Sat,May04,2024
ಕನ್ನಡ / English

ರಾಜ್ಯದಲ್ಲಿ 12 ಹೊಸ ಒಮಿಕ್ರಾನ್ ಪ್ರಕರಣ ದೃಢ: 31ಕ್ಕೆ ಏರಿಕೆಯಾದ ಒಟ್ಟು ಪ್ರಕರಣ | ಜನತಾ ನ್ಯೂಸ್

23 Dec 2021
3404

ಬೆಂಗಳೂರು : ಕರ್ನಾಟಕದಲ್ಲಿ ಗುರುವಾರ ಮತ್ತೆ 12 ಹೊಸ ಓಮಿಕ್ರಾನ್ ತಳಿ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ರಾಜ್ಯದ ಒಟ್ಟು ಹೊಸ ತಳಿ ಕೇಸ್‌ಗಳ ಸಂಖ್ಯೆ 31ಕ್ಕೆ ತಲುಪಿದೆ.

ಮೈಸೂರು ಮತ್ತು ಮಂಗಳೂರಿನ ತಲಾ ಒಂದು ಪ್ರಕರಣಗಳು ಸೇರಿದ್ದು, ಉಳಿದ ಮಂದಿ ಬೆಂಗಳೂರಿನವರಾಗಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ನಿವಾಸಿಯಾದ 20 ವರ್ಷದ ಯುವತಿಗೆ ಸೋಂಕು ತಗುಲಿದೆ. ಕೊವಿಡ್ ಪರೀಕ್ಷೆ ನಡೆಸಿದಾಗ ಡಿಸೆಂಬರ್ 15 ರಂದು ಪಾಸಿಟಿವ್ ಬಂದಿದ್ದು, ಜಿನೊಮ್ ಸೀಕ್ವೆನ್ಸಿಂಗ್ ವರದಿ ಪ್ರಕಾರ 22 ರಂದು ಒಮಿಕ್ರಾನ್ ಎಂದು ದೃಢಪಟ್ಟಿದೆ. ಇವರ ಅಕ್ಕ ಯುಕೆಯಿಂದ ವಾಪಾಸ್ಸಾಗಿದ್ದು, ಕೋವಿಡ್​ ದೃಢಪಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಪ್ರಾಥಮಿಕ ಸಂಪರ್ಕದಿಂದ ಕೋವಿಡ್ ಹರಡಿದೆ.

ಬೆಂಗಳೂರಿನ 27 ವರ್ಷದ ಡಿ. 16ರಂದು ಘಾನಾದಿಂದ ದುಬೈ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ನಡೆಸಿದಾಗ ಅವರಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿದ್ದರಿಂದ ನೇರವಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರಲ್ಲಿ ರೋಗ ಲಕ್ಷಣಗಳಿಲ್ಲ. ಅವರು ಮಾಡೆರ್ನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದರು.

31 ವರ್ಷದ ವ್ಯಕ್ತಿ ಬೆಂಗಳೂರು ನಿವಾಸಿಯಾಗಿದ್ದು, ಯುಕೆಯಿಂದ 17 ರಂದು ಪ್ರಯಾಣಿಸಿದ್ದು, ಬೆಂಗಳೂರು ಏರ್ಪೋರ್ಟ್ ನಲ್ಲಿ ಅದೇ ದಿನ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ. ನಂತರ 22 ರಂದು ಒಮಿಕ್ರಾನ್ ಪತ್ತೆಯಾಗಿದೆ.

ಬ್ರಿಟನ್‌ನಿಂದ ಬೆಂಗಳೂರಿಗೆ ಡಿ. 17ರಂದು ಬಂದ ಕೇರಳದ ವ್ಯಕ್ತಿಯಲ್ಲಿ ಓಮಿಕ್ರಾನ್ ಪತ್ತೆಯಾಗಿದೆ.

18 ವರ್ಷದ ಯುವತಿ 17 ರಂದು ಯುಕೆಯಿಂದ ಬೆಂಗಳೂರು ಏರ್ಪೋರ್ಟ್ ಗೆ ವಾಪಾಸ್ಸಾಗಿದ್ದು, ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದು, ನಿನ್ನೆ ಜೀನೊಮ್ ಸೀಕ್ವೆನ್ಸಿಂಗ್ ನಲ್ಲಿ ಒಮಿಕ್ರಾನ್ ದೃಢಪಟ್ಟಿದೆ.

21 ವರ್ಷದ ಯುವಕ ಯುಕೆಯಿಂದ ಬೆಂಗಳೂರಿಗೆ ಬಂದಾಗ 17 ರಂದು ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ನಿನ್ನೆ ಒಮಿಕ್ರಾನ್ ದೃಢಪಟ್ಟಿದೆ.

ಡೆನ್ಮಾರ್ಕ್‌ನಿಂದ ಡಿ. 17ರಂದು ಬೆಂಗಳೂರಿನ 49 ವರ್ಷದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಒಳಪಟ್ಟಾಗ ಪಾಸಿಟಿವ್ ದೃಢಪಟ್ಟಿತ್ತು.

11 ವರ್ಷದ ಬಾಲಕಿ ಯುಕೆಯಿಂದ 18 ರಂದು ವಾಪಾಸ್​ ಅಗಿದ್ದು, ಏರ್ಪೋರ್ಟ್‌ನಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ನಿನ್ನೆ ಒಮಿಕ್ರಾನ್ ದೃಢಪಟ್ಟಿದೆ.

ನೈಜೀರಿಯಾದಿಂದ ಬೆಂಗಳೂರಿಗೆ ಡಿ. 18ರಂದು ಬಂದ 59 ವರ್ಷದ ಮಹಿಳೆಗೆ ವಿಮಾನ ನಿಲ್ದಾಣದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಕೋವಿಡ್ ಪತ್ತೆಯಾಗಿತ್ತು. ಅವರು ಎರಡೂ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದಿದ್ದರು.

9 ವರ್ಷದ ಬಾಲಕಿ ಸ್ವಿಟ್ಜರ್ಲೆಂಡ್‌‌ ನಿಂದ ದುಬೈ ಮೂಲಕ ಬೆಂಗಳೂರು ಏರ್ಪೊರ್ಟ್‌ಗೆ 19 ರಂದು ಬಂದಿದ್ದರು. ಅಂದು ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ನಿನ್ನೆ ಒಮಿಕ್ರಾನ್ ಇರುವುದು ದೃಢಪಟ್ಟಿದೆ.

RELATED TOPICS:
English summary :Covid-19 Karnataka Update

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...