Sun,May19,2024
ಕನ್ನಡ / English

ಪುನೀತ್ ರಾಜಕುಮಾರ ಕರ್ನಾಟಕ ರತ್ನ - ಸಿದ್ದರಾಮಯ್ಯ ಸ್ವಾಗತ : ಇನ್ನೂ ಪ್ರಶಸ್ತಿಗೆ ಒತ್ತಾಯ | ಜನತಾ ನ್ಯೂಸ್

17 Nov 2021
2586

ಬೆಂಗಳೂರು : ಕನ್ನಡದ ಮನೆ ಮಗನಾಗಿದ್ದ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿದ್ದನ್ನು ಸಾರ್ವಜನಿಕವಾಗಿ ಹಾಗೂ ಪಕ್ಷಾತೀತವಾಗಿ ಸ್ವಾಗತಿಸಲಾಗುತ್ತಿದೆ. ನಿನ್ನೆ ಪುನೀತ್ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಪುನೀತ್ ರಾಜಕುಮಾರ್ ಅವರ ಕುರಿತು ಮನದಾಳದ ಮಾತು ಹಂಚಿಕೊಂಡಿರುವ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿದ್ದಾರೆ.

ಈ ಕುರಿತು ವಿವರವಾಗಿ ಹೇಳಿರುವ ಸಿದ್ದರಾಮಯ್ಯ ಅವರು, ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ನುಡಿನಮನ ಅರ್ಪಿಸುವ ಸಲುವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿದ್ದ "ಪುನೀತ ನಮನ" ಕಾರ್ಯಕ್ರಮದಲ್ಲಿ ಭಾಗವಹಿಸಿದೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಡಾ|| ರಾಜ್‌ಕುಮಾರ್ ಅವರ ಕುಟುಂಬ ಸದಸ್ಯರು, ದಕ್ಷಿಣ ಭಾರತ ಚಿತ್ರರಂಗದ ನಟ, ನಟಿಯರು, ರಾಜ್ಯ ಸರ್ಕಾರದ ಸಚಿವರು, ಶಾಸಕರು, ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಿದ್ದರು.

ನಟನೊಬ್ಬ ಅಗಲಿದಾಗ ಸಹಜವಾಗಿ ಆತನ ಅಭಿಮಾನಿಗಳು ದುಃಖ ವ್ಯಕ್ತಪಡಿಸುತ್ತಾರೆ, ಆದರೆ ಪುನೀತ್ ಅವರು ನಿಧನರಾದಾಗ ಇಡೀ ರಾಜ್ಯದಲ್ಲಿ ಎಲ್ಲರೂ ತಮ್ಮ ಮನೆಯ ಸದಸ್ಯನೊಬ್ಬನನ್ನು ಕಳೆದುಕೊಂಡಂತೆ ನೋವು ಅನುಭವಿಸಿದ್ದಾರೆ. ಎಲ್ಲರಿಗೂ ಇಂತಹಾ ಗೌರವ, ಪ್ರೀತಿ ಸಿಗುವುದು ಕಡಿಮೆ. ಇದರಿಂದ ಪುನೀತ್ ಅವರು ಕನ್ನಡ ನಾಡಿನ ಜನರ ಹೃದಯಕ್ಕೆ ಎಷ್ಟು ಆತ್ಮೀಯರಾಗಿದ್ದರು ಎಂಬುದು ಕಂಡುಬರುತ್ತಿದೆ.

