Tue,May07,2024
ಕನ್ನಡ / English

9 ವರ್ಷಗಳ ಬಳಿಕ ನಕ್ಸಲ್​ ನಂಟು ಆರೋಪದಿಂದ ಮುಕ್ತ, ತಂದೆ-ಮಗ ನಿರ್ದೋಷಿ ಎಂದ ಕೋರ್ಟ್ | ಜನತಾ ನ್ಯೂಸ್

21 Oct 2021
2736

ಮಂಗಳೂರು : ನಕ್ಸಲ್ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರು ನಿರ್ದೋಷಿಗಳು ಎಂದು ಗುರುವಾರ ಮೂರನೇ ಹೆಚ್ಚುವರಿ ನ್ಯಾಯಾಲಯ ತೀರ್ಪು ನೀಡಿದೆ.

ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿ ವಿಠಲ ಮಲೆಕುಡಿಯ, ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದ ಈ ಆರೋಪಕ್ಕೆ ಒಳಗಾಗಿದ್ದರು.

ಬೆಳ್ತಂಗಡಿಯ ಕುತ್ಲೂರು ನಿವಾಸಿಯಾಗಿದ್ದ ವಿಠಲ್ ಮಲೆಕುಡಿಯ ಅವರನ್ನು 2012 ಮಾರ್ಚ್ 3 ರಂದು ನಕ್ಸಲ್ ನಿಗ್ರಹ ಪಡೆ ಬಂಧಿಸಿತ್ತು. ಸುಮಾರು ನಾಲ್ಕು ತಿಂಗಳು ಜೈಲು ಶಿಕ್ಷೆ ಅನುಭವಿಸಿದ ನಂತರ, ವಿಠಲ್ ಗೆ ಜಾಮೀನು ನೀಡಲಾಗಿತ್ತು .

2015 ರಲ್ಲಿ ಪೊಲೀಸರು ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಸೆಷನ್ಸ್ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದರು. ನಕ್ಸಲ್ ನಿಗ್ರಹ ಪಡೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ ವಿಠಲ್ 6 ನೇ ಆರೋಪಿಯಾಗಿದ್ದು, ತಂದೆ 7 ನೇ ಆರೋಪಿಯಾಗಿದ್ದರು.

ಈ ಪ್ರಕರಣ ದೇಶಾದ್ಯಂತ ಗಮನ ಸೆಳೆದಿದ್ದಲ್ಲದೆ ಭಾರಿ ಚರ್ಚೆ ಹುಟ್ಟು ಹಾಕಿತ್ತು. ವಿಠಲರ ಬಂಧನವಾದಾಗ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಸೇರಿ ಕಮ್ಯುನಿಸ್ಟ್ ಪಕ್ಷದ ರಾಷ್ಟ್ರೀಯ ನಾಯಕರು ಮಂಗಳೂರು ಜೈಲಿಗೆ ಭೇಟಿ ನೀಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ. ಜಕಾತಿ ಈ ಆದೇಶ ಪ್ರಕಟಿಸಿದರು. ಒಂಬತ್ತು ವರ್ಷಗಳಿಂದ ನಕ್ಸಲ್​ ನಂಟು ಆರೋಪ ಎದುರಿಸುತ್ತಿದ್ದ ಇಬ್ಬರೂ ಈ ಮೂಲಕ ಅದರಿಂದ ಪಾರಾದಂತಾಗಿದೆ.

RELATED TOPICS:
English summary :Mangalore

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...