Thu,May09,2024
ಕನ್ನಡ / English

ವಿಷ ಆಹಾರ ಸೇವಿಸಿ ನಾಲ್ವರ ಸಾವು ಪ್ರಕರಣ- ಮುದ್ದೆಯಲ್ಲಿ ವಿಷ ಹಾಕಿದ ಪುತ್ರಿ | ಜನತಾ ನ್ಯೂಸ್

18 Oct 2021
2417

ಚಿತ್ರದುರ್ಗ : ಒಂದೇ ಮನೆಯಲ್ಲಿ ವಿಷ ಆಹಾರ ಸೇವಿಸಿ ನಾಲ್ವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಮನೆಯ ಮಗಳೇ ಊಟದಲ್ಲಿ ವಿಷ ಬೆರೆಸಿ ಕೊಲೆ ಮಾಡಿರುವ ಸತ್ಯ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಜಿಲ್ಲೆಯ ಇಸಾಮುದ್ರ ಗ್ರಾಮದಲ್ಲಿ ಜುಲೈ 12 ರಂದು ಈ ಘಟನೆ ನಡೆದಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‍ಎಸ್‍ಎಲ್) ವರದಿ ಮೂಲಕ ಮುದ್ದೆಯಲ್ಲಿ ವಿಷ ಬೆರಸಿರುವ ಸತ್ಯ ಬಯಲಾಗಿದೆ.

ಬಾಲಕಿಯನ್ನು, ಕುಟುಂಬದ ತಂದೆ, ತಾಯಿ ಹಾಗೂ ಇತರೆ ಸದಸ್ಯರುಗಳು ಬಾಲಕಿ ಬಗ್ಗೆ ತಾತ್ಸಾರ ಮನೋಭಾವನೆಯನ್ನು ತಾಳಿದ್ದರು. ಅಲ್ಲದೆ ಶಾಲೆಯನ್ನು ಬಿಡಿಸಿ ಕೂಲಿ ಕೆಲಸಕ್ಕೆ ಕಳುಹಿಸುತ್ತಿದ್ದರು. ಪೋಷಕರು ಹಾಗೂ ಇತರೆ ಕುಟುಂಬ ಸದಸ್ಯರು ವಿನಾಕಾರಣ ಬೈಯುವುದು, ಕೂಲಿ ಕೆಲಸಕ್ಕೆ ಕಳುಹಿಸುತ್ತಿರುವುದು ಬಾಲಕಿಗೆ ದ್ವೇಷ ಹುಟ್ಟಿಸಿತ್ತು.

ಉಳಿದ ಮಕ್ಕಳಾದ ರಮ್ಯಾ ಹಾಗೂ ರಾಹುಲ್‌ರನ್ನು ಪೋಷಕರು ಪ್ರೀತಿಯಿಂದ ಕಾಣುತ್ತಿದ್ದು, ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕಿಯನ್ನು ತಿರಸ್ಕಾರ ಮನೋಭಾವದಿಂದ ಕಾಣುತ್ತಿದ್ದರು.

ರಾತ್ರಿ ಮುದ್ದೆ ಹಾಗೂ ಹೆಸರುಕಾಳು ಸಾಂಬರ್ ಸೇವನೆ ಬಳಿಕ ಅಸ್ವಸ್ಥರಾಗಿದ್ದರು. ಬಾಲಕಿ ಮಾತ್ರ ಅನ್ನ ಸಾಂಬಾರು ಊಟ ಮಾಡಿದ್ದಳು. ಬಾಲಕಿ ಬಿಟ್ಟು ಅಸ್ವಸ್ಥರಾದವರನ್ನು ಕೂಡಲೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಿಸದೇ ತಿಪ್ಪಾನಾಯ್ಕ್ (46), ಪತ್ನಿ ಸುಧಾಬಾಯಿ (43) ಹಾಗೂ ವೃದ್ಧೆ ಗುಂಡಿ ಬಾಯಿ (75) ಮೃತಪಟ್ಟಿದ್ದರು. ರಮ್ಯಾ (16) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು. ವಿಷಾಹಾರ ಸೇವಿಸಿ ರಾಹುಲ್ (5), ದಾವಣಗೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರಿಂದ ಚೇತರಿಸಿಕೊಂಡಿದ್ದನು.

ಹೊಟ್ಟೆ ನೋವಿನ ಕಾರಣ ಅನ್ನ, ಸಾರು ಮಾತ್ರ ಸೇವಿಸಿರುವುದಾಗಿ ಬಾಲಕಿ ತಿಳಿಸಿದ್ದರಿಂದ ಅನುಮಾನಗೊಂಡ ಪೊಲೀಸರು ಈ ಕುರಿತಂತೆ ವಿಚಾರಣೆ ನಡೆಸಿದಾಗ, ಬಾಲಕಿಯೇ ವಿಷಬೆರೆಸಿ ನಾಲ್ವರನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಹೀಗಾಗಿ ಬಾಲಕಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

RELATED TOPICS:
English summary :Chitradurga

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...