Sun,May19,2024
ಕನ್ನಡ / English

ಪ್ರಿಯಾಂಕಾ ಗಾಂಧಿ ವಾಡ್ರಾ ಮಕ್ಕಳ ಇನ್‌ಸ್ಟಾಗ್ರಾಮ್ ಹ್ಯಾಕ್ : ಆರೋಪದ ಗಂಭೀರ ತನಿಖೆಗೆ ಮುಂದಾದ ಕೇಂದ್ರ | ಜನತಾ ನ್ಯೂಸ್

22 Dec 2021
2254

ನವದೆಹಲಿ : ತನ್ನ ಮಕ್ಕಳ ಇನ್‌ಸ್ಟಾಗ್ರಾಮ್ ಖಾತೆಗಳನ್ನು ಹ್ಯಾಕ್ ಆಗಿದ್ದಕ್ಕೂ ಕೇಂದ್ರ ಸರ್ಕಾರವೇ ಕಾರಣ, ಎಂಬ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಡ್ರಾ ಅವರ ಆರೋಪಕ್ಕೆ ಹಲವರು ನಕ್ಕು ಸುಮ್ಮನಾದರೆ, ಕೇಂದ್ರ ಸರ್ಕಾರ ಮಾತ್ರ ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿದೆ.

"ಸರ್ಕಾರ ತನ್ನ ಮಕ್ಕಳ ಇನ್‌ಸ್ಟಾಗ್ರಾಮ್ ಖಾತೆಗಳನ್ನು ಹ್ಯಾಕ್ ಮಾಡಿದೆ" ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆರೋಪಗಳನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಗಮನಕ್ಕೆ ತೆಗೆದುಕೊಂಡಿದೆ, ಎಂದು ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಗಳ ತನಿಖೆಗಾಗಿ ಸ್ವಯಂಪ್ರೇರಿತ ದೂರು ದಾಖಲಿಸಿ ತನಿಖೆ ನದಸಲು ಮುಂದಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮೂಲಗಳು ತಿಳಿಸಿವೆ.

"ಸರ್ಕಾರವು ನೈತಿಕತೆಯನ್ನು ಕಳೆದುಕೊಂಡಿದೆ ಮತ್ತು ಆದಾಯ ತೆರಿಗೆ ಇಲಾಖೆ ಸೇರಿದಂತೆ ಪ್ರತಿಪಕ್ಷಗಳ ಮೇಲೆ ದಾಳಿ ಮಾಡುವ ಮೂಲಕ ನಿರಂತರವಾಗಿ ದಾಳಿ ಮಾಡುತ್ತಿದೆ" ಎಂದು ಹೇಳಿದ್ದರು. “ಅವರು ಫೋನ್ ಟ್ಯಾಪಿಂಗ್ ಮಾಡುವುದನ್ನು ಬಿಟ್ಟುಬಿಡಿ. ನನ್ನ ಮಕ್ಕಳ ಇನ್‌ಸ್ಟಾಗ್ರಾಮ್ ಖಾತೆಗಳನ್ನೂ ಸಹ ಹ್ಯಾಕ್ ಮಾಡುತ್ತಿದ್ದಾರೆ. ಅವರಿಗೆ ಬೇರೆ ಕೆಲಸವಿಲ್ಲವೇ?” ಅವರು ಮೊನ್ನೆ ಲಕ್ನೋದಲ್ಲಿ ಹೇಳಿದರು. ಪ್ರಿಯಾಂಕಾ ಗಾಂಧಿ ವಾಡ್ರಾ ಕೇಂದ್ರ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದರು. ವಾಡ್ರಾ ಅವರು ಫೋನ್ ಕದ್ದಾಲಿಕೆ ಮತ್ತು ಇಡಿ-ಐಟಿ ದಾಳಿಗಳ ಘಟನೆಗಳ ಬಗ್ಗೆ ಅವರು ಉತ್ತರ ಪ್ರದೇಶದಲ್ಲಿ ತನ್ನ ಪ್ರಚಾರದ ವೇಳೆ ಮಾತನಾಡುತ್ತಿದ್ದರು.

ಎಷ್ಟೆಲ್ಲಾ ಬೆಳವಣಿಗೆ ನಡುವೆಯೂ, ಗಾಂಧಿ-ವಾಡ್ರಾ ಕುಟುಂಬವು ಅಧಿಕೃತವಾಗಿ ಯಾವುದೇ ದೂರು ದಾಖಲಿಸಿಲ್ಲ. ಹಾಗೂ ಪ್ರಿಯಾಂಕಾ ಗಾಂಧಿ ವಾಡ್ರಾ ಅವರ ಮಕ್ಕಳ ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ಯಾವುದೇ ಅನಿಯಮಿತ ಚಟುವಟಿಕೆಗಳು ಅಥವಾ ಪೋಸ್ಟಿಂಗ್‌ಗಳು ಕಂಡುಬಂದಿಲ್ಲ, ಎಂದು ಮೂಲಗಳು ತಿಳಿಸಿವೆ.

RELATED TOPICS:
English summary :Priyanka Gandhi Vadra kids Instagram hack : Center taken cognizance

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...