್ ಖಾತೆಯಿಂದ ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರನ್ನುದ್ದೇಶಿಸಿ, ನಿನಗೆ ತಾಕತ್ತು ಇದ್ದರೆ ಕೆಂಪೆಗೌಡರ ಪ್ರತಿಮೆ ಟಚ್ ಮಾಡೋ ನೋಡೋಣ, ಎಂದು ಬೆದರಿಕೆ ಹಾಕಲಾಗಿದೆ ಎಂದು ಶೆಟ್ಟಿ ದೂರಿದ್ದಾರೆ.

ಚುನಾವಣೆಯ ಈ ಸಂದರ್ಭದಲ್ಲಿ ಈ ರೀತಿಯ ಆಕ್ಷೇಪಾರ್ಹ ಸಂದೇಶಗಳನ್ನು ಹರಿಯಬಿಟ್ಟಿರುವುದು ಸಮಾಜದಲ್ಲಿ ಗೊಂದಲ ನಿರ್ಮಿಸಿ ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡ ಭಾವನೆಯನ್ನು ಕೆರಳಿಸಿ, ಜಾತಿ ಗಲಭೆಗಳನ್ನು ಸೃಷ್ಟಿಸಲು ಪಿತೂರಿ ಮಾಡುತ್ತಿರುವುದು ಸ್ಪಷ್ಟ. ಅಲ್ಲದೇ ಕೇಂದ್ರ ಸಚಿವರ ಹೆಸರನ್ನು ತೇಜೋವದೆ ಮಾಡುವ ದುರುದ್ದೇಶದಿಂದ ಈ ಸುಳ್ಳು ಸಂದೇಶಗಳನ್ನು ಹಾಕಲಾಗಿದೆ. ಆದ್ದರಿಂದ ಸುಳ್ಳು ಸಂದೇಶ ಹರಡುತ್ತಿರುವವರ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸುರೇಶ ಶೆಟ್ಟಿ ತಮ್ಮ ದೂರಿನಲ್ಲಿ ವಿನಂತಿಸಿದ್ದಾರೆ.

English summary :False publicity on AnantaKumar Hegde : complaint lodged

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...