Wed,May08,2024
ಕನ್ನಡ / English

ಬೇಟಿ ಬಚಾವೋ ಬೇಟಿ ಪಢಾವೋ ಬದಲಿಗೆ ಈಗ ಬೇಟಿ ಹಠಾವೋ ಮಾಡಲಾಗುತ್ತಿದೆ | ಜನತಾ ನ್ಯೂಸ್

05 Feb 2022
3373

ಬೆಂಗಳೂರು : ಭುಗಿಲೆದ್ದಿರುವ ಹಿಜಾಬ್ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಮೊದೆಲಲ್ಲ ಬೇಟಿ ಪಡಾವ್ ಬೇಟಿ ಬಚಾವ್ ಎನ್ನುತ್ತಿದ್ದವರು ಈಗ ಬೇಟಿ ಹಠಾವ್ ಎಂಬಂತೆ ವರ್ತಿಸುತ್ತಿದ್ದಾರೆ.

ಹೆಣ್ಣು ಮಕ್ಕಳ ಉದ್ಧಾರಕ್ಕಾಗಿ ಕೇಂದ್ರ ಸರಕಾರ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತಂದಿದೆ. ಆದರೆ ಈಗ ರಾಜ್ಯ ಸರಕಾರವು ಅನಗತ್ಯವಾಗಿ ಹಿಜಾಬ್ ವಿಷಯವನ್ನು ವಿವಾದ ಮಾಡುವ ಮೂಲಕ ಭೇಟಿ ಹಠಾವೋ ಮಾಡಲು ಹೊರಟಿದೆ ಎಂದರು.

ಕೋವಿಡ್ ಸಂಕಷ್ಟದ ಸಮಯದಲ್ಲಿ ಸರಿಯಾಗಿ ಶಾಲೆ-ಕಾಲೇಜುಗಳು ನಡೆಯದೇ ವಿದ್ಯಾರ್ಥಿಗಳು ಮತ್ತು ಪೋಷಕರು ಒದ್ದಾಡುತ್ತಿದ್ದಾರೆ. ಇಂಥ ಕಷ್ಟದ ಸಮಯದಲ್ಲಿ ಹಿಜಾಬ್ ವಿವಾದವನ್ನು ಸೃಷ್ಟಿ ಮಾಡಲಾಗಿದೆ. ಇದು ಅನಗತ್ಯವಾಗಿತ್ತು ಎಂದರು.

ಸರ್ಕಾರಗಳು ಬೇಟಿ ಪಡಾವ್, ಬೇಟಿ ಬಚಾವ್ ಅಂತಿದ್ದರು. ಈಗ ಬೇಟಿ ಹಠಾವೋ ಅನ್ನುವ ರೀತಿಯಲ್ಲಿ ವರ್ತಿಸುತ್ತಿವೆ. ರಾಜ್ಯದ ಸಾಮರಸ್ಯವನ್ನು ಹಾಳು ಮಾಡಲಾಗುತ್ತಿದೆ. ಶಾಂತಿಗೆ ಮತ್ತು ಪ್ರಗತಿಗೆ ಹೆಸರಾದ ರಾಜ್ಯದಲ್ಲಿ ಸಾಮರಸ್ಯ ನೆಲೆಸಬೇಕು ಎನ್ನುವ ಮನಸ್ಸಿದ್ದರೆ ರಾಷ್ಟ್ರೀಯ ಪಕ್ಷಗಳ ನಾಯಕರು ಹಿಜಾಬ್ ಮತ್ತು ಕೇಸರಿ ಶಾಲುಗಳ ವಿಷಯವನ್ನು ಇಲ್ಲಿಗೆ ಬಿಡಲಿ ಎಂದು ಕಿವಿಮಾತು ಹೇಳಿದರು.

ಯಾವುದೇ ಅಸೂಯೆ, ದ್ವೇಷ ಇಲ್ಲ ನಿರ್ಮಲ ಮನಸಿನ ಮಕ್ಕಳಲ್ಲಿ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ವಿಷ ತುಂಬುವುದು ಬೇಡ. ಕಳೆದ ಹದಿನೈದು ದಿನಗಳಿಂದ ಕೇಳಿ ಬರುತ್ತಿರುವ ಈ ವಿಷಯವನ್ನು ಇಲ್ಲಿಗೇ ಬಿಡುವುದು ಉತ್ತಮ. ಮುಖ್ಯಮಂತ್ರಿಗಳು ಇಂಥ ಸೂಕ್ಷ್ಮ ವಿಷಯಗಳನ್ನು ಬೆಳೆಯಲು ಬಿಡದೇ ಸರಿಯಾಗಿ ನಿಭಾಯಿಸಬೇಕು. ಯಾವುದೇ ಕಾರಣಕ್ಕೂ ಸಮಾಜದ ವಾತಾವರಣ ಕಲುಷಿತ ಆಗದ ರೀತಿ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಕರಾವಳಿ ಪ್ರದೇಶದಲ್ಲಿ ಕೆಲ ಕಡೆ ಈ ರೀತಿಯ ಹಿಜಾಬ್ ವ್ಯವಸ್ಥೆ ಇತ್ತು ಅನ್ನುವುದು ನನ್ನ ಗಮನಕ್ಕೆ ಬಂದಿದೆ. ಸೂಕ್ಷ್ಮವಾದ ಇಂಥ ನಂಬಿಕೆಗಳ ಬಗ್ಗೆ ಯಾರೂ ಕೆರಳಿಸುವ ರೀತಿಯಲ್ಲಿ ವರ್ತಿಸಬಾರದು. ಯಾವ ಶಾಲೆಯಲ್ಲಿ ಹಿಜಾಬ್​​ಗೆ ಅನುಮತಿ ಕೊಟ್ಟಿದ್ದಾರೋ ಅವರು ಮುಂದುವರೆಸಿಕೊಂಡು ಹೋಗಲಿ. ಹೊಸದಾಗಿ ಈಗ ಕೆಲವರು ಇಂಥವಕ್ಕೆ ಯಾಕೆ ಅನುಮತಿ ಕೊಟ್ಟರು? ಹಿಂದು-ಮುಸ್ಲಿಂ ಅನ್ನುವುದಕ್ಕಿಂತ ಹೆಚ್ಚಾಗಿ ಮಕ್ಕಳಲ್ಲಿ ಇಂಥಾ ಸಂಕುಚಿತ ಭಾವನೆ ಬೆಳೆಯಲು ಯಾರೂ ಅವಕಾಶ ಕೊಡಬಾರದು ಎಂದು ಅವರು ಆಗ್ರಹಿಸಿದರು.

RELATED TOPICS:
English summary :HD Kumaraswamy: Beti Bachao Beti Padao is now being replaced by Beti Hathao

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...