Mon,May06,2024
ಕನ್ನಡ / English

ಕೇದಾರನಾಥದ​ ಶಂಕರಾಚಾರ್ಯರ ಮೂರ್ತಿ ನೋಡಬೇಕೆನಿಸಿದೆ: ಪ್ರಧಾನಿ ಮೋದಿಗೆ ಹೆಚ್​ಡಿ ದೇವೇಗೌಡರಿಂದ ಪತ್ರ | ಜನತಾ ನ್ಯೂಸ್

06 Nov 2021
2501

ಬೆಂಗಳೂರು : ನನಗೆ ನೀವು (ಪ್ರಧಾನ ಮಂತ್ರಿ ನರೇಂದ್ರ ಮೋದಿ) ಕೇದಾರನಾಥದಲ್ಲಿ ಉದ್ಘಾಟಿಸಿದ ಶ್ರೀ ಆದಿಶಂಕರಾಚಾರ್ಯರ ಕಪ್ಪು ಕಲ್ಲಿನ ಸುಂದರ ಮೂರ್ತಿಯನ್ನು ನೋಡಬೇಕು ಅನಿಸಿದೆ.

ಈ ಪವಿತ್ರ ಕ್ಷೇತ್ರವನ್ನು ಪುನರ್​ನಿರ್ಮಾಣ ಮಾಡುವಲ್ಲಿ ನೀವು ಕೈಗೊಂಡ ಕಾರ್ಯಗಳಿಗಾಗಿ ನಾನು ನಿಮಗೆ ಶುಭಾಶಯ ಕೋರುತ್ತೇನೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಪತ್ರದ ಮುಖೇನ ತಿಳಿಸಿದ್ದಾರೆ.

ಪತ್ರದಲ್ಲಿ ಏನಿದೆ?
ಕೇದಾರನಾಥದಲ್ಲಿ ನವೆಂಬರ್ 5 ರಂದು ನೀವು ಅನಾವರಣಗೊಳಿಸಿದ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಕಂಡು ತುಂಬಾ ಸಂತೋಷವಾಗಿದೆ. ನಿಮಗೆ ಇದಕ್ಕಾಗಿ ಧನ್ಯವಾದ ತಿಳಿಸುತ್ತೇನೆ. ನಾನು ಕರ್ನಾಟಕದ ಚಿಕ್ಕಮಗಳೂರಿನ ಶೃಂಗೇರಿ ಶಾರದಾ ಪೀಠದ ಮತ್ತು ಶೃಂಗೇರಿ ಮಠದ ಭಕ್ತನಾಗಿದ್ದೇನೆ. ನಿಮಗೆ ತಿಳಿದಿರುವಂತೆ ಮಹಾನ್ ಸಂತ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟ ನಾಲ್ಕು ಶಕ್ತಿಕೇಂದ್ರಗಳಲ್ಲಿ ಇದೂ ಕೂಡ ಒಂದು. ಶೃಂಗೇರಿ ಮಠವು ಸರ್ವಧರ್ಮ ಸಮನ್ವಯದ ಸಂಕೇತವಾಗಿದೆ.

ಮೈಸೂರು ಒಡೆಯರ್, ಪೇಶ್ವ, ಕೆಳದಿ ಮತ್ತು ತಿರುವಾಂಕೂರು ಆಳ್ವಿಕೆಯು ಮಠದಿಂದ ಲಾಭಾಂಶ ಪಡೆದುಕೊಂಡಿವೆ. ಮೈಸೂರು ರಾಜರಾದ ಹೈದರ್‌ಅಲಿ ಹಾಗೂ ಟಿಪ್ಪು ಸುಲ್ತಾನ್ ಮತ್ತು ಹೈದರಾಬಾದ್​ನ ನಿಜಾಮರು ಕೂಡ ಈ ಧಾರ್ಮಿಕ ಸ್ಥಳದಿಂದ ಒಳಿತನ್ನು ಪಡೆದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಶೃಂಗೇರಿ ಮಠವು ಶತಮಾನಗಳಿಂದ, ವಿವಿಧ ರಾಜರ, ಆಡಳಿತಗಾರರ ಜೊತೆಗೆ ಧಾರ್ಮಿಕ ಕೇಂದ್ರವಾಗಿ ಒಗ್ಗೂಡಿಸಿಕೊಂಡು ನಡೆದಿರುವುದು ವಿಶೇಷ ಎಂದು ದೇವೇಗೌಡ ಶೃಂಗೇರಿ ಮಠದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಒಡೆಯರ್, ಪೇಶ್ವ, ಕೆಳದಿ ಮತ್ತು ತಿರುವಾಂಕೂರು ಆಳ್ವಿಕೆಯು ಮಠದಿಂದ ಲಾಭಾಂಶ ಪಡೆದುಕೊಂಡಿವೆ. ಮೈಸೂರು ರಾಜರಾದ ಹೈದರ್ ಅಲಿ ಹಾಗೂ ಟಿಪ್ಪು ಸುಲ್ತಾನ್ ಮತ್ತು ಹೈದರಾಬಾದ್​ನ ನಿಜಾಮರು ಕೂಡ ಈ ಧಾರ್ಮಿಕ ಸ್ಥಳದಿಂದ ಒಳಿತನ್ನು ಪಡೆದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಧರ್ಮ ಕ್ಷೇತ್ರದ ಮಾರ್ಗದರ್ಶನವು ಇಂದಿನ ದಿನದ ವರೆಗೂ ಮುಂದುವರಿದಿದೆ. ಶೃಂಗೇರಿ ಮಠ, ವೈಯಕ್ತಿಕವಾಗಿ ನನಗೆ ಸಮಾಜದ ಸಾಮರಸ್ಯದ ಕೇಂದ್ರವಾಗಿ ಕಂಡಿದೆ. ಈ ಪವಿತ್ರ ಕ್ಷೇತ್ರದಿಂದ ನನ್ನ ಜೀವನದಲ್ಲಿ ಪಡೆದುಕೊಂಡ ಆಶೀರ್ವಾದಕ್ಕೆ ನಾನು ಚಿರಋಣಿಯಾಗಿ ಇರುತ್ತೇನೆ ಎಂದು ದೇವೇಗೌಡ ತಿಳಿಸಿದ್ದಾರೆ.

RELATED TOPICS:
English summary :H D Devegowda

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...