Sun,May19,2024
ಕನ್ನಡ / English

ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ | ಜನತಾ ನ್ಯೂಸ್

16 Nov 2021
3415

ಬೆಂಗಳೂರು : ಪುನೀತ್‍ರಾಜ್ ಕುಮಾರ್ ಅವರಿಗೆ ಕರ್ನಾಟಕ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಇಂದು ಅವರನ್ನು ನೆನಪಿಸಿ ಕೊಳ್ಳಲು "ಪುನೀತ ನಮನ ಕಾರ್ಯಕ್ರಮ" ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್​ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಘೋಷಣೆ ಒಂದನ್ನು ಮಾಡಿದ್ದಾರೆ. ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ನೀಡುವುದಾಗಿ ಅವರು ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಪುನೀತ್​ ನಮ್ಮೆಲ್ಲರಿಗೂ ಆತ್ಮೀಯ. ಅವನನ್ನು ನಾನು ಬಾಲ್ಯದಿಂದ ಬಲ್ಲೆ. ಬಾಲ್ಯದಲ್ಲಿಯೇ ಪ್ರತಿಭೆಯ ಚಿಲುಮೆ ಹೊಂದಿದ ವ್ಯಕ್ತಿ. ಬಾಲ ನಟನಾಗಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಕರ್ನಾಟಕದ ಏಕೈಕ ಬಾಲಕ ಪುನೀತ್​. ಸಣ್ಣ ವಯಸ್ಸಿನಲ್ಲೇ ಆತ ಅದ್ಭುತವಾಗಿ ನಟಿಸುತ್ತಿದ್ದ. ಅಷ್ಟು ಸಣ್ಣ ವಯಸ್ಸಿನಲ್ಲಿ ಹಾಗೆ ನಟಿಸೋದು ಸುಲಭವಲ್ಲ ಎಂದಿದ್ದಾರೆ..

ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ. ಇದರ ಜತೆಗೆ ಪುನೀತ್​ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಘೋಷಣೆ ಮಾಡುತ್ತಿದ್ದೇನೆ ಎಂದರು ಅವರು.

ಕರ್ನಾಟಕ ರತ್ನ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಕುವೆಂಪು(ಸಾಹಿತ್ಯ) 1992, ರಾಜಕುಮಾರ್(ಸಿನಿಮಾ) 1992, ಎಸ್. ನಿಜಲಿಂಗಪ್ಪ(ರಾಜಕೀಯ)1999, ಸಿಎನ್‍ರಾವ್(ವಿಜ್ಞಾನ) 2000, ಡಾ.ದೇವಿ ಪ್ರಸಾದ್ ಶೆಟ್ಟಿ(ವೈದ್ಯಕೀಯ) 2001, ಭೀಮಸೇನ್ ಜೋಷಿ(ಸಂಗೀತಾ) 2005, ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ(ಸಮಾಜ ಸೇವೆ) 2007, ದೇ. ಜವರೇಗೌಡ(ಸಾಹಿತ್ಯ) 2008, ವೀರೇಂದ್ರ ಹೆಗ್ಗಡೆ(ಸಮಾಜ ಸೇವೆ) 2009ರಲ್ಲಿ ಕರ್ನಾಟಕ ರತ್ನ ಲಭಿಸಿತ್ತು.

RELATED TOPICS:
English summary :Puneeth Rajkumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...