Sun,May19,2024
ಕನ್ನಡ / English

ತೊಂದರೆಗೊಳಗಾದ ರೈತರ ಬೆಳೆಗಳ ಸಮೀಕ್ಷೆ ನಡೆಸಿ: ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ | ಜನತಾ ನ್ಯೂಸ್

11 Nov 2021
2074

ಬೆಂಗಳೂರು : ಮಳೆ ಹಾನಿಯಿಂದ ತೊಂದರೆಗೊಳಗಾದ ರೈತರ ಬೆಳೆಗಳ ಸಮೀಕ್ಷೆ ನಡೆಸಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರವನ್ನ ಬರೆದಿದ್ದಾರೆ.

ನವೆಂಬರ್ ತಿಂಗಳ ಮಧ್ಯಭಾಗಕ್ಕೆ ಬರುತ್ತಿದ್ದರೂ ರಾಜ್ಯದಲ್ಲಿ ಮಳೆ ನಿಲ್ಲುತ್ತಿಲ್ಲ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ.

ಇದರಿಂದಾಗಿ ಕೊಯ್ಲಿಗೆ ಬಂದ ಬೆಳೆಗಳು ಹೊಲ ಗದ್ದೆಗಳಲ್ಲೆ ಕೊಳೆತು ಹೋಗುವಂತಾಗಿದೆ. ರಾಜ್ಯದಲ್ಲಿ ವಾಡಿಕೆಯಂತೆ 69.76 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುತ್ತದೆ. ಆದರೆ ಕೊರೊನಾ ಸಮಸ್ಯೆ ಬಂದ ನಂತರ ಜನರು ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಅದರಿಂದಾಗಿ ಕಳೆದ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಸುಮಾರು 8 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಅಂದರೆ 77.65 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು.

ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಅಡಿಕೆ, ಕಾಫಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಕೊಳೆ ರೋಗದ ಜೊತೆಗೆ ಅಡಿಕೆಗೆ ಹಳದಿ ಎಲೆ ರೋಗ ಬಂದಿದೆ. ಮೆಣಸಿನ ಬಳ್ಳಿಗಳು ಕೊಳೆತು ಹೋಗುತ್ತಿವೆ. ಕಾಫಿಯೂ ಕೊಳೆ ರೋಗದ ಸಮಸ್ಯೆಯನ್ನು ಎದುರಿಸುತ್ತಿದೆ.

ಆದರೆ ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾದ ಮಳೆ ಇನ್ನೂ ನಿಂತಿಲ್ಲ. ಆರಂಭದಲ್ಲಿ ಬಿತ್ತನೆ ಮಾಡುವಾಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟ ಕಾರಣ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ರೈತರು ಹಾಕಿದ ಬಿತ್ತನೆ ಬೀಜಗಳು ಸರಿಯಾಗಿ ಹುಟ್ಟಲಿಲ್ಲ. ಆನಂತರ ಸರಿಯಾದ ಸಮಯಕ್ಕೆ ರಸಗೊಬ್ಬರ ಸಿಗಲಿಲ್ಲ.

ಇಷ್ಟರ ನಡುವೆಯೂ ರೈತರು ಕಷ್ಟ ಪಟ್ಟು ಬೆಳೆಗಳನ್ನು ಬೆಳೆದಿದ್ದಾರೆ, ಆದರೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ರೈತಾಪಿ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಪತ್ರದಲ್ಲಿ ಮಾಜಿ ಸಿಎಂ ವಿವರಿಸಿದ್ದಾರೆ.

RELATED TOPICS:
English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...