Sun,May19,2024
ಕನ್ನಡ / English

ಕಾರ್ಮಿಕರಿಗೆ ರಾಜ್ಯದಾದ್ಯಂತ ಉಚಿತ ಬಸ್ ಪಾಸ್, ಕಾರ್ಮಿಕ ಇಲಾಖೆಯಿಂದ ಭರ್ಜರಿ ಗಿಫ್ಟ್ | ಜನತಾ ನ್ಯೂಸ್

11 Dec 2021
2988

ಬೆಂಗಳೂರು : ಶ್ರಮಿಕ ವರ್ಗದ ಸಂಕ್ಷೇಮಕ್ಕೆ ಶ್ರಮಿಸುತ್ತಿರುವ ಕಾರ್ಮಿಕ ಇಲಾಖೆಯು ಇದೀಗ ಕಾರ್ಮಿಕರು ತಮ್ಮ ಕೆಲಸದ ಪ್ರದೇಶಗಳಿಗೆ ತೆರಳಲು ಅನುವಾಗುವಂತೆ ಉಚಿತ ಸಾರಿಗೆ ಸೇವೆ ಒದಗಿಸಲು ಮುಂದಾಗಿದೆ.

ಬೆಂಗಳೂರು ಮಹಾನಗರದಲ್ಲಿ ಈಗಾಗಲೇ ಈ ಉಚಿತ ಸೇವೆಯನ್ನು ಜಾರಿ ಮಾಡಿರುವ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ.

ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರ ಪ್ರಯತ್ನ ಫಲವಾಗಿ ಈ ಸಂಬಂಧ ಸಾರಿಗೆ ಇಲಾಖೆ ಜತೆ ಹಲವಾರು ಸುತ್ತಿನ ಮಾತುಕತೆಗಳು ನಡೆದಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈಗಾಗಲೇ ಈ ಯೋಜನೆಯನ್ನು ಜಾರಿಗೊಳಿಸಿದೆ.

ದಿನ ನಿತ್ಯ ಕೂಲಿಗಾಗಿ ತೆರಳುವ ಕಟ್ಟಡ ಕಾರ್ಮಿಕರಿಗೆ ಈ ಯೋಜನೆ ಲಾಭಕಾರಿಯಾಗಿದ್ದು, ಪ್ರತಿ ನಿತ್ಯ ಅವರು ಕೆಲಸ ನಿರ್ವಹಣೆಗೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ತೆರಳಲು ಕನಿಷ್ಠ 150 ರಿಂದ 200 ರೂ. ವ್ಯಯಿಸಬೇಕಾದ ಪರಿಸ್ಥಿತಿ ಇದೆ. ಇದರಿಂದ ಅವರು ಪಡೆಯುವ ಕೂಲಿ ಮೊತ್ತದ ಬಹುಭಾಗವನ್ನು ಸಾರಿಗೆಗೆ ವ್ಯಯಿಸುತ್ತಿದ್ದರು. ಇದನ್ನು ಮನಗಂಡ ಸಚಿವ ಶಿವರಾಂ ಹೆಬ್ಬಾರ್, ಕಟ್ಟಡ ಕಾರ್ಮಿಕರ ಅನುಕೂಲಕ್ಕಾಗಿ ಉಚಿತ ಸಾರಿಗೆ ವ್ಯವಸ್ಥೆಯ ಯೋಜನೆಗೆ ಚಾಲನೆ ನೀಡಿದರು.

ಬಿಎಂಟಿಸಿ ಉಚಿತ ಪಾಸ್ ಪಡೆಯುವುದು ಹೇಗೆ?
* ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ನೊಂದಾಯಿಸಿಕೊಂಡಿರಬೇಕು.
* ಮಂಡಳಿ ಗುರುತಿನ ಚೀಟಿ
* ಎರಡು ಸ್ಟಾಂಪ್ ಅಳತೆಯ ಭಾವಚಿತ್ರ
* ಆಧಾರ್ ಕಾರ್ಡ್ ಪ್ರತಿ

ಎಲ್ಲೆಲ್ಲಿ ಪಡೆಯಬಹುದು?
ಕೆಂಪೇಗೌಡ ಬಸ್ ನಿಲ್ದಾಣ,
ಶಿವಾಜಿನಗರ,
ವೈಟ್‍ಫೀಲ್ಡ್ ಟಿಟಿಎಂಸಿ,
ಯಶವಂತಪುರ,
ಬನಶಂಕರಿ,
ವಿಜಯನಗರ,
ಶಾಂತಿನಗರ,
ದೊಮ್ಮಲೂರು,
ಕೋರಮಂಗಲ ಬಿಎಂಟಿಸಿ ಘಟಕಗಳು,
ಕೆಂಗೇರಿ ಟಿಟಿಎಂಸಿ,
ಯಲಹಂಕ ಹಳೆಯ ಬಸ್ ನಿಲ್ದಾಣ, ಹೊಸಕೋಟೆ ಬಸ್ ನಿಲ್ದಾಣ,
ಸುಮನಹಳ್ಳಿ ಡಿಪೋ,
ಕೆ.ಆರ್.ಪುರ,
ಹೆಚ್‍ಎಸ್‍ಆರ್ ಲೇಔಟ್,
ಹೆಬ್ಬಾಳ ಬಿಎಂಟಿಸಿ ಘಟಕಗಳು,
ನಾಗಮಂಗಲ ಡಿಪೋ,
ಬಾಗಲಗುಂಟೆಯಲ್ಲಿ ಕಾರ್ಮಿಕ ಇಲಾಖೆ,
ಡೈರಿ ಸರ್ಕಲ್ ಬಳಿಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಚೇರಿಗಳನ್ನು ದಾಖಲೆಗಳನ್ನು ಸಲ್ಲಿಸಿ ಪಾಸ್‍ಗಳನ್ನು ಪಡೆದುಕೊಳ್ಳಬಹುದು.

RELATED TOPICS:
English summary :Shivaram Hebbar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...