Mon,May06,2024
ಕನ್ನಡ / English

ಕೇದಾರನಾಥದಲ್ಲಿ ಅನಾವರಣಗೊಂಡ ಆದಿ ಶಂಕರಾಚಾರ್ಯರ ಪ್ರತಿಮೆಗೂ ಕನ್ನಡಕ್ಕಿರುವ ನಂಟು | ಜನತಾ ನ್ಯೂಸ್

05 Nov 2021
1958

ಕೇದಾರನಾಥ್ : ಉತ್ತರಾಖಂಡದ ಕೇದಾರನಾಥದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರು ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ. ಕೇದಾರನಾಥದಲ್ಲಿ ಪ್ರತಿಷ್ಟಾಪಿಸಲಾದ ಈ ಅತಿವಿಶಿಷ್ಟವಾದ ವಿಗ್ರಹವನ್ನು ನಮ್ಮ ರಾಜ್ಯ ಕರ್ನಾಟಕದ ಶಿಲ್ಪಿಗಳು ಕೆತ್ತಿದ್ದು, ನಮ್ಮ ನೆಲದ ಕೃಷ್ಣ ಶಿಲೆಯಲ್ಲಿ ನಿರ್ಮಿಸಲಾಗಿರುವುದು ವಿಶೇಷವಾಗಿದೆ.

ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಕೆತ್ತಿರುವ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಈ ಕುರಿತು ಮಾತನಾಡಿದ್ದು, "ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಕೆತ್ತಿಸಿದ್ದು ನನಗೆ ಒಂದು ಸೌಭಾಗ್ಯ. ಪ್ರಧಾನಿ ಮೋದಿಯವರು ಈ ಪ್ರತಿಮೆಯನ್ನು ಭಾರತದ ಜನತೆಗೆ ಅರ್ಪಿಸಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಪ್ರತಿನಿತ್ಯ 14-15 ಗಂಟೆಗಳ ಕಾಲ 9 ತಿಂಗಳ ಕಾಲ ಈ ಶಿಲ್ಪವನ್ನು ನಿರ್ವಿುಸಿದ್ದೇವೆ", ಎಂದು ಎಏನ್ಐಗೆ ತಿಳಿಸಿದ್ದಾರೆ.

ಆದಿ ಶಂಕರಾಚಾರ್ಯರ ಈ ವಿಗ್ರಹವನ್ನು ಸಿದ್ಧಪಡಿಸುವ ಕಾರ್ಯವು ಸೆಪ್ಟೆಂಬರ್ 2020 ರಲ್ಲಿ ಪ್ರಾರಂಭವಾಯಿತು. ಸುಮಾರು 9 ಕುಶಲಕರ್ಮಿಗಳು ಕಷ್ಟಪಟ್ಟು ಆದಿ ಗುರು ಶಂಕರಾಚಾರ್ಯರ ಈ ರೂಪವನ್ನು ಸಿದ್ಧಪಡಿಸಿದರು. ಸೆಪ್ಟೆಂಬರ್ ನಲ್ಲಿ ಚಿನೂಕ್ ಹೆಲಿಕಾಪ್ಟರ್ ಸಹಾಯದಿಂದ ಮೂರ್ತಿ ಅವರನ್ನು ಉತ್ತರಾಖಂಡಕ್ಕೆ ಕರೆತರಲಾಗಿದೆ ಎನ್ನಲಾಗಿದೆ. ಕಲಾವಿದರ ತಂಡವು ಈ ಪ್ರತಿಮೆಗೆ ವಿಶೇಷವಾದ ಬಂಡೆಯನ್ನು ಆಯ್ಕೆ ಮಾಡಿದೆ. ವಿಶೇಷವೆಂದರೆ 130 ತೂಕದ ಬಂಡೆಯನ್ನು ಕೆತ್ತಿದ ನಂತರ ಅದರ ತೂಕ 35 ಟನ್ ಆಗಿದೆ.

RELATED TOPICS:
English summary :PM Modi unveils Adi Shankaracharya statue specialties

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...