Mon,May06,2024
ಕನ್ನಡ / English

ಮತಾಂತರದ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆ : ಸಿಬಿಐ ತನಿಖೆಗೆ ತ.ನಾ. ಬಿಜೆಪಿ ಆಗ್ರಹ | ಜನತಾ ನ್ಯೂಸ್

25 Jan 2022
3720

ಚೆನ್ನೈ : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಆಗುವಂತೆ ಹೆಚ್ಚಿದ ಕಿರುಕುಳದಿಂದ ಬೇಸತ್ತು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿದ್ದು, ತಮಿಳುನಾಡು ಡಿಎಂಕೆ ಸರ್ಕಾರ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿ ಸಾಮಾಜಿಕ ವಲಯದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ತಮಿಳುನಾಡಿನ ರಾಜ್ಯ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಬಾಲಕಿಯ ಸಾವಿನ ಪ್ರಕರಣದ ಸೂಕ್ತ ತನಿಖೆಗೆ ಹಾಗೂ ರಾಜ್ಯದಲ್ಲಿ ಹೆಚ್ಚುತ್ತಿರುವ ಮತಾಂತರವನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಡೆಸುತ್ತಿರುವ ಧರಣಿ ಇಂದು ಸಹ ಮುಂದುವರೆದಿದೆ.

ಪ್ರತಿಭಟನೆಯ ನೇತ್ರತ್ವ ವಹಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು, ತಮಿಳುನಾಡು ಪೊಲೀಸರು ತನ್ನ ಬೇಜವಾಬ್ದಾರಿ ಹೇಳಿಕೆಗಳಿಂದ ಕಷ್ಟಪಟ್ಟು ಗಳಿಸಿದ ಖ್ಯಾತಿಯನ್ನು ಕಳೆದುಕೊಳ್ಳುವುದನ್ನು ನೋಡಲು ಇದು ತುಂಬಾ ದುಃಖದ ದಿನ. ಬಲವಂತದ ಮತಾಂತರದ ಕುರಿತು ಬಾಲಕಿಯ ಸ್ಪಷ್ಟ ವೀಡಿಯೋ ಸಾಕ್ಷ್ಯ ದೊರೆತಾಗ ಸ್ಥಳೀಯ ಪೊಲೀಸರು ಲಾವಣ್ಯ ಪ್ರಕರಣದ ದಿಕ್ಕನ್ನೇ ಬದಲಿಸಲು ಮುಂದಾಗಿದ್ದಾರೆ", ಪೊಲೀಸರು ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ತಮಿಳುನಾಡು ರಾಜ್ಯದ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ತನ್ನ ಶಾಲೆಯ ಹಾಸ್ಟೆಲ್‌ನಲ್ಲಿ ಮತಾಂತರಕ್ಕೆ ಒತ್ತಡ ಎದುರಿಸಿದ ನಂತರ ತನ್ನ ಪ್ರಾಣವನ್ನು ತೆಗೆದುಕೊಂಡಿದ್ದಾಳೆ, ಎಂದು ಹೇಳಲಾಗಿದೆ. ಟ್ವಿಟ್ಟರ್ ನಲ್ಲಿ ಲಾವಣ್ಯಗೆ ನ್ಯಾಯ(ಜಸ್ಟಿಸ್ ಫಾರ್ ಲಾವಣ್ಯ) ಎಂಬ ಹ್ಯಾಷ್ ಟ್ಯಾಗ್ ಟ್ರೆಂಡ್ ಆಗುತ್ತಿದೆ.

12 ನೇ ತರಗತಿಯ ಬಾಲಕಿಗೆ ಧರ್ಮವನ್ನು ಬದಲಾಯಿಸಲು ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಆಕೆಯ ಗೆಳೆಯರು ಮತ್ತು ಹಾಸ್ಟೆಲ್ ವಾರ್ಡನ್‌ನಿಂದ ಹೆಚ್ಚಿದ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಾಲಕಿಯ ಕುಟುಂಬವು ಆರೋಪಿಸಿದೆ.

ಘಟನೆ ವಿವರ<>
ಲಾವಣ್ಯ ಎಂಬ 17 ವರ್ಷದ ಬಾಲಕಿ 12ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ತಮಿಳುನಾಡಿನ ತಂಜಾವೂರಿನಲ್ಲಿರುವ ಸೇಂಟ್ ಮೈಕೆಲ್ ಗರ್ಲ್ಸ್ ಹೋಂ ನಲ್ಲಿ ವಾಸವಾಗಿದ್ದಳು.

ಮಾಧ್ಯಮ ವರದಿಗಳ ಪ್ರಕಾರ, ಜನವರಿ 9 ರಂದು, ಲಾವಣ್ಯ ಅವರು ವಾಂತಿ ಮಾಡಲು ಪ್ರಾರಂಭಿಸಿದರು ಮತ್ತು ಹೊಟ್ಟೆ ನೋವಿನ ಬಗ್ಗೆ ದೂರು ನೀಡಿದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಮುನ್ನ ಚಿತ್ರೀಕರಿಸಿದ ವೀಡಿಯೊ ದಲ್ಲಿ, ಲಾವಣ್ಯ ತನ್ನ ಬೋರ್ಡಿಂಗ್ ಹೌಸ್‌ನಲ್ಲಿ ಎದುರಿಸುತ್ತಿರುವ ಅಗ್ನಿಪರೀಕ್ಷೆಗಳನ್ನು ವಿವರಿಸುವುದನ್ನು ಕಾಣಬಹುದು.

ಹಾಸ್ಟೆಲ್‌ನ ವಾರ್ಡನ್‌ನಿಂದ ನಿರಂತರವಾಗಿ ನಿಂದಿಸಲಾಗುತ್ತಿದ್ದು, ಹಾಸ್ಟೆಲ್‌ನ ಎಲ್ಲಾ ಕೊಠಡಿಗಳನ್ನು ಸ್ವಚ್ಛಗೊಳಿಸುವಂತೆ ಮಾಡುತ್ತಿದ್ದಾರೆ, ಎಂದು ಆಕೆ ಹೇಳಿದ್ದಾಳೆ. ತನ್ನ ಧರ್ಮವನ್ನು ಬದಲಾಯಿಸಲು ಮತ್ತು ಕ್ರಿಶ್ಚಿಯನ್ ಧರ್ಮವನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ ಎಂದು ಆಕೆ ಆರೋಪಿಸಿದ್ದಾಳೆ.

ತಂಜೂರು ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ವರ್ಗಾಯಿಸಿದ ನಂತರ ಲಾವಣ್ಯಗೆ ಪ್ರಜ್ಞೆ ಬಂದಿದ್ದು, ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವೈದ್ಯರ ಬಳಿ ತಪ್ಪೊಪ್ಪಿಕೊಂಡಿದ್ದಾಳೆ, ಎನ್ನಲಾಗಿದೆ.

ವಿದ್ಯಾರ್ಥಿಯ ಪೋಷಕರು ಜನವರಿ 15 ರಂದು ದೂರು ದಾಖಲಿಸಿದ್ದು, ಚಿಕಿತ್ಸೆಗೆ ಫಲಕಾರಿಯಾಗದೆ ಅಮಾಯಕ ಯುವತಿ ಜನವರಿ 19 ರಂದು ಆಕೆ ಸಾವನ್ನಪ್ಪಿದ್ದಾಳೆ.

RELATED TOPICS:
English summary :Girl commits suicide due to conversion persecution : BJP urges for CBI enquiry

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...