Sun,May19,2024
ಕನ್ನಡ / English

ಬಿಡಿಎ ಮೇಲೆ ಎಸಿಬಿ ದಾಳಿ: ಅಕ್ರಮವೆಸಗಿರುವ ನೂರಾರು ಕೋಟಿ ದಾಖಲೆಗಳು ವಶ! | ಜನತಾ ನ್ಯೂಸ್

21 Nov 2021
3532

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೇಂದ್ರ ಕಚೇರಿ ಮೇಲೆ ದಾಳಿ ಮುಂದುವರೆಸಿರುವ ಎಸಿಬಿ ಅಧಿಕಾರಿಗಳು ಶನಿವಾರ ರೂ.100 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಮತ್ತೊಂದೆಡೆ ಬಿಡಿಎ ಕಚೇರಿಯನ್ನು ತಮ್ಮ ವಶಕ್ಕೆ ಪಡೆದುಕೊಂಡಿರುವ ಅಧಿಕಾರಿಗಳು ಬೀಗ ಹಾಕಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಇನ್ನೂ ಕೆಲವು ದಿನಗಳ ಕಾಲ ದಾಳಿ ಮುಂದುವರೆಯಲಿದ್ದು, ದೊರೆತ ಸಾಕ್ಷ್ಯಧಾರಗಳ ಮೇಲೆ ವಿಚಾರಣೆಗಾಗಿ ಬಿಡಿಎ ಅಧಿಕಾರಿಗಳು ವಶಕ್ಕೆ ಪಡೆಯಲಾಗುವುದು ಎಂದು ಎಸಿಬಿ ಹೇಳಿಕೆಯಲ್ಲಿ ತಿಳಿಸಿದೆ.

ಬಿಡಿಎ ಅಭಿವೃದ್ಧಿಪಡಿಸಿರುವ ಅರ್ಕಾವತಿ, ಕೆಂಪೇಗೌಡ, ವಿಶ್ವೇಶ್ವರಯ್ಯ, ಕೆಂಗೇರಿ, ಉಳ್ಳಾಲ, ಸ್ಯಾಟಲೈಟ್‌ ವ್ಯಾಪ್ತಿಯಲ್ಲಿರುವ ಬಡಾವಣೆಗಳ ನಿವೇಶನಗಳನ್ನು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಅನರ್ಹ ವ್ಯಕ್ತಿಗಳಿಗೆ ನೋಂದಣಿ ಮಾಡಿದ್ದಾರೆ. ಮಧ್ಯವರ್ತಿಗಳ ಜತೆ ಸೇರಿಕೊಂಡು ಹಲವರಿಗೆ ಸಾವಿರಾರು ಚದರ ಅಡಿ ಜಾಗ ಮಂಜೂರು ಮಾಡಿರುವುದು ಶೋಧದ ವೇಳೆ ಬೆಳಕಿಗೆ ಬಂದಿದೆ.

ಬಿಡಿಎ ಅಧಿಕಾರಿ ಮತ್ತು ಸಿಬ್ಬಂದಿ ಶಾಮೀಲಾಗಿ ಬೆಲೆಬಾಳುವ ಈ ನಿವೇಶನಗಳನ್ನು ಅನರ್ಹ ವ್ಯಕ್ತಿಯೊಬ್ಬರಿಗೆ ಸಿಗುವಂತೆ ಮಾಡಲಾಗಿರುವ ಹಲವು ದಾಖಲೆಗಳನ್ನು ಜಪ್ತಿ ಮಾಡಲಾಗಿದೆ ಎನ್ನಲಾಗಿದೆ.

ಅಕಾರ್ವತಿ ಲೇಔಟ್, ಕೆಂಪೇಗೌಡ ಲೇಔಟ್, ಚಂದ್ರ ಲೇಔಟ್ ಮತ್ತಿತರ ಕಡೆಗಳಲ್ಲಿ ಅಕ್ರಮವಾಗಿ ಬಿಡಿಎ ನಿವೇಶನ ಹಂಚಿಕೆ ಮಾಡಿರುವುದನ್ನು ಕೂಡಾ ಕಂಡುಬಂದಿದೆ ಎನ್ನಲಾಗಿದೆ.

ಸಂಬಂಧಪಟ್ಟ ದಾಖಲೆಗಳು ಮತ್ತು ನೊಂದಣಿ ಸಹಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಷ್ಟೇ ಅಲ್ಲದೇ ಸರಕಾರಿ ಜಮೀನುಗಳನ್ನು ಖಾಸಗಿ ವ್ಯಕ್ತಿಗಳು ಮಾಲಿಕತ್ವ ಹೊಂದಿರುವಂತೆ ಅಕ್ರಮ ದಾಖಲಾತಿಗಳನ್ನು ಸೃಷ್ಟಿಸಿರುವ ಬಿಡಿಎ ಅಧಿಕಾರಿ ಮತ್ತು ಸಿಬ್ಬಂದಿಗಳು, ಖಾಸಗಿ ವ್ಯಕ್ತಿಗಳೊಂದಿಗೆ ಕೂಡಿಕೊಂಡು ಕೊಟ್ಯಂತರ ರೂ. ಮೌಲ್ಯದ ಪರಿಹಾರ ಧನವನ್ನು ತಮ್ಮವರಿಗೆ ನೀಡಿದ್ದಾರೆ ಎನ್ನಲಾಗಿದೆ.

ಈ ವಂಚಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುತ್ತದೆ. ಮಂಗಳವಾರ ಮತ್ತೆ ಶೋಧ ಕಾರ್ಯ ಮುಂದುವರಿಯಲಿದೆ ಎಂದು ಎಸಿಬಿ ತಿಳಿಸಿದೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...