Tue,May07,2024
ಕನ್ನಡ / English

ಬೆಳೆದ ಬೆಳೆ ಕಣ್ಮುಂದೆಯೇ ಕೊಚ್ಚಿಹೋಗುತ್ತಿದೆ, ನಾಡಿಗೆ ಅನ್ನ ಕೊಡುವ ಅನ್ನದಾತ ಆಪತ್ತಿನಲ್ಲಿದ್ದಾನೆ! | ಜನತಾ ನ್ಯೂಸ್

20 Nov 2021
3048

ಬೆಂಗಳೂರು : ಕೋವಿಡ್‌ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ ಮುನ್ನವೇ ಮಳೆ ಸಂಕಷ್ಟಕ್ಕೀಡು ಮಾಡಿದೆ. ಬೆಳೆದ ಬೆಳೆ ಕಣ್ಮುಂದೆಯೇ ಕೊಚ್ಚಿಹೋಗುತ್ತಿದೆ. ನಾಡಿಗೆ ಅನ್ನ ಕೊಡುವ ಅನ್ನದಾತ ಆಪತ್ತಿನಲ್ಲಿದ್ದಾನೆ ಎಂದು ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಿಲ್ಲೆಗಳಿಗೆ ಕೋವಿಡ್‌ ಉಸ್ತುವಾರಿಗಳೆಂದು ನೇಮಕವಾದ ಸಚಿವರು ಎಲ್ಲಿ? ಅನೇಕ ಸಚಿವರಂತೂ ಜಿಲ್ಲೆಗಳ ಕಥೆ ಹಾಗಿರಲಿ, ಅವರ ಕಚೇರಿಗಳಲ್ಲೇ ಪತ್ತೆ ಇಲ್ಲ. ಮುಖ್ಯಮಂತ್ರಿಗಳು ಕೂಡಲೇ ಸಚಿವರನ್ನು ಜಿಲ್ಲೆಗಳಿಗೆ ಅಟ್ಟಬೇಕು. ಮಳೆ-ಬೆಳೆ ಪರಿಹಾರ ಕಾರ್ಯಕ್ರಮಗಳನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇಷ್ಟೆಲ್ಲ ಅನಾಹುತ ಆಗುತ್ತಿದ್ದರೂ ಕೃಷಿ ಸಚಿವರು, ಅವರ ಇಲಾಖೆ ಹಾಗೂ ಕಂದಾಯ ಇಲಾಖೆ ಏನು ಮಾಡುತ್ತಿದೆ? ಈಗಾಗಲೇ ಬೆಳೆ ಹಾನಿ ಬಗ್ಗೆ ಸಮೀಕ್ಷೆ ಮಾಡಲಾಗಿದೆಯಾ? ಬೆಳೆ ವಿಮೆ ಪರಿಸ್ಥಿತಿ ಏನು? ಕಾಟಾಚಾರಕ್ಕೆ ಸರ್ವೇ ಮಾಡಿ ಸಭೆಗಳಲ್ಲಿ ಕಾಲಹರಣ ಮಾಡುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳಿಗೆ ಅಧಿಕಾರಿಗಳೇ ನೀಡಿರುವ ಮಾಹಿತಿಯಂತೆ ಜುಲೈ-ನವೆಂಬರ್‌ʼನಲ್ಲಿ 7.31 ಲಕ್ಷ ಹೆಕ್ಟೇರ್‌ ಅಥವಾ ಅದಕ್ಕಿಂತ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ಮಳೆ ಪಾಲಾಗಿದೆ. ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆ ಸೇರಿ ರಾಜ್ಯದ ಉದ್ದಗಲಕ್ಕೂ ಮಳೆಯ ರುದ್ರನರ್ತನ ಮುಂದುವರಿದೆ ಎಂದು ಹೇಳಿದ್ದಾರೆ.

ಸಾವಿರಾರು ಕೋಟಿ ರೂ. ಮೌಲ್ಯದ ಬೆಳೆ ನಾಶವಾಗಿದೆ. ಚಿಕ್ಕಮಗಳೂರು, ಕೊಡಗಿನಲ್ಲಿ ಕಾಫಿ ತೋಟಗಳು ಪೂರ್ಣ ನಾಶವಾಗಿವೆ. ಬಯಲುಸೀಮೆ ಜಿಲ್ಲೆಗಳಲ್ಲಿ ಮಳೆ ಪ್ರಳಯವನ್ನೇ ಸೃಷ್ಟಿಸಿದೆ. ಕೆರೆಕಟ್ಟೆಗಳು ಒಡೆದುಹೋಗಿ ಗ್ರಾಮಗಳಿಗೆ ಸಂಪರ್ಕವೇ ತಪ್ಪಿಹೋಗಿದೆ. ಹಳ್ಳಿಗಳು ನಡುಗಡ್ಡೆಗಳಾಗಿವೆ. ತೋಟಗಳು ಕೆರೆಗಳಾಗಿವೆ. ಕೋಲಾರ ಜಿಲ್ಲೆ ಒಂದರಲ್ಲೇ ಅತಿ ಹೆಚ್ಚು ಬೆಳೆ ನಾಶವಾಗಿದೆ. ಮಾಧ್ಯಮಗಳಿಗೆ ಅಧಿಕಾರಿಗಳೇ ಕೊಟ್ಟಿರುವ ಮಾಹಿತಿಯಂತೆ ಆ ಒಂದು ಜಿಲ್ಲೆಯಲ್ಲೇ 34,447 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಯನ್ನು ಮಳೆ ನುಂಗಿದೆ. 14 ಜಿಲ್ಲೆಗಳಲ್ಲಿ 48,000 ಹೆಕ್ಟೇರ್‌ʼಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಫಸಲು ರೈತರ ಕೈಗೆ ಸಿಕ್ಕಿಲ್ಲ ಎಂದಿದ್ದಾರೆ.

ಕಾಟಾಚಾರಕ್ಕೆ ಸರ್ವೇ ಮಾಡಿ ಸಭೆಗಳಲ್ಲಿ ಕಾಲಹರಣ ಮಾಡುವುದು ಬೇಡ. ಜನಸ್ವರಾಜ್‌ ಯಾತ್ರೆ ಹೆಸರಿನಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ. ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ. ಕೃಷಿ ಕಾಯ್ದೆ ವಾಪಸ್‌ ಪಡೆದೆವು ಎಂದು ಬೀಗುತ್ತಾ ರೈತರ ತಾಳ್ಮೆಯನ್ನು ಪರೀಕ್ಷಿಸಬೇಡಿ. ಸರಕಾರವು ಅಧಿಕಾರ ರಾಜಕಾರಣದಲ್ಲಿ ಮುಳುಗಿ ಮನುಷ್ಯತ್ವ ಮರೆಯಬಾರದು ಎಂದಿದ್ದಾರೆ.

RELATED TOPICS:
English summary :HD Kumaraswamy

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...