Tue,May21,2024
ಕನ್ನಡ / English

ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ | ಜನತಾ ನ್ಯೂಸ್

25 Oct 2021
2536

ಬೆಂಗಳೂರು : ಸಮಾಜವನ್ನು ಜಾತಿ ಆಧಾರದ ಮೇಲೆ ಒಡೆದು ರಾಜಕೀಯ ಲಾಭ ಪಡೆಯುವುದರಲ್ಲಿ ಸಿದ್ದರಾಮಯ್ಯ ಅವರಿಗಿಂತ ನಿಷ್ಣಾತರು ಬೇರೆ ಇಲ್ಲ. ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲೂ ಜಾತಿ ಹುಡುಕಿದವರು ನೀವಲ್ಲವೇ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದೆ.

ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ. ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದೆ.

ಸಮಾಜವನ್ನು ಜಾತಿ ಆಧಾರದ ಮೇಲೆ ಒಡೆದು ರಾಜಕೀಯ ಲಾಭ ಪಡೆಯುವುದರಲ್ಲಿ ಸಿದ್ದರಾಮಯ್ಯ ಅವರಿಗಿಂತ ನಿಷ್ಣಾತರು ಬೇರೆ ಇಲ್ಲ. ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯ ಎಂದು ಬಿಜೆಪಿ ಪ್ರಶ್ನಿಸಿದೆ.

ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ. ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪ ಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವೇನಿತ್ತು? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ ಎಂದು ಟೀಕಾಪ್ರಹಾರ ನಡೆಸಿದೆ.

ತಿಲಕ ಕಂಡರೆ ಭಯ ಎನ್ನುವ ಮೂಲಕ ಸಿದ್ದರಾಮಯ್ಯ ಅವರು ಹಿಂದೂ ಧರ್ಮದ ಅವಹೇಳನ ಮಾಡಿದರು. ಆಗ ಅವರಿಗೆ ಅಲ್ಪಸಂಖ್ಯಾತರ ಓಲೈಕೆ ಮುಖ್ಯವಾಗಿತ್ತು. ಅದಕ್ಕಾಗಿ ಟಿಪ್ಪು ಜಯಂತಿ ನಡೆಸಿದರು. ಸಿದ್ದರಾಮಯ್ಯನವರೇ, ಇದು ಸಮಾಜ ವಿಭಜನೆಯಲ್ಲವೇ?. ಜಾತಿ, ಕೋಮು ರಾಜಕೀಯವನ್ನು ಮಾಧ್ಯಮ ರಂಗದಲ್ಲಿಯೂ ತುರುಕಿದ ಹೆಗ್ಗಳಿಕೆ ಸಿದ್ದರಾಮಯ್ಯ ಅವರದ್ದಾಗಿದೆ ಎಂದು ಕಿಡಿಕಾರಿದೆ.

RELATED TOPICS:
English summary :BJP Karnataka

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ
ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...