Sun,May05,2024
ಕನ್ನಡ / English

ಗಡ್ಚಿರೋಲಿ ಎನ್‌ಕೌಂಟರ್ : 29 ಬಂದೂಕು ವಶ,26 ಮೃತ ನಕ್ಸಲ್ ಪೈಕಿ ಮಿಲಿಂದ್ ತೇಲ್ತುಂಬ್ಡೆ ದೇಹ ಗುರುತು ಹಚ್ಚಿದ ಕಮಾಂಡೋ | ಜನತಾ ನ್ಯೂಸ್

15 Nov 2021
2046

ನವದೆಹಲಿ : ನಕ್ಸಲರ ವಿರುದ್ಧ ನಡೆದ ಗಡ್ಚಿರೋಲಿ ಎನ್‌ಕೌಂಟರ್ ನಡೆದ ಸ್ಥಳದಿಂದ ಪೊಲೀಸರು ಎಕೆ-47 ಸೇರಿದಂತೆ ಇತರೆ 29 ಮಾರಕ ಬಂದೂಕು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಗಡ್ಚಿರೋಲಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹತರಾದವರಲ್ಲಿ ನಿಷೇಧಿತ ಸಿಪಿಐ(ಮಾವೋವಾದಿ) ಉನ್ನತ ನಕ್ಸಲ್ ನಾಯಕ ಮಿಲಿಂದ್ ತೇಲ್ತುಂಬ್ಡೆ ಒಬ್ಬರು ಎಂದು ಪೊಲೀಸರು ಗುರುತಿಸಿದ್ದಾರೆ. ಇತನು ಎಲ್ಗರ್ ಪರಿಷತ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಂಧಿತರಾದ ಆನಂದ್ ತೇಲ್ತುಂಬ್ಡೆ ಸಹೋದರ ಎನ್ನಲಾಗಿದೆ.

ಮೃತ ನಕ್ಸಲರಲ್ಲಿ ಎಂಎಂಸಿ ವಲಯದ ಮುಖ್ಯಸ್ಥ ಮಿಲಿಂದ್ ತೇಲ್ತುಂಬ್ಡೆ ತಲೆಯ ಮೇಲೆ 50 ಲಕ್ಷ ರೂಪಾಯಿ ಮತ್ತು ಕೊರ್ಚಿ ದಲಂ ಕಮಾಂಡರ್ ಕಿಶನ್/ಜೈಮಾನ್ ತಲೆ ಮೇಲೆ 8 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಲಾಗಿತ್ತು.

ಚತ್ತೀಸ್ಗಡ ಗಡಿಯಲ್ಲಿರುವ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಶನಿವಾರ ಪೊಲೀಸರ ಸಿ60 ಕಮಾಂಡೋ ಪಡೆ 10ಗಂಟೆಗಳ ಕಾಲ ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 26 ನಕ್ಸಲರು ಹತರಾಗಿದ್ದರು. ನಿನ್ನೆ ಎನ್‌ಕೌಂಟರ್ ನಡೆದ ಸ್ಥಳದಿಂದ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಯುದ್ಧೋಚಿತ ರೀತಿಯ ಶಸ್ತ್ರಾಸ್ತ್ರಗಳನ್ನು ಒಳಗೊಂಡಂತೆ ವಶಪಡಿಸಿಕೊಂಡಿದ್ದಾರೆ. ಸಿ-60 ಕಮಾಂಡೋಗಳು ಸೇರಿದಂತೆ 300 ಪೊಲೀಸ್ ಸಿಬ್ಬಂದಿಯ ತಂಡ ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

ವಶಪಡಿಸಿಕೊಂಡ 29 ಶಸ್ತ್ರಾಸ್ತ್ರಗಳಲ್ಲಿ ಆರು ಎಕೆ-47 ರೈಫಲ್‌ಗಳು, ಒಂದು ಪಿಸ್ತೂಲ್, ಒಂಬತ್ತು 12-ಬೋರ್ ಗನ್‌ಗಳು, ಒಂಬತ್ತು ಸ್ವಯಂ-ಲೋಡಿಂಗ್ ರೈಫಲ್‌ಗಳು, ಮೂರು 303 ರೈಫಲ್‌ಗಳು ಮತ್ತು ಒಂದು ಐಎನ್‌ಎಸ್ಎಎಸ್ ರೈಫಲ್ ಸೇರಿವೆ.

RELATED TOPICS:
English summary :Gadchiroli encounter : 29 arms seized, Milind Teltumbde identified by commandos among 26 killed naxals

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...