Mon,May20,2024
ಕನ್ನಡ / English

7 ಜಿಲ್ಲೆಗಳ ಮುಂಬೈ-ಕರ್ನಾಟಕ ಪ್ರದೇಶಕ್ಕೆ ಈಗ ಕಿತ್ತೂರು-ಕರ್ನಾಟಕ : ಮರುನಾಮಕರಣ ಮಾಡಿದ ರಾಜ್ಯ ಸರ್ಕಾರ | ಜನತಾ ನ್ಯೂಸ್

09 Nov 2021
1952

ಬೆಂಗಳೂರು : ರಾಜ್ಯದ ಒಟ್ಟು ಏಳು ಜಿಲ್ಲೆಗಳನ್ನು ಒಳಗೊಂಡಿರುವ ಮುಂಬೈ-ಕರ್ನಾಟಕ ಪ್ರದೇಶವನ್ನು "ಕಿತ್ತೂರು ಕರ್ನಾಟಕ" ಎಂದು ಮರುನಾಮಕರಣ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತ್ರತ್ವದ ಕರ್ನಾಟಕ ಸರ್ಕಾರ ನಿರ್ಧರಿಸಿದೆ.

ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರಿಗಿಂತ ಮೊದಲು ಬ್ರಿಟಿಷರ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಆಳ್ವಿಕೆ ನಡೆಸಿದ ಬೆಳಗಾವಿ ಜಿಲ್ಲೆಯ ಐತಿಹಾಸಿಕ ತಾಲ್ಲೂಕಿನ ಹೆಸರಿನ ಮೂಲದಿಂದ "ಕಿತ್ತೂರು"-ಕರ್ನಾಟಕ ಎಂಬ ಹೆಸರು ಇಡಲಾಗಿದೆ.

ಹಿಂದೆ ಹೈದರಾಬಾದ್‌ನ ನಿಜಾಮರು ಆಳ್ವಿಕೆಯಲ್ಲಿದ್ದ ಹೈದರಾಬಾದ್-ಕರ್ನಾಟಕ ಪ್ರದೇಶವನ್ನು, 2019ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರವು ಮರುನಾಮಕರಣ ಮಾಡಿದ್ದು, "ಕಲ್ಯಾಣ-ಕರ್ನಾಟಕ" ಎಂದು ಹೆಸರಿಸಿದ್ದರು.

ಗಡಿ ವಿವಾದಗಳು ಹೆಚ್ಚಾಗಿ ಉದ್ಭವಿಸುತ್ತಲೇ ಇರುವ ಸಂದರ್ಭದಲ್ಲಿ ಹಳೆಯ ಹೆಸರನ್ನು ಉಳಿಸಿಕೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ. ಎಂಬ ಕಾರಣದಿಂದ ಮುಂಬೈ-ಕರ್ನಾಟಕ ಪ್ರದೇಶವನ್ನು ಮರುನಾಮಕರಣ ಮಾಡಲಾಗುವುದು, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ ಒಂದು ವಾರದ ನಂತರ ಈ ಘೋಷಣೆ ಬಂದಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು, "ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ" ಜಿಲ್ಲೆಗಳನ್ನೊಳಗೊಂಡ ಮುಂಬೈ-ಕರ್ನಾಟಕ ಪ್ರದೇಶವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡುವ ಸಂಪುಟದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಅಲ್ಲದೇ, "ನಾವು ಈ ಪ್ರದೇಶವನ್ನು ಬಾಂಬೆ-ಕರ್ನಾಟಕ ಅಥವಾ ಮುಂಬೈ-ಕರ್ನಾಟಕ ಎಂದು ಉಲ್ಲೇಖಿಸಲು ಬಯಸದ ಕಾರಣ ಮರುನಾಮಕರಣ ಮಾಡಲು ನಿರ್ಧರಿಸಲಾಗಿದೆ", ಎಂದು ಜೆ ಸಿ ಮಾಧುಸ್ವಾಮಿ ಹೇಳಿದರು.

ಉತ್ತರ ಕರ್ನಾಟಕದ ಜಿಲ್ಲೆಗಳ ಗುಂಪಿಗೆ ಕಿತ್ತೂರು-ಕರ್ನಾಟಕ ಪ್ರದೇಶ ಎಂದು ನಾಮಕರಣ ಮಾಡಿದ ಕಾರಣವನ್ನು ವಿವರಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕರ್ನಾಟಕ ಏಕೀಕರಣದ ನಂತರ ನಮ್ಮ ಗಡಿ ವಿವಾದಗಳು ಪ್ರಾರಂಭವಾದವು ಮತ್ತು ಅದು ಇತ್ಯರ್ಥವಾಗಿದ್ದರೂ ಜಗಳಗಳು ನಡೆಯುವುದನ್ನು ನಾವು ಕೇಳುತ್ತೇವೆ. ಇಷ್ಟೆಲ್ಲಾ ಘಟನೆಗಳು ನಡೆಯುತ್ತಿದ್ದರೂ ಅದನ್ನು ಮುಂಬೈ-ಕರ್ನಾಟಕ ಎಂದು ಕರೆಯುವುದರಲ್ಲಿ ಏನಾದರೂ ಅರ್ಥವಿದೆಯೇ? ಇದನ್ನು ಮುಂಬೈ-ಕರ್ನಾಟಕ ಎಂದು ಕರೆಯುವುದರ ಅರ್ಥವೇನು?", ಎಂದು ಪ್ರಶ್ನಿಸಿದ್ದಾರೆ.

RELATED TOPICS:
English summary :7 Distr. in Mumbai-Karnataka region renamed as Kittur Karnataka now

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...