ಪುನೀತ್ ಅವರು ಕೇವಲ ಒಬ್ಬ ನಟನಾಗಿ ಅಷ್ಟೇ ಅಲ್ಲದೆ ನಯ, ವಿನಯ, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡಿದ್ದ ಅಪರೂಪದ ವ್ಯಕ್ತಿಯಾದುದ್ದರಿಂದ ನಾಡಿನ ಪ್ರತಿಯೊಬ್ಬರ ಮನಸು ಗೆಲ್ಲಲು ಸಾಧ್ಯವಾಯಿತು. ಪುನೀತ್ ಅವರ ನಿಧನದ ಸುದ್ದಿ ಕೇಳಿದಾಗ ನಾನು ಮೊದಲು ನಂಬಲಿಲ್ಲ. ಅಷ್ಟೊಂದು ಗಟ್ಟಿಮುಟ್ಟಾದ, ದೇಹದಾಡ್ಯತೆ ಹೊಂದಿದ್ದ ವ್ಯಕ್ತಿ ಇಷ್ಟು ಚಿಕ್ಕ ವಯಸ್ಸಿನಲ್ಲಿ ನಿಧನರಾಗಲು ಹೇಗೆ ಸಾಧ್ಯ ಎಂದು ದಿಗ್ಭ್ರಮೆಯಾಯಿತು. ಅವರ ಸಾವಿನ ಸುದ್ದಿ ನಿಜವೆಂದು ಖಾತ್ರಿಯಾದಾಗ ನನ್ನ ಮನೆಯ ಸದಸ್ಯರೊಬ್ಬರನ್ನು ಕಳೆದುಕೊಂಡಷ್ಟು ದುಃಖ ಮನಸನ್ನು ಆವರಿಸಿತ್ತು.

ನನಗೆ ಮೊದಲಿಂದಲೂ ದಿವಂಗತ ರಾಜ್ ಕುಮಾರ್ ಅವರ ಕುಟುಂಬದೊಂದಿಗೆ ತುಂಬಾ ಆತ್ಮೀಯ ಸಂಬಂಧವಿದೆ. ರಾಜ್ ಕುಮಾರ್ ಅವರು ನಮ್ಮ ಮೈಸೂರು, ಚಾಮರಾಜನಗರ ಜಿಲ್ಲೆಯವರು. ನನ್ನನ್ನು ಯಾವಾಗ ಕಂಡರೂ ನಮ್ಮ ಕಾಡಿನವರು ನೀವು, ಬನ್ನಿ, ಬನ್ನಿ ಎಂದು ಬಹಳ ಪ್ರೀತಿಯಿಂದ ಮಾತನಾಡಿಸುತ್ತಿದ್ದರು, ಉಪಚರಿಸುತ್ತಿದ್ದರು. ರಾಜ್ ಕುಮಾರ್ ಅವರ ಸರಳತೆ, ವಿನಯತೆ, ಸಜ್ಜನಿಕೆ, ಪ್ರೀತಿ, ವಿಶ್ವಾಸ ತೋರುವ ರೀತಿ ಇವೆಲ್ಲ ಅವರ ಕುಟುಂಬದ ಎಲ್ಲರಲ್ಲೂ ಇದ್ದರೂ, ಪುನೀತ್ ಅವರಲ್ಲಿ ವಿಶೇಷವಾಗಿ ಅವರ ನಗು ಮುಖದಲ್ಲಿ ಎದ್ದು ಕಾಣುತ್ತಿತ್ತು.

ಪುನೀತ್ ಅವರು ನನ್ನನ್ನು ಯಾವಾಗಲೂ ಮಾಮ ಎಂದು ಪ್ರೀತಿಯಿಂದ ಕರೆಯುತ್ತಿದ್ದರು. ಅವರು ಒಮ್ಮೆ ಮೈಸೂರಿನಲ್ಲಿ ಸಿಕ್ಕಾಗ ಮಾಮ ರಾಜಕುಮಾರ ಸಿನೆಮಾ ಬಿಡುಗಡೆ ಆಗಿದೆ, ನೀವು ನೋಡಲೇಬೇಕು ಎಂದರು. ನಾನು ವಿದ್ಯಾರ್ಥಿ ಆಗಿದ್ದಾಗ, ವಕೀಲನಾಗಿದ್ದಾಗ ಚಿತ್ರಮಂದಿರಗಳಲ್ಲಿ ರಾಜ್ ಕುಮಾರ್ ಅವರ ಚಿತ್ರಗಳನ್ನು ನೋಡುತ್ತಿದ್ದೆ, ಆದರೆ ಸಕ್ರಿಯ ರಾಜಕೀಯಕ್ಕೆ ಬಂದ ಮೇಲೆ ಚಿತ್ರಮಂದಿರಕ್ಕೆ ಹೋಗಿ ಚಲನಚಿತ್ರ ನೋಡೋದು ಬಿಟ್ಟಿದ್ದೆ. ಪುನೀತ್ ಅವರ ಮಾತನ್ನು ಗೌರವಿಸಿ ಮೈಸೂರಿನ ಸರಸ್ವತಿ ಚಿತ್ರಮಂದಿರದಲ್ಲಿ ರಾಜಕುಮಾರ ಸಿನಿಮಾ ನೋಡಿದೆ. ಅತ್ಯಂತ ಅದ್ಭುತವಾಗಿ ನಟಿಸಿದ್ದರು, ಅವರ ನಟನೆ ಈಗಲೂ ಕಣ್ಣಮುಂದಿದೆ.

