Fri,May10,2024
ಕನ್ನಡ / English

ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ನಿಷೇಧ, ಸರ್ಕಾರ ಆದೇಶ! | ಜನತಾ ನ್ಯೂಸ್

13 Jan 2022
3237

ಬೆಂಗಳೂರು : ಮೇಕೆದಾಟು ಯೋಜನೆಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ವತಿಯಿಂದ ರಾಮನಗರದ ಸಂಗಮದಿಂದ ಮೇಕೆದಾಟುವಿಗೆ ಕೈಗೊಂಡಿರುವ ಪಾದಯಾತ್ರೆಗೆ ಕೊನೆಗೂ ರಾಜ್ಯ ಸರ್ಕಾರ ಅಧಿಕೃತವಾಗಿ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.

ಈ ಕೂಡಲೇ ಪಾದಯಾತ್ರೆಯನ್ನು ನಿಲ್ಲಿಸುವಂತೆ ಕಾಂಗ್ರೆಸ್ ನಾಯಕರಿಗೆ ಸೂಚಿಸಲಾಗಿದೆ. ಪಾದಯಾತ್ರೆ ಕೈಗೊಳ್ಳುವುದು, ಉದ್ದೇಶಿತ ಮಾರ್ಗದಲ್ಲಿ ವಾಹನ ಸಂಚಾರ, ಜನ ಸಂಚಾರವನ್ನು ನಿಷೇಧಿಸಲಾಗಿದೆ. ಇನ್ನು ಸರ್ಕಾರದ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಕಾರ್ಯದರ್ಶಿ ಸಿ.ಎಸ್ ರವಿಕುಮಾರ್ ಅವರು ಬುಧವಾರ ಸಂಜೆ ಆದೇಶ ಹೊರಡಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗವನ್ನು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ನಿಯಂತ್ರಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದು ಪಾದಯಾತ್ರೆ ನಿಷೇಧಿಸಿದ ಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ.

ಕರ್ನಾಟಕದ ನೆಲ, ಜಲ ಹಾಗೂ ಜನರ ಬಗ್ಗೆ ಯಾವಾಗಲೂ ಕೂಡ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಕೆಲಸ ಮಾಡಿವೆ. ಮೇಕೆದಾಟು ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸರಣಿ ಟ್ವೀಟ್ ಮಾಡಿದ್ದಾರೆ.

ಈಗ ಕೋವಿಡ್ ಮಹಾಮಾರಿ 3ನೇ ಅಲೆಯು ರಾಜ್ಯಕ್ಕೆ ಹಾಗೂ ವಿಶೇಷವಾಗಿ ಬೆಂಗಳೂರಿಗೆ ಆವರಿಸಿಕೊಂಡಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮತ್ತು ಬೆಂಗಳೂರು ಜನರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಪ್ರಥಮ ಕರ್ತವ್ಯ ಆಗಿದೆ. ಹೀಗಾಗಿ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧತೆ ತೋರಿಸಬೇಕಾಗಿದೆ ಎಂದು ಟ್ವೀಟ್ ಮಾಡಿದ್ದಾರೆ

ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಕಾನೂನನ್ನು ಉಲ್ಲಂಘನೆ ಮಾಡದೆ ಎಲ್ಲರ ಸಹಕಾರವನ್ನು ಬಯಸುತ್ತೇನೆ. ಈ ಸಾಂಕ್ರಾಮಿಕ ರೋಗವನ್ನು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ನಿಯಂತ್ರಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

RELATED TOPICS:
English summary :Basavaraj bommai, govt bans mekedatu padayatra

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...