Sat,May04,2024
ಕನ್ನಡ / English

ವಿವಿಧ ಪಕ್ಷಗಳ ಹಲವಾರು ನಾಯಕರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ: ಸಿದ್ದರಾಮಯ್ಯ | ಜನತಾ ನ್ಯೂಸ್

07 Dec 2021
1706

ಮಂಡ್ಯ : ಮುಂದೆ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ. ವಿವಿಧ ಪಕ್ಷಗಳ ಹಲವಾರು ನಾಯಕರು ಕಾಂಗ್ರೆಸ್ ಪಕ್ಷದತ್ತ ಬರುತ್ತಿದ್ದಾರೆ. ಈಗಾಗಲೇ ಹಲವರು ಬರುತ್ತಿದ್ದಾರೆ. ಇನ್ನು ಹಲವರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದಿದ್ದಾರೆ.

2023ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ 100% ಗೆಲ್ತಾರೆ. ಮಂಡ್ಯ ಸೇರಿದಂತೆ ರಾಜ್ಯಾದ್ಯಂತ ಬಹುತೇಕರು ಕಾಂಗ್ರೆಸ್ ಗೆ ಸೇರುತ್ತಾರೆ. ಯಾರು ಸೇರುತ್ತಾರೆ ಎಂದು ನಾನು ಈಗಲೇ ಹೇಳಲ್ಲ. ಮುಂದಿನ ದಿನಗಳಲ್ಲಿ ಎಲ್ಲ ಗೊತ್ತಾಗುತ್ತದೆ ಎಂದು ತಿಳಿಸಿದರು.

ಸ್ಥಳೀಯ ಸಂಸ್ಥೆಗಳಿಗೆ ಬಿಜೆಪಿ, ಜೆಡಿಎಸ್ ಕೊಡುಗೆ ಶೂನ್ಯ, ಪಂಚಾಯತ್ ರಾಜ್ ವ್ಯವಸ್ಥೆ ಬಲವರ್ಧನೆಗೆ ಬಿಜೆಪಿ, ಜೆಡಿಎಸ್ ಕೊಡುಗೆ ಶೂನ್ಯ. ಸ್ಥಳೀಯ ಸಂಸ್ಥೆಗಳಿಗೆ ಬಲ ಕೊಟ್ಟಿದ್ದು ಕಾಂಗ್ರೆಸ್. ಎಲ್ಲಾ ವರ್ಗಗಳಿಗೆ ರಾಜಕೀಯ ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್. ಅಧಿಕಾರ ವಿಕೇಂದ್ರೀಕರಣದಲ್ಲಿ ನಂಬಿಕೆ, ಬದ್ಧತೆ ಇರೋದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ಇದಕ್ಕೆ ಜೆಡಿಎಸ್, ಬಿಜೆಪಿ ಪಕ್ಷಗಳ ಕೊಡುಗೆ ಏನು? ಎಂದು ಪ್ರಶ್ನಿಸಿದ್ದಾರೆ.

ನರೇಗ ಯೋಜನೆ ಜಾರಿಗೆ ತಂದಿದ್ದು ಕಾಂಗ್ರೆಸ್. ನರೇಗ ಯೋಜನೆಯಿಂದ ಪಂಚಾಯಿತಿಗಳಿಗೆ ಕೋಟಿ ಕೋಟಿ ಅನುದಾನ ನೀಡಲಾಗಿದೆ. ಹಲವು ತಿಂಗಳಿಂದ ನರೇಗ ಯೋಜನೆಯಡಿ ಕೂಲಿ ಹಣ ಕೊಟ್ಟಿಲ್ಲ. ನಮ್ಮ ಕಾಲದಲ್ಲಿ ಮಂಜೂರಾದ ಮನೆಗಳಿಗೆ ಇನ್ನೂ ಅನುದಾನ ಕೊಟ್ಟಿಲ್ಲ. ಎಲ್ಲವನ್ನೂ ಲಾಕ್ ಮಾಡಿದ್ದಾರೆ. ಈ ಬಗ್ಗೆ ಯಾರು ಬೇಕಾದರೂ ಪರಿಶೀಲನೆ ಮಾಡಬಹುದು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ ಪಕ್ಷದಿಂದ ಮೈತ್ರಿ ನಿರಾಕರಣೆಗೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಮಗುವನ್ನು ಚಿವುಟಿ, ತೊಟ್ಟಿಲನ್ನೂ ತೂಗ್ತಾರೆ. ಸ್ಥಳೀಯ ನಾಯಕರಿಗೆ ಇನ್ ಡೈರೆಕ್ಟ್ ಆಗಿ ಹೇಳಿ ಕೊಟ್ಟಿದ್ದಾರೆ ಎಂದು ಜೆಡಿಎಸ್ ನಡೆ ಬಗ್ಗೆ ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಇವತ್ತು ಎಲ್ಲಾ ಕಡೆ ಬಿಜೆಪಿ ವಿರುದ್ಧವಾದ ಗಾಳಿ ಬೀಸಲು ಶುರುವಾಗಿದ್ದು, ರಾಜಕೀಯ ಧ್ರುವೀಕರಣ ಆರಂಭವಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ ಜನಾಕ್ರೋಶ ಶುರುವಾಗಿದೆ. ಅಭಿವೃದ್ಧಿ, ಶೂನ್ಯ, ಭ್ರಷ್ಟಾಚಾರ, ಭರವಸೆ ಈಡೇರಿಸದ ಬಿಜೆಪಿ. ಹೀಗಾಗಿ ಜನ ಬಿಜೆಪಿ ವಿರುದ್ಧ ಸಿಡಿದೆದ್ದಿದ್ದಾರೆ ಎಂದಿದ್ದಾರೆ.

RELATED TOPICS:
English summary :Siddaramaiah

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...