ಪುನೀತ್ ಅವರು ಕೇವಲ ಸಿನಿಮಾ ರಂಗಕ್ಕೆ ಸೀಮಿತವಾಗಿರದೆ ಸಾಮಾಜಿಕ ಕ್ಷೇತ್ರದಲ್ಲೂ ಸೇವೆ ಮಾಡುತ್ತಿದ್ದರು. ಸರ್ಕಾರದ ಅನೇಕ ಇಲಾಖೆಗಳ ಹಲವು ಕಾರ್ಯಕ್ರಮಗಳ ಪ್ರಚಾರಕರಾಗಿ ಕೆಲಸ ಮಾಡಿ, ಜನರಿಗೆ ಪರಿಣಾಮಕಾರಿಯಾಗಿ ಮಾಹಿತಿ ತಲುಪಿಸುವ ಕೆಲಸ ಮಾಡುತ್ತಿದ್ದರು. ನಾನು ಮುಖ್ಯಮಂತ್ರಿ ಆಗಿದ್ದಾಗ ರಾಜ್ ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್‍ಕುಮಾರ್ ಅವರು ಶಕ್ತಿಧಾಮದಲ್ಲಿ ಆಯೋಜಿಸುತ್ತಿದ್ದ ಕಾರ್ಯಕ್ರಮಗಳಿಗೆ ನನಗೆ ಆಹ್ವಾನ ನೀಡಿ, ಭಾಗವಹಿಸಲು ಅವಕಾಶ ಮಾಡಿಕೊಡುತ್ತಿದ್ದರು. ಅಶಕ್ತರಾಗಿರುವ ಮಹಿಳೆಯರಿಗೆ, ಮಕ್ಕಳಿಗೆ ಆಸರೆಯಾಗಿರುವ ಶಕ್ತಿಧಾಮವನ್ನು ರಾಜ್ ಕುಮಾರ್ ಅವರ ಕುಟುಂಬ ನಡೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ.

ಒಬ್ಬ ನಟ ನಿಧನರಾದಾಗ ಕರ್ನಾಟಕದ ಕೋಟ್ಯಂತರ ಜನರೆಲ್ಲರೂ ಈ ರೀತಿ ಕಣ್ಣೀರು ಹಾಕಿದ್ದನ್ನು ನಾನು ನನ್ನ ಜೀವನದಲ್ಲೇ ಕಂಡಿರಲಿಲ್ಲ. ಇಷ್ಟು ಬೇಗ ಪುನೀತ್ ಅವರು ನಮ್ಮನ್ನು ಅಗಲಬಾರದಿತ್ತು. ಸಮಾಜಕ್ಕೆ ಸೇವೆ ಮಾಡುವ ಅವಕಾಶ ಅವರಿಗೆ ಇನ್ನು ಸಾಕಷ್ಟು ಇತ್ತು. ಆದರೆ ವಿಧಿಯಾಟ ಯಾರಿಂದಲೂ ತಪ್ಪಿಸಲು ಆಗಲ್ಲ, ಇಂದು ಅವರು ನಮ್ಮೊಂದಿಗೆ ಇಲ್ಲದಿದ್ದರೂ ದೊಡ್ಡ ಹೆಜ್ಜೆ ಗುರುತುಗಳನ್ನು ಬಿಟ್ಟುಹೋಗಿದ್ದಾರೆ. ಅದು ನಾಡಿನ ಯುವ ಜನರಿಗೆ ದಾರಿದೀಪವಾಗಲಿದೆ. ಪುನೀತ್ ರಾಜ್‍ಕುಮಾರ್ ಅವರ ಸರಳತೆ, ವಿನಯ, ಸಾಮಾಜಿಕ ಸೇವೆಯ ಗುಣಗಳನ್ನು ನಾವು ಅಳವಡಿಸಿಕೊಳ್ಳಲು ಪ್ರಯತ್ನಿಸುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂಬುದು ನನ್ನ ಭಾವನೆ.

