Mon,May06,2024
ಕನ್ನಡ / English

ನಗರದ ರಸ್ತೆಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಅಧಿಕಾರಿಗಳಿಗೆ ಸೂಚನೆ: ಮುಖ್ಯ ಆಯುಕ್ತರು | ಜನತಾ ನ್ಯೂಸ್

11 Dec 2021
2521

ಬೆಂಗಳೂರು : ಕಾಂಕ್ರಿಟ್ ರಸ್ತೆ ಹೊರತುಪಡಿಸಿ ಬಹುತೇಕ ಹಾಳುಬಿದ್ದಿರುವ ಸಿಲಿಕಾನ್ ಸಿಟಿ ರಸ್ತೆಗಳಿಗೆ ದುರಸ್ತಿ ಭಾಗ್ಯ ದೊರಕುವ ಹಾಗೆ ಕಂಡುಬಂದಿದೆ.

ಬಿಬಿಎಂಪಿ ವ್ಯಾಪ್ತಿಯ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳು ಹಾಗೂ ದುರಸ್ತಿ ರಸ್ತೆಗಳಿಗೆ ಡಾಂಬರೀಕರಣ ಮಾಡುವ ಕೆಲಸವನ್ನು ಕೂಡಲೆ ಕೈಗೆತ್ತಿಕೊಳ್ಳಲು ಮುಖ್ಯ ಆಯುಕ್ತರಾದ ಗೌರವ್ ಗುಪ್ತ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು, ಎಂದು ಬಿಬಿಎಂಪಿ ಪ್ರಕಟಣೆ ಹೊರಡಿಸಿದೆ.

ನಗರದಲ್ಲಿ ರಸ್ತೆಗುಂಡಿಗಳನ್ನು ಮುಚ್ಚುವ ಹಾಗೂ ಡಾಂಬರೀಕರ ಮಾಡುವ ಸಂಬಂಧ ವರ್ಚುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ರಸ್ತೆಗಳಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸವಾಗಬೇಕು. ಯಾವುದಾದರು ರಸ್ತೆಯಲ್ಲಿ ರಸ್ತೆ ಗುಂಡಿ ಮುಚ್ಚದೇ ಇರುವುದು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳೇ ಜವಾಬ್ದಾರರು, ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ನಗರದಲ್ಲಿ‌ ದುರಸ್ತಿಯಾಗಿರುವ ರಸ್ತೆಗಳ ಪೈಕಿ, ಯಾವ್ಯಾವ ರಸ್ತೆಗಳನ್ನು ಕೂಡಲೆ ದುರಸ್ತಿಪಡಿಸಬಹುದು ಎಂಬುದನ್ನು ಪಟ್ಟಿ ಮಾಡಿ ಕೂಡಲೆ‌ ಡಾಂಬರೀಕರಣ ಕೆಲಸವನ್ನು ಪ್ರಾರಂಭಿಸಬೇಕು. ತೀರಾ ದುರಸ್ತಿಯಲ್ಲಿರುವ ರಸ್ತೆಗಳಲ್ಲಿ ಯಾವುದೇ ಹಾನಿಯುಂಟಾಗದ ಹಾಗೆ ವಾಹನಗಳು ಸಂಚರಿಸುವ ರೀತಿಯಲ್ಲಿ ದುರಸ್ತಿ ಕಾರ್ಯ ಕೈಗೊಂಡು ನಂತರ ಡಾಂಬರೀಕರಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಸ್ತೆ ಗುಂಡಿಗಳನ್ನು ಮುಚ್ಚುವ ಹಾಗೂ ಡಾಂಬರೀಕರಣ ಮಾಡುವ ಸಂಬಂಧ ಎಲ್ಲಾ ವಲಯಗಳಲ್ಲಿಯೂ ತ್ವರಿತವಾಗಿ ಕೆಲಸ ಪ್ರಾರಂಭಿಸಬೇಕು. ಈ ಸಂಬಂಧ ಪ್ರತಿ ನಿತ್ಯ ಯಾವ್ಯಾವ ರಸ್ತೆಗಳಲ್ಲಿ ಕೆಲಸ ಪ್ರಾರಂಭಿಸಲಾಗಿದೆ, ಎಷ್ಟು ಕೆಲಸ ಮುಗಿದಿದೆ, ನಾಳೆ ಯಾವ್ಯವ ರಸ್ತೆಗಳ ದುರಸ್ತಿ ಮಾಡಲಾಗುತ್ತದೆ ಎಂಬುದರ ಮಾಹಿತಿಯನ್ನು ನೀಡಬೇಕು. ಜೊತೆಗೆ 110 ಹಳ್ಳಿಗಳಿಗೆ ಸಂಬಂಧಿಸಿದ ರಸ್ತೆಗಳ ದುರಸ್ತಿ ಕಾರ್ಯವನ್ನು ಕೂಡಲೆ ಪ್ರಾರಂಭಿಸಿ ವಾಹನಗಳು ಸಂಚರಿಸುವ ರಸ್ತೆ ಪುನಶ್ಚೇತನ ಕಾರ್ಯ ಮಾಡಲು ಸೂಚಿಸಿದರು.

ಬೀದಿ ದೀಪಗಳ ನಿರ್ವಹಣೆಗೆ ಸೂಚನೆ:
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ದೀಪಗಳ‌ ನಿರ್ವಹಣೆ ಸರಿಯಾಗಿ ಆಗಬೇಕು. ಎಲ್ಲೆಲ್ಲಿ ಬೀದಿ ದೀಪಗಳಲ್ಲಿ ಎಂಬುದನ್ನು ವಿಧಾನಸಭಾ ಕ್ಷೇತ್ರವಾರು ಸಮೀಕ್ಷೆ ಮಾಡಿ ಅದನ್ನು ಪಟ್ಟಿ ಮಾಡಿ ಎಲ್.ಇ.ಡಿ ದೀಪಗಳನ್ನು ಅಳವಡಿಸಬೇಕು. ಹೆಚ್ಚುವರಿಯಾಗಿ ಬೀದಿ ದೀಪಗಳ ಅವಶ್ಯಕತೆಯಿದ್ದರೆ ಕೂಡಲೆ ಅಗತ್ಯ ಕ್ರಮ ಕೈಗೊಂಡು ಎಲ್ಲಾ ಕಡೆ ಬೀದಿ ದೀಪಗಳನ್ನು ಅಳವಡಿಸಲು ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಪ್ರಭಾಕರ್, ಯೋಜನಾ ವಿಭಾಗದ ಮುಖ್ಯ ಇಂಜಿನಿಯರ್ ಲೋಕೇಶ್, ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಇಂಜಿನಿಯರ್ ಪ್ರಹ್ಲಾದ್, ಎಲ್ಲಾ ವಲಯ ಮುಖ್ಯ ಇಂಜಿನಿಯರ್‌ಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾತರಿಗಳು ಉಪಸ್ಥಿತರಿದ್ದರು.

RELATED TOPICS:
English summary :Chief commissioner directs officers to repair road potholes immediately

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...