Sat,May11,2024
ಕನ್ನಡ / English

ಬುರುಡೆ ಬೊಮ್ಮಾಯಿ..ಕೊರೊನಾ ವೇಳೆ ಜನ ಬದುಕಿದ್ದು ಅನ್ನಭಾಗ್ಯದಿಂದ ನಿಮ್ಮಿಂದ ಅಲ್ಲ! | ಜನತಾ ನ್ಯೂಸ್

23 Oct 2021
4009

ಬೆಂಗಳೂರು : ಬುರುಡೆ ರಾಮಯ್ಯ ಎಂದು ಟ್ವೀಟ್ ಮಾಡಿ ರಾಜ್ಯದ ಪ್ರತಿಯೊಬ್ಬ ಪ್ರಜೆಯ ತಲೆಯ ಮೇಲೂ 44 ಸಾವಿರಕ್ಕೂ ಅಧಿಕ ಸಾಲದ ಹೊರೆ ಹೇರಿದ್ದೀರಿ ಎಂದು ಟ್ವೀಟ್ ಮಾಡಿದ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಅವರು ಶನಿವಾರ "ಬುರುಡೆ ಬೊಮ್ಮಾಯಿ” ಎನ್ನುವ ಟ್ಯಾಗ್ ಬಳಸಿಕೊಂಡು ತಿರುಗೇಟು ನೀಡಿದ್ದಾರೆ.

ನಮ್ಮ ಸರ್ಕಾರದ ಯಾವ ಭಾಗ್ಯ ಯಾರಿಗೆ ಮುಟ್ಟಿದೆ ಎಂಬ ಲೆಕ್ಕಬೇಕಾ ಸಿಎಂ ಬೊಮ್ಮಾಯಿ ಅವರೇ? ಅಕ್ಕಿ ಪಡೆದ 1.10 ಕೋಟಿ ಕುಟುಂಬಗಳ 4 ಕೋಟಿ ಬಡವರ ಮನೆಗೆ ಹೋಗಿ ಕೇಳಿ ಉತ್ತರ ಕೊಟ್ಟಾರು. ಕೊರೊನಾ ಸೋಂಕಿನಿಂದ ಉದ್ಯೋಗ ಕಳೆದು ಕೊಂಡ ಜನ ಬದುಕಿದ್ದು ಅನ್ನಭಾಗ್ಯ ಅಕ್ಕಿಯಿಂದ, ಇಂದಿರಾ ಕ್ಯಾಂಟೀನ್​ನಿಂದ.

ಪ್ರಧಾನಿ ಮೋದಿ ಅವರು ಹೇಳಿದಂತೆ ನೀವು ಬಡಿದ ತಟ್ಟೆ, ಹಚ್ಚಿದ ದೀಪದಿಂದ ಅಲ್ಲ. ನೀವು ನಿರ್ದಯಿಗಳು ನಾವು ಕೊಟ್ಟ ಅಕ್ಕಿಯನ್ನು ಕಸಿದುಕೊಳ್ಳಲು ಹೊರಟಿದ್ದೀರಿ ಎಂದು ಟ್ವೀಟ್​ ಮೂಲಕ ಸಿಎಂ, ಪಿಎಂ ಇಬ್ಬರಿಗೆ ಸಿದ್ದರಾಮಯ್ಯ ಕುಟುಕಿದ್ದಾರೆ.

ಬಿಜೆಪಿ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ಈಗಿನ ಸಾಲ ರೂ.4,57,899 ಕೋಟಿ. 2020-21 ರಲ್ಲಿಯೇ ಮಾಡಿರುವ ಸಾಲ ರೂ. 69,000 ಕೋಟಿ.ಕಳೆದ 4 ವರ್ಷಗಳಲ್ಲಿ ರಾಜ್ಯ ಸರ್ಕಾರ ರೂ.2,14,479 ಕೋಟಿ ಹೆಚ್ಚು ಸಾಲ‌ಮಾಡಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾದ 3 ವರ್ಷಗಳಲ್ಲಿ ಸುಮಾರು ರೂ.1,90,000 ಕೋಟಿ ಸಾಲ ಮಾಡಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿನ ಸಾಲದ ಪ್ರಮಾಣ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಒಟ್ಟಾರೆ ಶೇ. 94.18 ರಷ್ಟು ಏರಿಕೆಯಾಗಿತ್ತು. ನಮ್ಮ ಸರ್ಕಾರದ ಅವಧಿಯಲ್ಲಿ 2013-18 ರವರೆಗೆ ಏರಿಕೆಯಾಗಿದ್ದು ಶೇಕಡಾ 78 ರಷ್ಟು ಮಾತ್ರ.

ಕಳೆದ ಎರಡೂಕಾಲು ವರ್ಷಗಳ ರಾಜ್ಯ ಬಿಜೆಪಿ ಸರ್ಕಾರದ ಮತ್ತು ಏಳು ವರ್ಷಗಳ ನರೇಂದ್ರ ಮೋದಿ ಸರ್ಕಾರದ ವೈಫಲ್ಯಗಳು ಜನರನ್ನು ಭ್ರಮನಿರಸನಗೊಳಿಸಿದೆ. 2014 ರಲ್ಲಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ನೀಡಿದ್ದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ.

ಲಾಕ್ ಡೌನ್ ಇದ್ದಾಗ ಬಡವರಿಗೆ ಉಚಿತವಾಗಿ 10 ಕೆಜಿ ಅಕ್ಕಿ ಕೊಡಿ, ಪ್ರತಿ BPL ಕುಟುಂಬಕ್ಕೆ 10 ಸಾವಿರ ಧನಸಹಾಯ ಮಾಡಿ ಎಂದು ಸದನದಲ್ಲಿ ಒತ್ತಾಯಿಸಿದರೆ, ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂದವರು ನಿಮ್ಮವರೇ ಅಲ್ಲವೇ ಬೊಮ್ಮಾಯಿ ಅವರೆ. ಜನರ ಕಷ್ಟಕಾಲದಲ್ಲಿ ನೆರವಿಗೆ ಧಾವಿಸದ ನಿಮ್ಮ ಸರ್ಕಾರ ಇದ್ದರೆಷ್ಟು ಹೋದರೆಷ್ಟು?

ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಕೊಡ್ತೀವಿ ಎಂದು ಹೇಳಿ ಇವತ್ತಿನವರೆಗೆ ನಯಾಪೈಸೆ ಪರಿಹಾರ ನೀಡಿಲ್ಲ. ನಿಮ್ಮ ಸರ್ಕಾರದ ನಿಷ್ಕ್ರಿಯತೆಯಿಂದಾಗಿ ತಂದೆ, ತಾಯಿ ಕುಟುಂಬವನ್ನು ಕಳೆದುಕೊಂಡ ಸಾವಿರಾರು ಮಕ್ಕಳು ಅನಾಥವಾಗಿವೆ. ಈ ಅನಾಥ ಕಂದಮ್ಮಗಳ ಭವಿಷ್ಯಕ್ಕೆ ಯಾರು ದಿಕ್ಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Siddaramaiah

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...