ಮಂಡ್ಯದ ಶಾಲೆಯೊಂದರಲ್ಲಿ 5 ಮಕ್ಕಳಿಗೆ ಪಾಸಿಟಿವ್ | ಜನತಾ ನ್ಯೂಸ್
ಮಂಡ್ಯ : ಮದ್ದೂರು ತಾಲೂಕಿನ ಹಳ್ಳಿಕೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಐದು ಮಕ್ಕಳಿಗೆ ಕರೊನಾ ಪಾಸಿಟಿವ್ ಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.
ಶಾಲೆಯ 1ನೇ ತರಗತಿಯಿಂದ 7ನೇ ತರಗತಿವರೆಗೆ ಒಟ್ಟು 60 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಮಕ್ಕಳಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಶಾಲೆಯ ಮಕ್ಕಳಲ್ಲಿ 5 ಮಕ್ಕಳಿಗೆ ಕೊರೊನಾ ಸೋಂಕು ಹರಡಿದ್ದು, ಉಳಿದ ವಿದ್ಯಾರ್ಥಿಗಳಿಗೆ ನೆಗೆಟಿವ್ ಬಂದಿದೆ.
ವಿದ್ಯಾರ್ಥಿಗಳಿಗೆ ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಲೆಯ ಎಲ್ಲ ಕೊಠಡಿಗಳಿಗೆ ಸ್ಯಾನಿಟೈಸರ್ ಸಿಂಪಡಿಸಿ ಇಂದಿನಿಂದ ಒಂದು ವಾರ ಶಾಲೆಯನ್ನು ಸೀಲ್ಡ್ ಡೌನ್ ಮಾಡಲಾಗಿದೆ.
ಸೋಂಕಿತ ಮಕ್ಕಳಿಗೆ ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.