Mon,May06,2024
ಕನ್ನಡ / English

ಪರಿಷ್ಕೃತ ಮತದಾರರ ಕರಡು ಪ್ರತಿ ಪ್ರಕಟ: ಬಿಬಿಎಂಪಿ ಮುಖ್ಯ ಆಯುಕ್ತರು. | ಜನತಾ ನ್ಯೂಸ್

08 Nov 2021
3277

ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2022ರ ಕಾರ್ಯಚಟುವಟಿಕೆಗಳ ಭಾಗವಾಗಿ ದಿನಾಂಕ: 08.11.2021 ರಂದು ಪರಿಷ್ಕೃತ ಮತದಾರರ ಕರಡು ಪ್ರತಿಯನ್ನು ಪಾಲಿಕೆಯ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೊಂದಣಾಧಿಕಾರಿಗಳ ಕಛೇರಿ, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಛೇರಿ ಹಾಗೂ ವಾರ್ಡ್ ಕಛೇರಿಗಳಲ್ಲಿ ಪ್ರಕಟಿಸಲಾಗಿದ್ದು, ಸಾರ್ವಜನಿಕರಿಗೆ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ, ಎಂದು ಮುಖ್ಯ ಆಯುಕ್ತರು ತಿಳಿಸಿದರು.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2022ರ ಕಾರ್ಯಚಟುವಟಿಕೆಗಳ ಭಾಗವಾಗಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿರುವ ಕುರಿತು ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ಪಕ್ಷದ ಪ್ರತನಿಧಿಗಳು, ನಾಗರೀಕರು ಪರಿಷ್ಕೃತ ಮತದಾರರ ಕರಡು ಪ್ರತಿಯನ್ನು ಪರಿಶೀಲಿಸಿ ಏನಾದರು ತಿದ್ದುಪಡಿ ಅಥವಾ ಬದಲಾವಣೆ ಇದ್ದರೆ, ಸೇರ್ಪಡೆ ಮಾಡುವುದಿದ್ದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು, ಎಂದರು.

ವಿಶೇಷ ಆಯುಕ್ತರು(ಆಡಳಿತ) ದಯಾನಂದ್ ರವರು ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ 08-11-2021ರಂದು(ಇಂದಿನಿಂದ) ಪರಿಷ್ಕೃತ ಮತದಾರರ ಕರಡು ಪ್ರತಿಯನ್ನು ಪ್ರಕಟಿಸಲಾಗಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದಲ್ಲಿ, ತಪ್ಪಾಗಿದ್ದಲ್ಲಿ, ತಪ್ಪಾಗಿ ಸೇರ್ಪಡೆಗೊಂಡಿದ್ದಲ್ಲಿ ಹಾಗೂ ಒಂದು ಭಾಗ ಸಂಖ್ಯೆಯಿಂದ ಮತ್ತೊಂದು ಭಾಗದ ಸಂಖ್ಯೆಗೆ ವರ್ಗಾವಣೆಯಾಗಬೇಕಿದ್ದಲ್ಲಿ ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಮತದಾರರು, ಮತದಾರರ ನೊಂದಣಾಧಿಕಾರಿಗಳ ಕಛೇರಿ, ಸಹಾಯಕ ನೊಂದಣಾಧಿಕಾರಿಗಳ ಕಛೇರಿ, ವಾರ್ಡ್ ಕಛೇರಿ ಹಾಗೂ ಬಿ.ಎಲ್.ಓ ರವರುಗಳಿಗೆ ನಮೂನೆ-6, 7, 8 ಮತ್ತು 8ಎ ರಲ್ಲಿ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಭಾರತ ಚುನಾವಣಾ ಆಯೋಗವು ದಿನಾಂಕ: 08.11.2021 ರಿಂದ 08.12.2021 ರವರಗೆ ಅವಕಾಶವನ್ನು ಕಲ್ಪಿಸಿರುತ್ತದೆ. ಸದರಿ ಅವಕಾಶದ ಸದುಪಯೋಗ ಪಡಿಸಿಕೊಳ್ಳಲು ಮನವಿ ಮಾಡಿದರು.

ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು www.ceokarnataka.kar.nic.in ವೆಬ್ಸೈಟ್ ಮತ್ತು ಬಿಬಿಎಂಪಿ www.bbmp.gov.in ವೆಬ್ಸೈಟ್ ನಲ್ಲಿ ಪರಿಶೀಲಿಸುವ ಮೂಲಕ ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು/ಮತದಾರರು ತಮ್ಮ ಮೊಬೈಲ್‌ನಲ್ಲಿ VHA(Voter Helpline App) ಆ್ಯಪ್ ಅಥವಾ NVSP (National Voters Service Portal) ವೆಬ್ಸೈಟ್ ಮೂಲಕ ಖುದ್ದಾಗಿ ಮತದಾರರ ಮಾಹಿತಿಯನ್ನು ಖಾತರಿಪಡಿಸಿಕೊಳ್ಳಬಹುದು, e-EPIC Download ಮಾಡಿಕೊಳ್ಳಬಹುದು ಹಾಗೂ ಇನ್ನಿತರೇ ಮಾಹಿತಿಗಳಾದ ಮತಗಟ್ಟೆ, ಶೇಖಡವಾರು ಮತದಾನದ ಮಾಹಿತಿಯನ್ನು ಪಡೆದುಕೊಳ್ಳಬಹುದು, ಎಂದರು.

ಮತದಾರರಿಗಾಗಿ ವಿಶೇಷ ನೊಂದಣಿ ಅಭಿಯಾನವನ್ನು ನವಂಬರ್ ಮಾಹೆಯ 4 ಭಾನುವಾರಗಳಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ(ದಿನಾಂಕ: 7, 14, 21 ಮತ್ತು 28) ಮತದಾರರ ನೊಂದಣಾಧಿಕಾರಿಗಳ ಕಛೇರಿ ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಛೇರಿ/ವಾರ್ಡ್ ಸಹಾಯಕ ಕೇಂದ್ರ ಮತ್ತು ಮತಗಟ್ಟೆಗಳಲ್ಲಿ ಅರ್ಜಿ ನಮೂನೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ರಾಜಕೀಯ ಪಕ್ಷದ ಬೂತ್ ಲೆವಲ್ ಏಜೆಂಟ್(ಬಿಎಲ್ಎ) ರವರನ್ನು ನಿಯೋಜಿಸಲಾಗಿದೆ, ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ದಿನಾಂಕ: 01.01.2021ಕ್ಕೆ ಒಟ್ಟು ಮತದಾರರ ಸಂಖ್ಯೆ 93,76,004, ದಿನಾಂಕ: 08.11.2021 ಕ್ಕೆ ಒಟ್ಟು ಮತದಾರರ ಸಂಖ್ಯೆ 94,39,416 ಇದ್ದು, ದಿನಾಂಕ: 01.01.2021ರ ನಂತರ 63,612 ಮಂದಿ ನೊಂದಣಿಯಾಗಿದ್ದು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ: 13.01.2022 ರಂದು “ಅಂತಿಮ ಮತದಾರರ ಪಟ್ಟಿ” ಪ್ರಕಟಿಸಲಾಗುವುದು, ಎಂದು ಹೇಳಿದರು.

ಮತರದಾರರ ವಿವರ:

ಪುರುಷ ಮತದಾರರ ಸಂಖ್ಯೆ: 4909042
ಮಹಿಳಾ ಮತದಾರರ ಸಂಖ್ಯೆ: 4528728
ಇತರೆ(ತೃತೀಯ ಲಿಂಗ) ಮತದಾರರ ಸಂಖ್ಯೆ: 1646

ಒಟ್ಟು: 9439416 ಎಂದು ಬಿಬಿಎಂಪಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

RELATED TOPICS:
English summary :Revised voter list published : BBMP chief commissioner

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...