Sun,May12,2024
ಕನ್ನಡ / English

ಯುವತಿಗೆ ಡ್ರಗ್ಸ್ ನೀಡಿ ಲೈಂಗಿಕವಾಗಿ ದುರ್ಬಳಕೆ: ಆರೋಪಿ ಅರೆಸ್ಟ್ | ಜನತಾ ನ್ಯೂಸ್

27 Dec 2021
2086

ಮಂಗಳೂರು : ನಾಲ್ಕು ವರ್ಷಗಳಿಂದ ಮಗಳಿಗೆ ಡ್ರಗ್ಸ್ ನೀಡಿ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾನೆ ಎಂಬ ಆರೋಪದ ಅಡಿ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್, ಕಾಟಿಪಳ್ಳ ನಿವಾಸಿ ಮಹಮ್ಮದ್ ಶರೀಫ್ (47) ಬಂಧಿತ ಆರೋಪಿ. ಬಿಜೈ ನಿವಾಸಿ ಮಹಿಳೆಯು ತಮ್ಮ ಮಗಳನ್ನು ಶರೀಫ್ ನಾಲ್ಕು ವರ್ಷಗಳಿಂದ ಪುಸಲಾಯಿಸಿ ಡ್ರಗ್ಸ್ ನೀಡಿ ಲೈಂಗಿಕವಾಗಿ ದುರ್ಬಳಕೆ ಮಾಡುತ್ತಿದ್ದಾನೆ ಎಂದು ದೂರು ನೀಡಿದ್ದರು.

ಆರೋಪಿಯು ತನ್ನ ಮಗಳನ್ನು ಕಳೆದ ನಾಲ್ಕು ವರ್ಷಗಳಿಂದ ಪುಸಲಾಯಿಸಿ ಡ್ರಗ್ಸ್ ದಂಧೆಯಲ್ಲಿ ಸಿಲುಕಿಸಿದ್ದಾನೆ. ಈ ದಂಧೆಯಿಂದ ಅವಳನ್ನು ಪಾರು ಮಾಡಿ ಎಂದು ಯುವತಿಯ ತಾಯಿಯು ಸಂಘಟನೆಯೊಂದರ ಮೊರೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಪತ್ರದಲ್ಲಿ ಏನಿದೆ?
ಕಳೆದ ಮೂರು ವರ್ಷದಿಂದ ಕೃಷ್ಣಾಪುರದ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಎಂಬವನು ನಿರಂತರವಾಗಿ ಅವಳಿಗೆ ದೌರ್ಜನ್ಯ, ಲೈಂಗಿಕ ಕಿರುಕುಳ, ಮಾದಕ ವಸ್ತುಗಳನ್ನು ನಿರಂತರವಾಗಿ ಕೊಡುತ್ತಿದ್ದಾನೆ. ಇದರಿಂದಾಗಿ ಅವಳು ಡ್ರಗ್ಸ್ ಚಟಕ್ಕೆ ಬಿದ್ದು ಅವಳ ಆರೋಗ್ಯ ಹದಗೆಟ್ಟಿದೆ ಮತ್ತು ಮಾನಸಿಕವಾಗಿ ಅಸ್ವಸ್ಥಳಾಗಿದ್ದಾಳೆ.

ನಿರಂತರ ಅವಳನ್ನು ಮನೆಯಿಂದ ಕರೆದುಕೊಂಡು ಹೋಗಿ ಅವನು ಮತ್ತೆ ಅವನ ಸ್ನೇಹಿತರು ಬಹಳ ದಿನಗಳವರೆಗೆ ಇರಿಸಿಕೊಳ್ಳುತ್ತಿದ್ದ. ಇದರಿಂದಾಗಿ ನನ್ನ ಭವಿಷ್ಯ ಹಾಳಾಗಿದೆ. ಈಗಾಗಲೇ ನಾನು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದೇನೆ ಮತ್ತು ನಮ್ಮ ಸಮುದಾಯದ ಗುರುಗಳಿಗೂ ದೂರು ಕೊಟ್ಟಿದ್ದೇನೆ. ಆದರೂ ನನ್ನ ಮಗಳಿಗೆ ನ್ಯಾಯ ಸಿಗಲಿಲ್ಲ. ಈಗಾಗಲೇ ಸಿದ್ದಿಕ್‌ಗೆ ಮೂರು, ನಾಲ್ಕು ಮದುವೆ ಆಗಿದೆ ಎಂದು ಮಾಹಿತಿ ಸಿಕ್ಕಿದೆ. ಇದೀಗ ನನ್ನ ಮಗಳ ಜೀವನ ಕೂಡ ಹಾಳು ಮಾಡಿದ್ದಾನೆ. ಆದುದರಿಂದ ನನ್ನ ಮಗಳನ್ನು ರಕ್ಷಿಸಿ ನನಗೆ ಮತ್ತು ನನ್ನ ಮಗಳಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ನಿಮ್ಮಲ್ಲಿ ವಿನಮ್ರತೆಯಿಂದ ವಿನಂತಿಸಿಕೊಳ್ಳುತ್ತೇನೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

RELATED TOPICS:
English summary :Mangalore

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...