Sat,May11,2024
ಕನ್ನಡ / English

ಆರು ತಿಂಗಳು ಪೂರ್ಣಗೊಳಿಸಿದ ಬೊಮ್ಮಾಯಿ ಸರ್ಕಾರ, ಆರು ತಿಂಗಳಿಗೆ ಆರು ಪ್ರಶ್ನೆ ಕೇಳಿದ ಕಾಂಗ್ರೆಸ್ | ಜನತಾ ನ್ಯೂಸ್

28 Jan 2022
3040

ಬೆಂಗಳೂರು : ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಆರು ತಿಂಗಳು ಪೂರ್ಣಗೊಳಿಸಿದೆ. ಆದರೆ ಕಾಂಗ್ರೆಸ್ ಆರು ತಿಂಗಳಿಗೆ ಆರು ಪ್ರಶ್ನೆಗಳ ಸುರಿಮಳೆ ಸುರಿಸಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನೋಟ್ ಬ್ಯಾನ್ ಹಾಗೂ ಗಬ್ಬರ್ ಸಿಂಗ್ ಟ್ಯಾಕ್ಸ್ ಗಳಿಂದಾಗಿ ಶುರುವಾದ ನಿರುದ್ಯೋಗ ಸಮಸ್ಯೆ ಲಾಕ್ ಡೌನ್ ನಂತರ ಉತ್ತುಂಗಕ್ಕೇರಿದೆ. ಸಿಎಂ ಆಗಿ ಅರ್ಧ ವರ್ಷ ಅಧಿಕಾರ ಪೂರೈಸಿದ ಬೊಮ್ಮಾಯಿ ಅವರೇ, ಉದ್ಯೋಗ ಸೃಷ್ಟಿಗೆ ತಾವು ಕೈಗೊಂಡ ಕ್ರಮಗಳೇನು? ರೂಪಿಸಿದ ಯೋಜನೆಗಳೇನು? ಎಷ್ಟು ಉದ್ಯೋಗ ಸೃಷ್ಠಿಯಾಗಿದೆ ಎಂದು ಮೊದಲ ಪ್ರಶ್ನೆ ಕೇಳಿದೆ.

ಎರಡನೇ ಪ್ರಶ್ನೆ - ಮುಖ್ಯಮಂತ್ರಿಯಾಗಿ ಹಣಕಾಸು ಖಾತೆ ನಿಭಾಯಿಸುತ್ತಿರುವ ಬೊಮ್ಮಾಯಿ ಅವರೇ ತಮ್ಮ ಅಧಿಕಾರದ ಆರು ತಿಂಗಳಲ್ಲಿ ಹಾಗೂ ನಿಮ್ಮ ಡಬಲ್ ಇಂಜಿನ್ ಸರ್ಕಾರದಲ್ಲಿ ಕೇಂದ್ರದಿಂದ ಯಾವ್ಯಾವ ಯೋಜನೆಗೆ ಎಷ್ಟು ಅನುದಾನ ತಂದಿದ್ದೀರಿ? ಜಿಎಸ್ ಟಿ ಬಾಕಿ, ನೆರೆ ಪರಿಹಾರ ಸೇರಿದಂತೆ ಎಷ್ಟು ನೆರವನ್ನು ತಂದಿದ್ದೀರಿ?

ಮೂರನೇ ಪ್ರಶ್ನೆ - ಬಿಬಿಎಂಪಿಯಲ್ಲಿ ಭ್ರಷ್ಟಾಚಾರ, ಬಿಡಿಎಯಲ್ಲಿ ಭ್ರಷ್ಟಾಚಾರ, ನೇಮಕಾತಿಯಲ್ಲಿ ಭ್ರಷ್ಟಾಚಾರ, ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಗುತ್ತಿಗೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ. ಈ ಸರ್ಕಾರದಲ್ಲಿ ಎಲ್ಲೆಲ್ಲೂ ಭ್ರಷ್ಟಾಚಾರವೇ.?

ನಾಲ್ಕನೇ ಪ್ರಶ್ನೆ - ಸಿಗದ ನೆರೆ ಪರಿಹಾರ, ದೊರಕದ ಕರೋನಾ ಪರಿಹಾರ, ಕುಂಟುವ ಅಡಳಿತಯಂತ್ರ, ಇಲ್ಲದ ವಸತಿ ಯೋಜನೆಗಳು. ಜನರ ಸಮಸ್ಯೆ ಹಲವಾರಿದ್ದರೂ ಒಂದೇ ಒಂದು ಜನತಾ ದರ್ಶನ ಕಾರ್ಯಕ್ರಮ ಮಾಡಿಲ್ಲವೇಕೆ? ಉಪಯೋಗವಿಲ್ಲದ ದೆಹಲಿ ದರ್ಶನಕ್ಕೆ ಹೋಗುವ ತಮಗೆ ಜನತಾದರ್ಶನಕ್ಕೆ ಸಮಯವಿರಲಿಲ್ಲವೇ?

ಐದನೇ ಪ್ರಶ್ನೆ - ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರುವ ಬೊಮ್ಮಾಯಿಯವರೇ, ರಾಜ್ಯದ ಹಣಕಾಸು ಸ್ಥಿತಿಯನ್ನು ವೃದ್ಧಿಸುವಲ್ಲಿ ಕೈಗೊಂಡ ಕ್ರಮಗಳೇನು?
ಆರ್ಥಿಕ ಶಿಸ್ತು ಕಾಪಾಡಲು ರೂಪಿಸಿದ ಯೋಜನೆಗಳೇನು? ತೆರಿಗೆ ಪಾಲು, ಅನುದಾನ, ಪರಿಹಾರ ಮುಂತಾದವುಗಳನ್ನು ಕೇಂದ್ರದಿಂದ ತರುವಲ್ಲಿ ಮಾಡಿದ ಪ್ರಯತ್ನಗಳೇನು?

ಆರನೇ ಪ್ರಶ್ನೆ - ಬೊಮ್ಮಾಯಿಯವರೇ, ನಿಮ್ಮ ಸರ್ಕಾರಕ್ಕೆ 6 ತಿಂಗಳಗಿದೆ, ನಿಮ್ಮ ಸಚಿವರ ಕೆಲಸಗಳ ಬಗ್ಗೆ ನಿಮಗೆ ತೃಪ್ತಿ ಇದೆಯೇ?

ಅಸಮಾಧಾನದಿಂದ ಒಲ್ಲದ ಖಾತೆ ನಿಭಾಯಿಸುತ್ತಿರುವವರು, ಉಸ್ತುವಾರಿಗಾಗಿ ಕಿತ್ತಾಡುವವರು, ತಮ್ಮದೇ ಶಾಸಕರೊಂದಿಗೆ ಮುನಿಸಿಟ್ಟುಕೊಂಡ ಸಚಿವರುಗಳು ನಿಮ್ಮಲ್ಲಿದ್ದಾರೆ, ಅವರ ಕೆಲಸಗಳ ಬಗ್ಗೆ ಸಮಾಧಾನವಿದೆಯೇ?

RELATED TOPICS:
English summary :The Bommai government has completed six months, The Congress asked six questions

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...