ರಾಜ್ಯ ಸರ್ಕಾರ ಪುನೀತ್ ಅವರಿಗೆ ಕರ್ನಾಟಕ ರತ್ನ ಬಿರುದನ್ನು ನೀಡಲು ತೀರ್ಮಾನ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅವರ ಈ ನಿರ್ಧಾರ ಸ್ವಾಗತಾರ್ಹವಾದುದ್ದು. ಅದೇ ರೀತಿ ಅವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ಕೊಡಬೇಕು ಎಂದು ಈ ಹಿಂದೆಯೇ ಒತ್ತಾಯ ಮಾಡಿದ್ದೆ. ಈ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರು ಇರುವುದರಿಂದ ಅವರು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಷ್ಟೇ ಅಲ್ಲದೆ, ಪ್ರಶಸ್ತಿ ಕೊಡಿಸಲು ಎಲ್ಲ ರೀತಿಯ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತೇನೆ.

ರಾಜ್ ಕುಮಾರ್ ಅವರು ಮೂರು ಜನ ಮಕ್ಕಳನ್ನು ನೋಡಿದಾಗ ರಾಜ್ ಕುಮಾರ್ ಅವರನ್ನು ನೋಡಿದ ಹಾಗೆ ಅನಿಸುತ್ತದೆ. ತಂದೆಯ ಎಲ್ಲಾ ಗುಣಗಳನ್ನು ಮಕ್ಕಳು ಅಳವಡಿಸಿಕೊಂಡಿದ್ದಾರೆ. ರಾಜ್ ಕುಮಾರ್ ಅವರು ತಮ್ಮ ಅಭಿಮಾನಿಗಳನ್ನು ಅಭಿಮಾನಿ ದೇವರು ಎಂದು ಕರೆಯುವ ಮೂಲಕ ವಿಶೇಷ ಸ್ಥಾನವನ್ನು ನೀಡಿದ್ದರು. ಕೆಲವು ನಟರ ಚಲನಚಿತ್ರ ನಟನೆ ಹಾಗೂ ನಿಜ ಜೀವನ ಸ್ವಲ್ಪ ಭಿನ್ನವಾಗಿರುತ್ತದೆ, ಆದರೆ ರಾಜ್ ಕುಮಾರ್ ಅವರು ಸಿನೆಮಾ ರಂಗ ಮತ್ತು ನಿಜ ಜೀವನ ಎರಡೂ ಕಡೆ ಒಂದೇ ರೀತಿಯ ಮೇರು ವ್ಯಕ್ತಿತ್ವ ಹೊಂದಿದ್ದರು ಎಂಬುದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.

ಪುನೀತ್ ಅವರ ಸಾವಿನಿಂದ ಕನ್ನಡ ನಾಡು ಮತ್ತು ಚಿತ್ರರಂಗ ದುಃಖತಪ್ತವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ, ಎಂದು ಸಿದ್ದರಾಮಯ್ಯ ಅವರು ತಮ್ಮ ಮನದಾಳವನ್ನು ತಮ್ಮ ಸಾಮಾಜಿಕ ಮಾದ್ಯಮಗಳಲ್ಲಿ ಬರೆದಿದ್ದಾರೆ.

RELATED TOPICS:
English summary :Puneeth Rajkumar Karnataka Ratna : Everyone welcomes state govt decision

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...