Sun,May19,2024
ಕನ್ನಡ / English

ಕಾಂಗ್ರೆಸ್ ಬರ್ಬಾದ್​​ ಆಗಿದೆ. ಎಲ್ಲಾ ಕಡೆ ಕಾಂಗ್ರೆಸ್ ಸೋಲುತ್ತಿದೆ: ಈಶ್ವರಪ್ಪ ತಿರುಗೇಟು | ಜನತಾ ನ್ಯೂಸ್

21 Nov 2021
2661

ಮಂಡ್ಯ : ರಾಜ್ಯದ ಬಹುತೇಕ ಕಡೆ ಮಳೆ ಸುರಿಯುತ್ತಿದ್ದು, ಜನ ಸಂಕಷ್ಟದಲ್ಲಿದ್ದಾರೆ. ಇಂಥ ಸಮಯದಲ್ಲಿ ಬಿಜೆಪಿ ಸಚಿವರು ಬಿಜೆಪಿ ಜನಸ್ವರಾಜ್​ ಯಾತ್ರೆ ನಡೆಸುತ್ತಾ ಬೇಜಾಬ್ದಾರಿತನ ತೋರುತ್ತಿದ್ದಾರೆ. ಅವರದ್ದು ಜನಸ್ವರಾಜ್​ ಯಾತ್ರೆ ಅಲ್ಲ ಜನ ಬರ್ಬಾದ್​ ಯಾತ್ರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಕೆ ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಬರ್ಬಾದ್ ಆಗುತ್ತಾ? ಜನ ಬರ್ಬಾದ್ ಆಗುತ್ತಾ? ಕರ್ನಾಟಕದಲ್ಲಿ ಈಗಾಗಲೇ ಕಾಂಗ್ರೆಸ್ ಸರ್ಕಾರ ಕಿತ್ತಾಕಿದ್ದೇವೆ. ಕಾಂಗ್ರೆಸ್ ಬರ್ಬಾದ್ ಆಗಿದೆ, ಎಲ್ಲ ಕಡೆ ಕಾಂಗ್ರೆಸ್ ಸೋಲ್ತಿದೆ. ಕಾಂಗ್ರೆಸ್ ಬರ್ಬಾದ್ ಯಾತ್ರೆ ಅಂತ ಮಂಡ್ಯದ ಜನಸ್ವರಾಜ್ ಸಮಾವೇಶದಲ್ಲಿ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಜನಸ್ವರಾಜ್ ಯಾತ್ರೆ ಮುಗಿದ ನಂತರ ಗೊತ್ತಾಗುತ್ತೆ ಕಾಂಗ್ರೆಸ್ ಬರ್ಬಾದ್​​ ಆಗುತ್ತಾ? ಅಥವಾ ಜನ ಬರ್ಬಾದ್​​ ಆಗ್ತಾರಾ ಅಂತ. ನನಗೆ ವಿಶ್ವಾಸ ಇದೆ ವಿಧಾನ ಪರಿಷತ್​ನ 25 ಕ್ಷೇತ್ರದಲ್ಲಿ 15 ರಿಂದ 16 ಕ್ಷೇತ್ರ ಗೆದ್ದು ಕಾಂಗ್ರೆಸ್ ಬರ್ಬಾದ್​ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅವರಿಗೆ ಟೀಕೆ ಮಾಡಿ ಮಾಡಿ ಅಭ್ಯಾಸ. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಸಿದ್ದರಾಮಯ್ಯ ಹಾಗೂ ದೇವೇಗೌಡರ ಕಾಲು ಹಿಡಿದು ಕೇಳಿಕೊಂಡೆ ಪ್ರವಾಸಕ್ಕೆ ಬನ್ನಿ ಅಂತ. ಒಂದು ಕಡೆ ಕೂಡ ಅವರು ಬರಲಿಲ್ಲ ಈಗ ಪುಕಸಟ್ಟೆ ಬಾಷಣ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ಸುಳ್ಳು ಹೇಳಲು ನೊಬೆಲ್ ಪ್ರಶಸ್ತಿ ಇಟ್ರೆ ಸಿದ್ದರಾಮಯ್ಯ ಗೆಲ್ತಾರೆ. ಡಿಕೆಶಿ, ಸಿದ್ದರಾಮಯ್ಯಗೆ ಪಂದ್ಯ ಇಟ್ಟರೆ ಸಿದ್ದರಾಮಯ್ಯ ಗೆಲ್ತಾರೆ. ಕೊವಿಡ್ ಬಂದಾಗ ಮೋದಿ ಸರ್ಕಾರ ಹಳ್ಳಿಗಳಿಗೆ ವ್ಯಾಕ್ಸಿನ್ ಕೊಟ್ರೆ ಡಿಕೆಶಿ, ಸಿದ್ದರಾಮಯ್ಯ ಆ ವ್ಯಾಕ್ಸಿನ್ ಮುಟ್ಟಬೇಡಿ ಅಂದರು. ವ್ಯಾಕ್ಸಿನ್ ಹಾಕಿಸಿಕೊಂಡ್ರೆ ಗಂಡಸ್ತನ ಹೋಗಿಬಿಡುತ್ತೆ ಎಂದ್ರು. ಕೊನೆಗೆ ಜನರೇ ಜಾಗೃತಿಯಾಗಿ ವ್ಯಾಕ್ಸಿನ್ ಹಾಕಿಸಿಕೊಂಡರು. ಸಿದ್ದು, ಡಿಕೆ ಬೆಂಬಲಿಗರು ಕದ್ದು ಬಂದು ಲಸಿಕೆ ಪಡೆದರು. ಕಾಂಗ್ರೆಸ್ ನಾಯಕರು ಸುಳ್ಳು ಹೇಳ್ತಿದ್ದಾರೆ ಅಂತ ಈಶ್ವರಪ್ಪ ಹೇಳಿದ್ದಾರೆ.

ಮೋದಿಯವರನ್ನ ವಿಶ್ವ ನಾಯಕ ಎಂದು ಪ್ರಪಂಚ ಒಪ್ಪಿಕೊಂಡಿದೆ. ಕಾಂಗ್ರೆಸ್ಸಿನವರು ಕೆಟ್ಟ ಪದ ಬಳಸಿ ಏಕವಚನದಲ್ಲಿ ಮೋದಿ ಬಗ್ಗೆ ಮಾತನಾಡುತ್ತಾರೆ. ಬಡವರು, ಸೈನಿಕರು ಮೋದಿ ಅವರನ್ನು ಮೆಚ್ಚಿದ್ದಾರೆ. ಇವರು ಏಕವಚನದಲ್ಲಿ ಮೋದಿಗೆ ಮಾತನಾಡುತ್ತಾರೆ. ಸುಳ್ಳು ಹೇಳಿ ದೇಶವನ್ನ ದಾರಿ ತಪ್ಪಿಸುತ್ತಿದ್ದಾರೆ. ಇವತ್ತು ದೇಶದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ ಎಂದರು.

RELATED TOPICS:
English summary :Eshwarappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...