Fri,May10,2024
ಕನ್ನಡ / English

ನಕಲಿ ವಿಡಿಯೋ ಸೃಷ್ಟಿಸಿ ಸಚಿವ ಎಸ್. ಟಿ. ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್​​ಮೇಲ್: ಇಬ್ಬರು ಆರೋಪಿಗಳ ಬಂಧನ | ಜನತಾ ನ್ಯೂಸ್

09 Jan 2022
2860

ಬೆಂಗಳೂರು : ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಅವರ ಪುತ್ರ ನಿಶಾಂತ್ ಗೆ ಅಶ್ಲೀಲ ವಿಡಿಯೋ ಕಳುಹಿಸಿ ಬ್ಲಾಕ್ ಮೇಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಡಿಯೋವನ್ನ ಬಿಟ್ಟಿರುವ ವ್ಯಕ್ತಿಗಳು ಇದನ್ನ ಎಲ್ಲಾ ಸೋಶಿಯಲ್ ಮೀಡಿಯಾಗಳಲ್ಲಿ ಬಿಡುತ್ತೇವೆ ಎಂದು ಮೆಸೇಜ್ ಬಂದಿತ್ತು. ಹೀಗಾಗಿ ನಾನು ಕೂಡಲೇ ಮಗನಿಗೆ ದೂರು ನೀಡುವಂತೆ ಹೇಳಿದೆ ಎಂದು ಸಹಕಾರ ಸಚಿವ ಎಸ್​.ಟಿ.ಸೋಮಶೇಖರ್ ಹೇಳಿದ್ದಾರೆ.

ನಾನು ಯಾರಿಗೂ ತೊಂದರೆ ಮಾಡಿಲ್ಲ. ನನ್ನ ಮಗನಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರಾ? ಅಥವಾ ನನ್ನನ್ನ ರಾಜಕೀಯವಾಗಿ ತೇಜೋವಧೆ ಮಾಡಲು ಹೀಗೆ ಮಾಡಿದ್ದಾರಾ ಅನ್ನೋದು ಗೊತ್ತಾಗಬೇಕಿದೆ ಎಂದರು.

ಸೋಮಶೇಖರ್ ಅವರ ಆಪ್ತ ಸಹಾಯಕರ ಮೊಬೈಲ್ ಸಂಖ್ಯೆಗೆ ಒಂದು ವಾಟ್ಸ್‌ಆಯಪ್‌ ಸಂದೇಶ ಬಂದಿತ್ತು. ಅದು ವಿದೇಶಿ ಸಂಖ್ಯೆಯಾಗಿದ್ದು ಅದರಲ್ಲಿ "ಸೋಮಶೇಖರ್‌ ಅವರ ಪುತ್ರ ನಿಶಾಂತ್‌ನ ಅಶ್ಲೀಲ ವಿಡಿಯೋ ನಮ್ಮ ಬಳಿ ಇದೆ. ಒಂದು ಕೋಟಿ ರೂಪಾಯಿ ನೀಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಅದನ್ನು ಬಿಡುಗಡೆ ಮಾಡುತ್ತೇವೆ" ಎಂದು ಹೇಳಲಾಗಿತ್ತು. ಇದನ್ನು ನೋಡಿದ ನಿಶಾಂತ್‌ ಅವರು ಇದು ಫೇಕ್‌ ವಿಡಿಯೋ ಆಗಿರುವುದಾಗಿ ಹೇಳಿ ಸೈಬರ್‌ ಪೊಲೀಸರಲ್ಲಿ ದೂರು ದಾಖಲು ಮಾಡಿದ್ದಾರೆ.

ಸೋಮಶೇಖರ್ ಅವರ ಮಾಜಿ ಗನ್ ಮ್ಯಾನ್‌ ಇವರ ಪೈಕಿ ಒಬ್ಬನಾಗಿದ್ದರೆ, ರಾಹುಲ್‌ ಭಟ್‌ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ. ಈತ ಖ್ಯಾತ ಜ್ಯೋತಿಷಿಯೊಬ್ಬರ ಪುತ್ರ ಎನ್ನುವುದು ಬೆಳಕಿಗೆ ಬಂದಿದೆ. ಮಾತ್ರವಲ್ಲದೇ ಈ ಬ್ಲ್ಯಾಕ್‌ಮೇಲ್‌ ಹಿಂದೆ ವಿಜಯಪುರದ ಖ್ಯಾತ ಶಾಸಕರೊಬ್ಬರ ಮಗಳೂ ಸೇರಿರುವುದಾಗಿ ಪೊಲೀಸರಿಗೆ ಸುಳಿವು ಸಿಕ್ಕಿದ್ದು, ಈ ನಿಟ್ಟಿನಲ್ಲಿ ಸೈಬರ್ ಕ್ರೈಮ್ ಪೊಲೀಸರ ಜೊತೆಗೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED TOPICS:
English summary :Black mail to ST Somashekhar s son by creating fake video: Arrest of two accused

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...