Tue,May07,2024
ಕನ್ನಡ / English

ನಾನು ಮುಖ್ಯಮಂತ್ರಿಯಾಗಿದ್ದಾಗ ಶ್ರೀಕಿ ವಿರುದ್ದ ಯಾವ ದೂರೂ ದಾಖಲಾಗಿರಲಿಲ್ಲ - ಸಿದ್ದರಾಮಯ್ಯ | ಜನತಾ ನ್ಯೂಸ್

16 Nov 2021
1841

ಬೆಂಗಳೂರು : ನಾನು ಮುಖ್ಯಮಂತ್ರಿಯಾಗಿದ್ದಾಗ ಶ್ರೀಕಿ ವಿರುದ್ದ ಯಾವ ದೂರೂ ದಾಖಲಾಗಿರಲಿಲ್ಲ. ಪ್ರಕರಣ ದಾಖಲಾಗಿ ವಿಚಾರಣೆ ನಡೆದಿದ್ದು ಬಿಜೆಪಿ ಕಾಲದಲ್ಲಿ, ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬಿಟ್ಕಾಯಿನ್ ಹಾಗೂ ಶ್ರೀಕಿ ಪ್ರಕರಣದ ರಾಜಕೀಯ ಕೆಸೆರೆರೆಚಾಟ ನಿಲ್ಲುವಂತೆ ಕಂಡುಬರುತ್ತಿಲ್ಲ. ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಸಚಿವರ ಪಟ್ಟಿಗೆ ನಿನ್ನೆ ಆರ್.ಅಶೋಕ ಅವರು ಸೇರ್ಪಡೆಗೊಂಡಿದ್ದಾರೆ.

ನಿನ್ನೆ ಸಂಜೆ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ತಮ್ಮ ಹೇಳಿಕೆಯನ್ನು ನೀಡಿದ ಸಿದ್ದರಾಮಯ್ಯ ಅವರು, "ಮೊದಲ ಬಾರಿ ಬಿಟ್ ಕಾಯಿನ್ ಸೂತ್ರಧಾರ ಶ್ರೀಕಿ ಬಂಧನ ಮತ್ತು ಜಾಮೀನಿನ ಮೇಲೆ ಬಿಡುಗಡೆಗೊಂಡಾಗ ಗೃಹ ಸಚಿವರಾಗಿದ್ದವರು ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಆರ್.‌ಅಶೋಕ್ ಅವರಿಗ್ಯಾಕೆ ಇಷ್ಟೊಂದು ಆಸಕ್ತಿ? ನಾನು ಮುಖ್ಯಮಂತ್ರಿಯಾಗಿದ್ದಾಗ ಬಿಟ್ ಕಾಯಿನ್ ಹಗರಣ ಎಲ್ಲಿಯಾದರೂ ವರದಿಯಾಗಿತ್ತೇ? ಯಾರಾದರೂ ಬಿಜೆಪಿ ನಾಯಕರು ಪ್ರಸ್ತಾಪ ಮಾಡಿದ್ದರೆ? ಆ ಕಾಲದಲ್ಲಿ ಅವರಿಗೆ ಇದು ಗೊತ್ತಿತ್ತೇ? ಗೊತ್ತಿದ್ದರೂ ಮುಚ್ಚಿಟ್ಟಿದ್ದರೇ?", ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ ಮುಂದುವರೆದು, "ನಾನು ಮುಖ್ಯಮಂತ್ರಿಯಾಗಿದ್ದಾಗ ಶ್ರೀಕಿ ವಿರುದ್ದ ಯಾವ ದೂರೂ ದಾಖಲಾಗಿರಲಿಲ್ಲ. ಪ್ರಕರಣ ದಾಖಲಾಗಿ ವಿಚಾರಣೆ ನಡೆದಿದ್ದು ಬಿಜೆಪಿ ಕಾಲದಲ್ಲಿ. ನೀವ್ಯಾಕೆ ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಕೇಳುತ್ತಿದ್ದೇವೆ. ಈ ಪ್ರಶ್ನೆಗೆ ಮೊದಲು ಉತ್ತರಿಸಿ. ಎರಡು ಬಾರಿ ಶ್ರೀಕಿಯನ್ನು ಬಂಧಿಸಿದ್ದು, ಬೇಲ್ ಮೇಲೆ ಬಿಡುಗಡೆ ಮಾಡಿದ್ದು, ಚಾರ್ಜ್ ಶೀಟ್ ದಾಖಲಿಸಿದ್ದು ಬಿಜೆಪಿ ಸರ್ಕಾರ. ಹೀಗಾಗಿ ಬಸವರಾಜ ಬೊಮ್ಮಾಯಿ ಅವರೇ ಮಾಹಿತಿ ಕೊಡಬೇಕು. ಈ ಕೆಲಸ ಅವರಿಂದ ಆಗಲ್ಲ ಎಂದರೆ ಅಧಿಕಾರ ಬಿಟ್ಟು ಹೋಗಲಿ", ಎಂದು ಸವಾಲೆಸೆಗಿದ್ದಾರೆ.

RELATED TOPICS:
English summary :No complaint was filed against Sriki when I was CM - Siddaramaiah

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...