Thu,May02,2024
ಕನ್ನಡ / English

ಮೀನುಗಾರನನ್ನ ಉಲ್ಟಾ ನೇತುಹಾಕಿ ಕ್ರೌರ್ಯ ಮೆರೆದ ಪ್ರಕರಣ, ಆರು ಮೀನುಗಾರರ ಬಂಧನ | ಜನತಾ ನ್ಯೂಸ್

24 Dec 2021
2335

ಮಂಗಳೂರು : ಹಳೆ ಬಂದರಿನಲ್ಲಿ ಮೀನುಗಾರನೊಬ್ಬನನ್ನು ಮೀನುಗಾರಿಕಾ ಹಡಗಿನಲ್ಲಿ ತಲೆಕೆಳೆಗೆ ಮಾಡಿ ನೇತುಹಾಕಿ ಹಲ್ಲೆ ನಡೆಸಿದ್ದ ವಿಡಿಯೋ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಆರು ಮೀನುಗಾರರನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ನಲ್ಲೂರಿನ ಕೊಂಡೂರು ಪೋಲಯ್ಯ(23), ಅವುಲ್ ರಾಜ್ ಕುಮಾರ್(26), ಕರಪಿಂಗರ ರವಿ(27), ಪ್ರಳಯಕಾವೇರಿ ಗೋವಿಂದಯ್ಯ(47), ಪ್ರಕಾಶಂ ಜಿಲ್ಲೆಯ ಕಟಿಂಗರಿ ಮನೋಹರ್(21), ವೋಟು ಕೋರಿ ಜಾಲಯ್ಯ(30) ಎಂದು ಗುರುತಿಸಲಾಗಿದೆ.

ಹಲ್ಲೆಗೊಳಗಾದ ಮೀನುಗಾರನನ್ನು ಪ್ರಕಾಶಂ ಜಿಲ್ಲೆಯ ವೈಲಾ ಶೀನು(32) ಎಂದು ಗುರುತಿಸಲಾಗಿದೆ.

ಕೆಲ ದಿನಗಳ ಹಿಂದೆ ದಕ್ಷಿಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಲೋಕೇಶ್ ಎಸಿ ಅವರ ಮೊಬೈಲ್ ಗೆ ಮೀನುಗಾರನನ್ನು ಥಳಿಸಿದ ವಿಡಿಯೋ ಬಂದಿತ್ತು. ಅವರು ಸಂತ್ರಸ್ತನನ್ನು ಹುಡುಕಲು ಪ್ರಾರಂಭಿಸಿದರು ಮತ್ತು ಅವರ ಕುಟುಂಬವನ್ನು ತಲುಪಿದರು. ಅಷ್ಟರಲ್ಲಾಗಲೇ ಘಟನೆಯಿಂದ ಮನನೊಂದ ಸಂತ್ರಸ್ತ ವ್ಯಕ್ತಿ ಕಾರವಾರಕ್ಕೆ ತೆರಳಿದ್ದರು. ನಂತರ ಅವರು ಮಂಗಳೂರಿಗೆ ಮರಳಿದ್ದು, ಪ್ರಕರಣ ದಾಖಲಾಗಿದೆ ಎಂದು ಅವರು ಹೇಳಿದ್ದಾರೆ.

ಇವರೆಲ್ಲರೂ ಮೀನುಗಾರ ಕಾರ್ಮಿಕರಾಗಿದ್ದು, ಡಿಸೆಂಬರ್ 15 ರಂದು ಮೀನುಗಾರಿಕೆಗೆ ತೆರಳಬೇಕಿತ್ತು. ಇದಕ್ಕಾಗಿ ಡಿಸೆಂಬರ್ 14 ರಂದು ಸಣ್ಣ ಪಾರ್ಟಿ ಇಟ್ಟುಕೊಂಡಿದ್ದರು. ಈ ಪಾರ್ಟಿ ಮುಗಿಸಿ ವೈಲ ಶೀನು (32) ಎಂಬಾತ ರಾತ್ರಿ ಬೋಟ್‌ನಲ್ಲಿ ಮಲಗಿದ್ದ. ಮರುದಿನ ಬೆಳಗ್ಗೆ ಬೋಟ್ ಬಳಿಗೆ ಬಂದ ಆರೋಪಿಗಳು ಪಾರ್ಟಿ ವೇಳೆ ಮೊಬೈಲ್ ಕದ್ದ ಆರೋಪ ಮಾಡಿ ಆತನ ಕಾಲಿಗೆ ಹಗ್ಗ ಕಟ್ಟಿ ಉಲ್ಟಾ ನೇತು ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದರು.

ಇದರ ವಿಡಿಯೋ ವೈರಲ್ ಆಗಿದ್ದು ಆರಂಭದಲ್ಲಿ ಅದರಲ್ಲಿನ ಸಂಭಾಷಣೆ ನೋಡಿ ತಮಿಳುನಾಡು ಕಡೆಯಲ್ಲಿ ನಡೆದಿರಬಹುದೆಂದು ಶಂಕಿಸಲಾಗಿತ್ತು. ಬಳಿಕ ಕೂಲಂಕಷವಾಗಿ ಗಮನಿಸಿದಾಗ ಮಂಗಳೂರಿನ ದಕ್ಕೆಯಲ್ಲಿ ನಡೆದ ಘಟನೆ ಎಂದು ತಿಳಿದುಬಂದಿತ್ತು. ​ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು

RELATED TOPICS:
English summary :Mangalore

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...