Sun,May19,2024
ಕನ್ನಡ / English

ಜಲಾವೃತ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಗೆ ಬಿಬಿಎಂಪಿ ಮುಖ್ಯ ಆಯುಕ್ತರ ಭೇಟಿ | ಜನತಾ ನ್ಯೂಸ್

22 Nov 2021
2051

ಬೆಂಗಳೂರು : ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಯಲಹಂಕ ವಲಯ ಕೆಂಪೇಗೌಡ ವಾರ್ಡ್ ವ್ಯಾಪ್ತಿಯ ಯಲಹಂಕ ಕೆರೆ ತುಂಬಿ ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತಗೊಂಡಿರುವ ಸ್ಥಳಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿನ್ನೆ ರಾತ್ರಿ ಎರಡು ಗಂಟೆ ಸಮಯದಲ್ಲಿ 130 ಮಿ.ಮೀಗೂ ಹೆಚ್ಚು ಮಳೆಯಾದ ಪರಿಣಾಮ ಯಲಹಂಕ ಕೆರೆ ತುಂಬಿ ಕೆರೆಯ ಕೋಡಿ ಬಿದ್ದು, ರಾಜಕಾಲುವೆಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಪರಿಣಾಮ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಸುಮಾರು 4 ಅಡಿಯಷ್ಟು ನೀರು ನಿಂತು ಜಲಾವೃತಗೊಂಡಿತ್ತು.

ಮುಖ್ಯ ಆಯುಕ್ತರ ಗೌರವ್ ಗುಪ್ತ ರವರು ಮಾತನಾಡಿ, ಯಲಹಂಕ ವಲಯ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ 130 ಮಿ.ಮೀ ಗೂ ಹೆಚ್ಚು ಮಳೆಯಾದ ಪರಿಣಾಮ ಕೆರೆ ತುಂಬಿ ರಾಜಕಾಲುವೆಯಲ್ಲಿ ಹೆಚ್ಚಿನ ನೀರು ಹರಿದಿರುವ ಅಪಾರ್ಟ್ಮೆಂಟ್ ನಲ್ಲಿ ಜಲಾವೃತಗೊಂಡಿದೆ. ಪಾಲಿಕೆ ವತಿಯಿಂದ ಅಪಾರ್ಟ್ಮೆಂಟ್ ನಿವಾಸಿಗಳಿಗೆ ತಿಂಡಿ, ಹಾಲು ವಿತರಣೆ ಕೆಲಸ ಮಾಡಲಾಗುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಎಂದರು.

ಅಪಾರ್ಟ್ಮೆಂಟ್ ನಲ್ಲಿ 604 ಪ್ಲಾಟ್ ಗಳಿದ್ದು, 1,600 ನಿವಾಸಿಗಳು ವಾಸಿಸುದ್ದಾರೆ. ಮೆನೆಯಲ್ಲಿರುವವರಿಗೆ ಹಾಲು, ಬಿಸ್ಕೆಟ್, ಕ್ಯಾಂಡಲ್, ಬ್ರೆಡ್, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. 18 ಎನ್.ಡಿ.ಆರ್.ಎಫ್ ತಂಡಗಳು ಹಾಗೂ ಅಗ್ನಿ ಶಾಮಕ ತಂಡಗಳು ದೋಣಿಗಳು ಹಾಗೂ ಟ್ರ್ಯಾಕ್ಟರ್ ಮೂಲಕ ನಿವಾಸಿಗಳನ್ನು ಮನೆಯಿಂದ ಹೊರಗೆ ಕರೆತರುವ ಹಾಗೂ ಒಳಗೆ ಕರೆದೊಯ್ಯುವ ಕೆಲಸ ಮಾಡುತ್ತಿದ್ದಾರೆ. ಯಾರಿಗೂ ಯಾವುದೇ ಸಮಸ್ಯೆ ಆಗುರಿವುದಿಲ್ಲ. ಪಾಲಿಕೆಯ ಕಂದಾಯ ಅಧಿಕಾರಿಗಳ ತಂಡವು ನಿವಾಸಿಗಳ ಮನೆಗೆ ತೆರಳಿ ಏನೇನು ಸಮಸ್ಯೆಯಾಗಿದೆ ಎಂಬ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಸ್ಥಳದಲ್ಲಿ ಪಾಲಿಕೆಯ ವೈದ್ಯಕೀಯ ತಂಡದ ವ್ಯವಸ್ಥೆ ಮಾಡಲಾಗಿದ್ದು, 8 ವೈದ್ಯರನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ದಿನದ 24 ಗಂಟೆಯೂ ಒಬ್ಬ ವೈದ್ಯ, ಸಿಬ್ಬಂದಿ ಹಾಗೂ ಬೇಸಿಕ್ ಲೈಫ್ ಸಪೋರ್ಟ್ ಆಂಬುಲೆನ್ಸ್ ನ ವ್ಯವಸ್ಥೆ ಮಾಡಲಾಗಿದ್ದು, ಅಪಾರ್ಟ್ಮೆಂಟ್ ನಲ್ಲಿರುವ ನಿವಾಸಿಗಳಿಗೆ ಏನಾದರು ಸಮಸ್ಯೆಯಾದರೆ ವೈದ್ಯಕೀಯ ತಂಡ ಕೂಡಲೆ ಸ್ಪಂದಿಸಲಿದೆ. ಯಾರಾದರು ಆಸ್ಪತ್ರೆಗೆ ತೆರಳುವ ಅವಶ್ಯಕತೆ ಇದ್ದರೆ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗುವುದು.

ಅಪಾರ್ಟ್‌ಮೆಂಟ್ ನಲ್ಲಿ ನಿಂತಿರುವ ನೀರನ್ನು ರಾಜಕಾಲುವೆಯ ಮೂಲಕ ಹರಿದು ಹೋಗುವ ವ್ಯವಸ್ಥೆ ಮಾಡಲಾಗುತ್ತಿದೆ. ಯಲಹಂಕ ಕೆರೆಯಿಂದ ಜಕ್ಕೂರು ಕೆರೆಗೆ ಸಂಪರ್ಕ ಕಲ್ಪಿಸುವ ರಾಜಕಾಲುವೆಯು 8 ಅಡಿ ಅಗಲವಿದ್ದು, ಅದನ್ನು 33 ಅಡಿ ಅಗಲ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಸಂಬಂಧ ಸೂಕ್ತ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಪಾಸಣೆ ವೇಳೆ ಮಾನ್ಯ ಶಾಸಕರು ಎಸ್.ಆರ್.ವಿಶ್ವನಾಥ್, ವೇಳೆ ಜಂಟಿ ಆಯುಕ್ತರು ಪೂರ್ಣಿಮಾ, ಮುಖ್ಯ ಇಂಜಿನಿಯರ್ ರಂಗನಾಥ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

RELATED TOPICS:
English summary :BBMP chief commissioner visits flooded Yalahanka Kendriya Vihara Apartment

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...