Sun,May05,2024
ಕನ್ನಡ / English

ಶಿವಮೊಗ್ಗದಲ್ಲಿ ಮಂತ್ರಿ ಮಗನೊಬ್ಬ ಕೋಟಿ ಕೋಟಿ ಶಾಲುಗಳನ್ನು ತರಿಸಿ ಹಂಚಿದ್ದಾನೆ | ಜನತಾ ನ್ಯೂಸ್

09 Feb 2022
2915

ಬೆಂಗಳೂರು : ಶಿವಮೊಗ್ಗ ಜಿಲ್ಲೆಯಲ್ಲಿ ಮಂತ್ರಿ ಮಗನೊಬ್ಬ ಕೋಟಿ ಕೋಟಿ ಶಾಲುಗಳನ್ನು ತರಿಸಿ ಹಂಚುವಂತಹ ಕೆಲಸ ಮಾಡಿದ್ದಾರೆ ಎಂದು ಡಿ ಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಕೇಸರಿ ಪೇಟಾ, ಶಾಲುಗಳನ್ನು ತಂದವರು ಯಾರು ಎಂಬುದನ್ನು ಬಿಜೆಪಿ ನಾಯಕರು ಹೇಳಬೇಕು ಎಂದು ಡಿಕೆಶಿ ಆಗ್ರಹಿಸಿದ್ದಾರೆ.

ಧ್ವಜ ಸ್ತಂಭದಲ್ಲಿ ಕೇಸರಿ‌ ಬಾವುಟ ಹಾರಿಸಿದ್ದು ಅಕ್ಷಮ್ಯ. ಕಂಬ ಬೇರೆ - ಧ್ವಜ ಬೇರೆನಾ? ಅದಕ್ಕೊಂದು ಸಂಹಿತೆ ಇದೆ. ಎಲ್ಲಾ ಧ್ವಜ ಅಲ್ಲಿ ಹಾರಿಸಲು ಬರುವುದಿಲ್ಲ. ರಾಷ್ಟ್ರದ ಧ್ವಜ ಹಾರಿಸುವ ಕಂಬದ ಮೇಲೆ ಕೇಸರಿ ಧ್ವಜ ಹಾರಿಸುವುದು ಎಷ್ಟು ಸರಿ ಎಂದು ಡಿಕೆಶಿ ಪ್ರಶ್ನಿಸಿದರು.

50 ಲಕ್ಷ ಕೇಸರಿ ಶಾಲುಗಳನ್ನು ಗುಜರಾತ್‌ನ ಸೂರತ್‌ನಿಂದ ತರಿಸಿಕೊಂಡಿದ್ದಾರೆ ಎಂದು ಇದೇ ವೇಳೆ ಡಿಕೆಶಿ ಗಂಭೀರ ಆರೋಪ ಮಾಡಿದರು. ಜಿಲ್ಲೆಯಲ್ಲಿ ಬಿಜೆಪಿ ಮಂತ್ರಿ ಮಗನೇ ಕೇಸರಿ ಶಾಲುಗಳನ್ನು ತರಿಸಿ ಹಂಚಿದ್ದಾರೆ. ಎಲ್ಲಾ ಬಿಜೆಪಿ ಕಾರ್ಯಕರ್ತರು ಈ ಶಾಲುಗಳನ್ನು ಹಂಚುವುದಕ್ಕೆ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಚುನಾವಣೆ ಬಂದ ಸಂದರ್ಭದಲ್ಲಿ ರಾಜಕಾರಣ ಮಾಡೋಣ. ಆದರೆ ಮಕ್ಕಳ ಮನಸ್ಸಿನಲ್ಲಿ ಏಕೆ ಇಂಥ ವಿಷಯಗಳನ್ನು ತುಂಬುತ್ತಿದ್ದೀರಿ. ಮಕ್ಕಳ ಮನಸ್ಥಿತಿಯನ್ನು ಏಕೆ ಹಾಳು ಮಾಡುತ್ತಿದ್ದೀರಾ. ಅನಗತ್ಯವಾಗಿ ಏಕೆ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದ್ದೀರಿ. ಮಕ್ಕಳಲ್ಲಿ ಜಾತಿ-ಧರ್ಮ ಎಂಬ ವಿಷಬೀಜ ಬಿತ್ತುವುದು ಏಕೆ ಬೇಕು ಎಂದು ಡಿ ಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

ಕೊತ್ವಾಲ್ ಶಿಷ್ಯ ಈಗ ಹಿಟ್ & ರನ್ ರಾಜಕೀಯ ಪ್ರಾರಂಭಿಸಿದ್ದಾರೆ. ಬಿಜೆಪಿಯವರು ಸೂರತ್‌ನಿಂದ ಪೇಟಗಳನ್ನು ತರಿಸಿದ್ದಾರೆ ಎಂದು ಇನ್ನೊಂದು ಸುಳ್ಳು ಆರೋಪ ಮಾಡಿದ್ದಾರೆ. ಡಿಕೆಶಿಯವರೇ, ಹಿಜಾಬ್ ವಿವಾದ ಮುಗಿಯುವವರೆಗೆ ಇನ್ನೆಷ್ಟು ಸುಳ್ಳು ಹೇಳುತ್ತೀರಿ?.. ಎಂದು ಬಿಜೆಪಿ ಪ್ರಶ್ನಿಸಿದೆ.

RELATED TOPICS:
English summary :DK shivakumar: Minister Son Ordered Fifty Lakh Saffron Shwal From Surat Accuses

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...