Fri,May03,2024
ಕನ್ನಡ / English

ಸರದಾರ್ ಪಟೇಲ್ ರನ್ನು ಜಿನ್ನಾ ಅವರೊಂದಿಗೆ ಹೋಲಿಸುತ್ತಿದ್ದ ಅಖಿಲೇಶ್ ಕ್ಷಮೆಯಾಚಿಸಬೇಕು - ಸಿಎಂ ಯೋಗಿ | ಜನತಾ ನ್ಯೂಸ್

01 Nov 2021
2188

ಲಕ್ನೋ : ದೇಶವನ್ನು ಒಗ್ಗೂಡಿಸಲು ಶ್ರಮಿಸಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಹಿಂದೂಸ್ಥಾನವನ್ನು ಒಡೆದ ಪಾಕಿಸ್ತಾನದ ಸಂಸ್ಥಾಪಕ ಮುಹಮ್ಮದ್ ಅಲಿ ಜಿನ್ನಾ ಅವರೊಂದಿಗೆ ಹೋಲಿಸಿದ ಸಮಾಜವಾದಿ ಪಕ್ಷದ(ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು, ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಹೇಳಿದ್ದಾರೆ.

ನಿನ್ನೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಹೇಳಿಕೆಯನ್ನು ಕೇಳುತ್ತಿದ್ದೆ. ದೇಶವನ್ನು ಒಡೆದ ಜಿನ್ನಾ ಅವರನ್ನು, ದೇಶವನ್ನು ಒಗ್ಗೂಡಿಸಿದ ಸರದಾರ್ ವಲ್ಲಭಭಾಯಿ ಪಟೇಲ್ ಅವರೊಂದಿಗೆ ಹೋಲಿಸುತ್ತಿದ್ದರು. ಇದು ಅತ್ಯಂತ ನಾಚಿಕೆಗೇಡಿನ ಸಂಗತಿ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಭಾರತದ ಏಕತೆ ಮತ್ತು ಸಮಗ್ರತೆಯ ಅಡಿಪಾಯವನ್ನು ಹಾಕಿದರು ಮತ್ತು ಅದರ ಸೃಷ್ಟಿಕರ್ತರು", ಎಂದು ಆದಿತ್ಯನಾಥ್ ಇಂದು ಇಲ್ಲಿ ಜನರನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದರು.

ಜಿನ್ನಾರನ್ನು ವೈಭವೀಕರಿಸಲು ಪ್ರಯತ್ನಿಸುತ್ತಿರುವ ಅವರ(ಅಖಿಲೇಶ್) "ವಿಭಜಕ ಮನಸ್ಥಿತಿ" ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ, ಎಂದು ಅವರು ಯಾದವ್ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದರು.

"ಸರ್ದಾರ್ ಪಟೇಲ್ ಅವರೊಂದಿಗೆ ಜಿನ್ನಾ ಸಮೀಕರಿಸುವ ಮೂಲಕ ಜಿನ್ನಾರನ್ನು ವೈಭವೀಕರಿಸಲು ಪ್ರಯತ್ನಿಸುವ ಅಖಿಲೇಶ್ ಅವರ ವಿಭಜಕ ಮನಸ್ಥಿತಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಇದು ತಾಲಿಬಾನಿ ಮನಸ್ಥಿತಿಯಾಗಿದೆ. ವಿಭಜನೆಯನ್ನು ನಂಬುತ್ತದೆ. ಎಸ್‌ಪಿ ರಾಷ್ಟ್ರೀಯ ಅಧ್ಯಕ್ಷರು ಇದಕ್ಕಾಗಿ ಕ್ಷಮೆಯಾಚಿಸಬೇಕು", ಎಂದು ಆದಿತ್ಯನಾಥ್ ಹೇಳಿದ್ದಾರೆ.

"ಇಡೀ ಸಮಾಜ ಮತ್ತು ರಾಜ್ಯ ಇದನ್ನು ಖಂಡಿಸಬೇಕು. ಎಸ್‌ಪಿ ರಾಷ್ಟ್ರೀಯ ಅಧ್ಯಕ್ಷರು ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು. ಭಾರತದ ಅಖಂಡತೆಯ ಸೃಷ್ಟಿಕರ್ತನ ಅವಮಾನವನ್ನು ದೇಶವು ಒಪ್ಪಿಕೊಳ್ಳುವುದಿಲ್ಲ" ಎಂದು ಅವರು ಹೇಳಿದರು.

RELATED TOPICS:
English summary :Akhilesh should apologize for comparing Sardar Patel with Jinnah

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...