Thu,May09,2024
ಕನ್ನಡ / English

ಕಮ್ಮಾಣಿ ಗ್ರಾಮದಲ್ಲಿ ಸೇತುವೆ ನಿರ್ಮಾಣಕ್ಕೆ ಒತ್ತಾಯ | Janata.news

26 Mar 2018
482

ಅಂಕೋಲಾ : ಅಂಕೋಲಾ ತಾಲೂಕಿನ ಡೋಂಗ್ರಿ ಗ್ರಾಮ ಪಂಚಾಯತ ವ್ಯಾಪ್ತಿಯ ಕಮ್ಮಾಣಿ ಗ್ರಾಮದ ದೊಡ್ಡಕಟ್ಟಿನ ಹಸೆಹಳ್ಳಕ್ಕೆ ಸೇತುವೆ ನಿರ್ಮಿಸಿಕೊಡುವಂತೆ ಆಗ್ರಹಿಸಿ ಹಾಗೂ ಈ ಭಾಗದಲ್ಲಿ ಗ್ರಾಮ ಪಥ ಯೋಜನೆಯಲ್ಲಿ ಸಿದ್ಧಿ ಜನಾಂಗಕ್ಕೆ ಮಂಜೂರಾದ ಅನುದಾನ ಬದಲಿಸಿದ ಬಗ್ಗೆ ಪರಿಶೀಲಿಸುವಂತೆ ಒತ್ತಾಯಿಸಿ ಸಿದ್ಧಿ ಸಮುದಾಯದ ಜನರು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಮನವಿ ಸಲ್ಲಿಸಿದರು.

ಸುಮಾರು 40 ವರ್ಷಗಳಿಂದ ಕಮ್ಮಾಣಿ ಗ್ರಾಮದ ದೊಡ್ಡಕಟ್ಟಿನಲ್ಲಿ ಸಿದ್ಧಿ ಜನಾಂಗದ ಅನೇಕ ಕುಟುಂಬಗಳು ವಾಸಿಸುತ್ತಿವೆ. ಗ್ರಾಮಕ್ಕೆ ಮೂಲ ಸೌಕರ್ಯವಾದ ಸೇತುವೆ ಹಾಗೂ ರಸ್ತೆ ಅನುಕೂಲತೆ ಈವರೆಗೂ ಲಭ್ಯವಾಗಿಲ್ಲ. ಗ್ರಾಮ ಪಥ ಯೋಜನೆಯ ನಮ್ಮ ಗ್ರಾಮ ನಮ್ಮ ರಸ್ತೆ ಹಂತ-4ರಲ್ಲಿ ಹಸೆಹಳ್ಳಕ್ಕೆ ಸೇತುವೆ ಮಂಜೂರಾಗಿದ್ದು, ಈ ಕಾಮಗಾರಿಯನ್ನು ಶಿರಸಿ ತಾಲೂಕಿನ ಮತ್ತಿಘಟ್ಟಾಕ್ಕೆ ಬದಲಾಯಿಸಲಾಗಿದೆ. ದೊಡ್ಡಕಟ್ಟು ಗ್ರಾಮದಲ್ಲಿ ವಾಸಿಸುವ ಸಿದ್ಧಿ ಸಮುದಾಯದ ಜನರು ಸೌಕರ್ಯ ವಂಚಿತರಾಗಿ ಬದುಕುತ್ತಿದ್ದಾರೆ. ಶಾಲೆಗೆ ತೆರಳಲು ಮಕ್ಕಳು ಪರದಾಡುವಂತಹ ಸಮಸ್ಯೆಯಿದೆ. ಸಿದ್ಧಿ ಸಮುದಾಯಕ್ಕೆ ಮಂಜೂರಾದ ಅನುದಾನವನ್ನು ಸಿದ್ಧಿ ಜನಾಂಗ ಹೊರತುಪಡಿಸಿ ಉಳಿದ ಸಮುದಾಯದ ಜನರಿರುವ ಕಡೆ ವರ್ಗಯಿಸಿದ್ದು ಎಷ್ಟು ಸರಿ ಎಂಬುದು ಅರ್ಥವಾಗಿಲ್ಲ. ಈ ಬಗ್ಗೆ ಜನಪ್ರತಿನಿಗಳು, ಅಕಾರಿಗಳ ಗಮನಕ್ಕೆ ತಂದರೂ ಕ್ರಮವಾಗಿಲ್ಲ. ಜಿಲ್ಲಾಕಾರಿಯವರು ಸ್ವತಃ ಸ್ಥಳ ಪರಿಶೀಲಿಸಿ ಹಸೆಹಳ್ಳಕ್ಕೆ ಸೇತುವೆ ನಿರ್ಮಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು. ದೊಡ್ಡಕಟ್ಟು ಗ್ರಾಮಕ್ಕೆ ಮಂಜೂರಾದ ಅನುದಾನ ಇದೇ ಗ್ರಾಮಕ್ಕೆ ಬಳಕೆಯಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಮನವಿ ನೀಡುವ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ಶುಭಲತಾ ಅಸ್ನೋಟಿಕರ್ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಅಣ್ಣಪ್ಪ ಆರ್.ಸಿದ್ಧಿ, ಮಂಜುನಾಥ ಸಿದ್ಧಿ, ಸುಜಾತಾ ಸಿದ್ಧಿ, ಲಕ್ಷ್ಮೀ ಸಿದ್ಧಿ, ರಾಧಾ ಸಿದ್ಧಿ, ಗೀತಾ ಸಿದ್ಧಿ, ಸಾವಿತ್ರಿ ಸಿದ್ಧಿ ಮುಂತಾದವರು ಹಾಜರಿದ್ದರು.

English summary :Demand to build bridge in Kammani village

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...