Thu,May02,2024
ಕನ್ನಡ / English

ಕನ್ನಡ ಕಟುಕರ ಕೈಯಲ್ಲಿ ಸಿಲುಕಿಕೊಂಡಿದೆ: ಎಚ್‌ಡಿ ಕುಮಾರಸ್ವಾಮಿ | ಜನತಾ ನ್ಯೂಸ್

21 Dec 2021
2956

ಬೆಳಗಾವಿ : ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎಂದು ನಾನು ಹಿಂದೆಯೇ ಹೇಳಿದ್ದೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ ಅಂತ ನಾನು ಹಿಂದೆಯೇ ಹೇಳಿದ್ದೆ, ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ.

ಬೆಳಗಾವಿಯಲ್ಲಿ ನಡೆದ ವಿಕೃತಿ ಬಗ್ಗೆ, #ಕನ್ನಡಿಗರಹೆಮ್ಮೆ ಸಂಗೊಳ್ಳಿ ರಾಯಣ್ಣ ಅವರಿಗಾದ ಅಪಚಾರದ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳ ಬದ್ಧತೆ ಬಗ್ಗೆ ಈಗ ಪ್ರಶ್ನೆ ಉಂಟಾಗಿದೆ ಎಂದು ಮಾಜಿ ಸಿಎಂ ಎಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ಮಾತೆತ್ತಿದರೆ ರಾಷ್ಟ್ರದ ಸಮಗ್ರತೆಯ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕವು 30 ರಾಜ್ಯಗಳಲ್ಲಿ ಒಂದು ರಾಜ್ಯವಷ್ಟೆ. ಕನ್ನಡವು ದೇಶದ ಭಾಷೆಗಳಲ್ಲಿ ಒಂದು ಭಾಷೆ ಮಾತ್ರ. ಆದರೆ ನಮಗೆ ಕರ್ನಾಟಕವೇ ಕರ್ಮಭೂಮಿ. ಕನ್ನಡವೇ ತಾಯಿ. ನಾವು ಕನ್ನಡಮ್ಮನ ಕರುಳಬಳ್ಳಿಗಳು ಎಂದು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕ ಕೇವಲ ಚುನಾವಣೆ ಬಂದಾಗ ವೋಟ್ ಮಾಡುವ ಮತಯಂತ್ರ ಹಾಗೂ ತೆರಿಗೆ ರೂಪದಲ್ಲಿ ಕೇಂದ್ರದ ಖಜಾನೆ ತುಂಬುವ ಅಕ್ಷಯ ಪಾತ್ರೆ ಎಂದಿರುವ ಎಚ್‌ಡಿಕೆ, ಆದರೆ; ನಮಗೆ ನೆರೆ, ಬರ ಬಂದಾಗ ಅವರ ಮುಂದೆಯೇ ಭಿಕ್ಷೆಗೆ ನಿಲ್ಲಬೇಕು! ಇದೆಂಥಾ ವಿಪರ್ಯಾಸ? ಎಂದು ಕಿಡಿಕಾರಿದ್ದಾರೆ. ಅಲ್ಲದೇ, ಗಡಿ, ಭಾಷೆ, ಜಲದ ಪ್ರಶ್ನೆ ಬಂದಾಗ ಆ ಪಕ್ಷಗಳ ಆದ್ಯತೆ ಕನ್ನಡ- ಕರ್ನಾಟಕ ಅಲ್ಲ. ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಬಂದವರನ್ನು ಸಹಿಸಿಕೊಳ್ಳುತ್ತಿದ್ದೇವೆ. ಕನ್ನಡಿಗರ ತೆರಿಗೆ ಹಣದಲ್ಲಿ ಜಾರಿ ಮಾಡಿದ ಯೋಜನೆ, ರಸ್ತೆ, ಸೇತುವೆಗಳಿಗೆ ಮಹಾರಾಷ್ಟ್ರದಲ್ಲಿ ಹುಟ್ಟಿದವರ ಹೆಸರಿಟ್ಟು ಔದಾರ್ಯ ತೋರುತ್ತಿದ್ದೆವೆ. ಇದು ಇನ್ನೆಷ್ಟು ದಿನ? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಇನ್ನು ಬೆಳಗಾವಿಯ ಒಂದು ಹಳ್ಳಿಯಲ್ಲಿ ಹುಟ್ಟಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ, ಅದೇ ಬ್ರಿಟಿಷರು ಬಿಗಿದ ನೇಣು ಹಗ್ಗಕ್ಕೆ ಕೊರಳು ಕೊಟ್ಟ ಸಂಗೊಳ್ಳಿ ರಾಯಣ್ಣ ಅವರನ್ನು ಅಪಮಾನಿಸುತ್ತಾರೆ. ಅದೇ ಮೊಘಲರ ವಿರುದ್ಧ ಹೋರಾಡಿದ ಶಿವಾಜಿಯನ್ನು ಕೊಂಡಾಡುತ್ತಾರೆ. ಇದೆಂಥಾ ದೇಶಪ್ರೇಮ? ರಾಷ್ಟ್ರ ಪ್ರೇಮದಲ್ಲೂ ಬೇಧ ಭಾವವೇ? 2006ರಲ್ಲಿ ಶಿವಸೇನೆ-ಎಂಇಎಸ್ ಗಡಿತಂಟೆ ಮಾಡಿದಾಗ, ಆಗ ಕೇಂದ್ರದಲ್ಲಿ ಗೃಹಮಂತ್ರಿಯಾಗಿದ್ದ ಅದೇ ರಾಜ್ಯದ ನಾಯಕರು ಬೆಳಗಾವಿ ಮೇಲೆ ಕಣ್ಣು ಹಾಕಿದಾಗ, ಅಲ್ಲಿ ವಿಧಾನಕಲಾಪ ನಡೆಯಿತು. ಸುವರ್ಣಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆಯೂ ಆಯಿತು. ಇದು ಕನ್ನಡದ ಒಂದು ಸಣ್ಣ ಪಕ್ಷಕ್ಕೆ ಇದ್ದ ಬದ್ಧತೆ. ಈ ಎದೆಗಾರಿಕೆ ರಾಷ್ಟ್ರೀಯ ಪಕ್ಷಗಳಿಗೆ ಏಕಿಲ್ಲ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ರಾಯಣ್ಣರ ಪ್ರತಿಮೆ ಮೇಲೆ "ಕೈ" ಇಟ್ಟವರ ಮೇಲೆ ಕರುಣೆ ತೋರುತ್ತಿರುವುದು ಯಾಕೆ? ಎಂಇಎಸ್ ಬಗ್ಗೆ ಎರಡು ನಾಲಗೆಯಲ್ಲಿ ಮಾತನಾಡುವ ಕೈಚಳಕದ ಮರ್ಮವೇನು? ಮಸೂದೆಗಳನ್ನು ಇಟ್ಟುಕೊಂಡು ಕನ್ನಡದ ಆಸ್ಮಿತೆಯ ಮೇಲಾದ ದಾಳಿಯನ್ನು ವಿಷಯಾಂತರ ಮಾಡುವ ಹುನ್ನಾರ ಏಕೆ? ಎಂದು ಪರೋಕ್ಷವಾಗಿ ವಿಪಕ್ಷ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದರು.

RELATED TOPICS:
English summary :HD Kumaraswamy

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...