Tue,May07,2024
ಕನ್ನಡ / English

ಬರೋಬ್ಬರಿ 1.91 ಲಕ್ಷ ರೂ.ಗೆ ಮಾರಾಟವಾದ ಟಗರು! | ಜನತಾ ನ್ಯೂಸ್

07 Nov 2021
2713

ಮಂಡ್ಯ : ಟಗರೊಂದು ಬರೋಬ್ಬರಿ 1.91 ಲಕ್ಷ ರೂಪಾಯಿಗೆ ಮಾರಾಟವಾಗಿರುವ ಘಟನೆ ಸಕ್ಕರೆನಾಡು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದೇವಿಪುರ ಗ್ರಾಮದಲ್ಲಿ ನಡೆದಿದೆ. .

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದೇವಿಪುರ ಗ್ರಾಮದ ರೈತ ಸಣ್ಣಪ್ಪ ಎಂಬುವವರ ಬಂಡೂರು ತಳಿಯ ಟಗರನ್ನು ಮಂಡ್ಯ ತಾಲ್ಲೂಕಿನ ಬಿದರಕೋಟೆಯ ರೈತ ಕೃಷ್ಣೇಗೌಡರಿಗೆ 1.91 ಲಕ್ಷ ರೂ. ಗೆ ಮಾರಾಟ ಮಾಡಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆ ಮದ್ದೂರು ತಾಲ್ಲೂಕಿನ ವಳಗೆರೆಹಳ್ಳಿ ಗ್ರಾಮದ ಸೋಮಣ್ಣ ಅವರ ಬಳಿ ಒಂದು ಲಕ್ಷದ ಐದು ಸಾವಿರ ಈ ಟಗರನ್ನು ಖರೀದಿ ಮಾಡಿದ್ದರು.

ಸಣ್ಣಪ್ಪ ಅವರು ವಿಶೇಷ ಕಾಳಜಿಯಿಂದ ಈ ಟಗರನ್ನು ಸಾಕಿದ್ದರು. ಹೀಗಾಗಿ ಎರಡು ವರ್ಷಗಳ ಬಳಿಕ ಈಗ ಟಗರು ದುಬಾರಿ ಬೆಲೆಗೆ ಮಾರಾಟವಾಗಿದೆ.

ಅತಿ ಹೆಚ್ಚು ಬೆಲೆಗೆ ಮಾರಾಟವಾದ ಹಿನ್ನೆಲೆ ಗ್ರಾಮದಲ್ಲಿ ಟಗರಿಗೆ ವಿಶೇಷ ಪೂಜೆ ಮಾಡಿ, ಕಳಶದ ತಟ್ಟೆ ಹಿಡಿದ ಮಹಿಳೆಯರ ಜೊತೆಗೆ ದೇವಿಪುರ ಗ್ರಾಮ ಸೇರಿದಂತೆ ಸುತ್ತಮುತ್ತಲ ಐದಾರು ಗ್ರಾಮಗಳಲ್ಲಿ ತಮಟೆ, ನಗಾರಿಗಳೊಂದಿಗೆ ವಿಶೇಷ ಟಗರಿನ ಜೊತೆ ಮೆರವಣಿಗೆ ಮಾಡಲಾಯ್ತು.

ಈ ತಳಿ ಟಗರು ಉಳಿದ ಸಾಮಾನ್ಯ ಕುರಿಗಳಿಂದ ವಿಭಿನ್ನವಾಗಿ ಕಂಡು ಬರುತ್ತದೆ. ನೋಡಲು ಅತ್ಯಂತ ಆಕರ್ಷಣೀಯವಾಗಿದ್ದು, ಸಾಮಾನ್ಯ ಕುರಿಗಿಂತ ಗಿಡ್ಡನೆಯ ಕಾಲು, ಉದ್ದವಾದ ದೇಹವನ್ನು ಹೊಂದಿದೆ. ಅಲ್ಲದೆ ಈ ಕುರಿಯ ಮಾಂಸ ಸಾಮಾನ್ಯ ಕುರಿ ಹಾಗೂ ಮೇಕೆಗಳಿಗಿಂತ ಅತ್ಯುತ್ತಮ ರುಚಿ ಇರುತ್ತದೆ ಎನ್ನಲಾಗುತ್ತದೆ.

RELATED TOPICS:
English summary :Mandya

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...