Sun,May05,2024
ಕನ್ನಡ / English

ಹಿಜಬ್ ವಿವಾದಗಳ ಹಿಂದೆ ಎಸ್‌ಡಿಪಿಐ, ಸಿದ್ದರಾಮಯ್ಯ; ರಾಹುಲ್ ಗಾಂಧಿ ದೇಶಕ್ಕೆ ಮಾರಕ - ಬಿಜೆಪಿ | ಜನತಾ ನ್ಯೂಸ್

06 Feb 2022
3354

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಬ್ ವಿವಾದಗಳ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ರಾಜ್ಯ ಬಿಜೆಪಿ ಇಂದು ಗಂಭಿರವಾಗಿ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ, ಹಿಜಬ್ ವಿವಾದಗಳ ಹಿಂದೆ ಕಾಂಗ್ರೆಸ್ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕೈವಾಡವಿದೆ ಎಂಬಂತೆ ಪರೋಕ್ಷವಾಗಿ ಆರೋಪಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಶನಿವಾರ ಕರ್ನಾಟಕ ಹಿಜಾಬ್ ವಿವಾದ ಬಗ್ಗೆ ಹೇಳುತ್ತಾ, "ವಿದ್ಯಾರ್ಥಿಗಳ ಹಿಜಾಬ್ ಅವರ ಶಿಕ್ಷಣಕ್ಕೆ ಅಡ್ಡಿಯಾಗಲು ಬಿಡುವ ಮೂಲಕ ನಾವು ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ", ಎಂದು ಹೇಳಿದರು.

ರಾಹುಲ್ ಗಾಂಧಿ ಅವರಿಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಬಿಜೆಪಿ, ಕಾಂಗ್ರೆಸ್ ಸಹ-ಮಾಲೀಕ ರಾಹುಲ್ ಗಾಂಧಿ "ಶಿಕ್ಷಣವನ್ನು ಕೋಮುವಾದ ಮಾಡುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ ಮತ್ತು "ಅವರು ಭಾರತದ ಭವಿಷ್ಯಕ್ಕೆ ಅಪಾಯಕಾರಿ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ" ಎಂದು ಟ್ವೀಟ್ ಮಾಡಿದೆ. ಇಷ್ಟೇ ಅಲ್ಲದೇ, "ಶಿಕ್ಷಣ ಪಡೆಯಲು ಹಿಜಾಬ್ ತುಂಬಾ ಅವಶ್ಯಕವಾಗಿದ್ದರೆ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ರಾಹುಲ್ ಗಾಂಧಿ ಅದನ್ನು ಏಕೆ ಕಡ್ಡಾಯಗೊಳಿಸುವುದಿಲ್ಲ?" ಎಂದು ಪಕ್ಷವು ಕೇಳಿದೆ.

ಇದಾದ ಬಳಿಕ, ಕರ್ನಾಟಕ ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಬ್ ವಿವಾದಗಳ ಹಿಂದೆ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕೈವಾಡವಿದೆ ಎಂಬಂತೆ ಪರೋಕ್ಷವಾಗಿ ಆರೋಪಿಸಿದೆ.

ಈ ಕುರಿತು ಜಾಯಿನ್ ದ ಡಾಟ್ಸ್(ಚುಕ್ಕೆಗಳನ್ನು ಜೋಡಿಸಿ) ಎಂದು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಹಿಂದಿನ ಘಟನೆಗಳನ್ನು ಪಟ್ಟಿ ಮಾಡಿದೆ,
√ ಪಿಎಫ್ಐ ಹಾಗೂ ಎಸ್‌ಡಿಪಿಐ ಮೇಲಿನ ಪ್ರಕರಣಗಳನ್ನು ಸಿದ್ದರಾಮಯ್ಯ ಸರ್ಕಾರ ಹಿಂದಕ್ಕೆ ತೆಗೆದುಕೊಂಡಿತ್ತು.
√ ಸಿಎಎ ವಿರುದ್ಧ ಕಾಂಗ್ರೆಸ್ ನಡೆಸಿದ ಹೋರಾಟಕ್ಕೆ ಈ ಎರಡು ಸಂಘಟನೆಗಳು ಕೈ ಜೋಡಿಸಿದ್ದವು.
√ ಎಸ್‌ಡಿಪಿಐ ಪ್ರೇರಿತ ವಿದ್ಯಾರ್ಥಿನಿಯರು ಹಿಜಾಬ್ ವಿವಾದ ಸೃಷ್ಟಿಸಿದರು.
√ ಸಿದ್ದರಾಮಯ್ಯ ಅವರು ಇದಕ್ಕೆ ಬೆಂಬಲ ನೀಡಿದರು. ಹಾಗಾದರೆ ಇವರೆಲ್ಲರೂ ಪರಸ್ಪರ ಸಹಕಾರಿಗಳಲ್ಲವೇ? ಎಂದು ಪ್ರಶ್ನೆ ಮಾಡಿದೆ.

RELATED TOPICS:
English summary :SDPI, Siddaramaiah behind Hijab controversies; Rahul Gandhi deadly to the country - BJP

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...