Thu,May02,2024
ಕನ್ನಡ / English

ಸ್ವತಂತ್ರ ರಾಷ್ಟ್ರದ(ಖಾಲಿಸ್ತಾನ್) ಮೊದಲ ಪ್ರಧಾನಿಯಾಗುತ್ತೇನೆ ಎಂದ ಕೇಜ್ರಿವಾಲ್ - ಮಾಜಿ ಆಪ್ ಮುಖಂಡನ ಹೊಸ ಬಾಂಬ್ | ಜನತಾ ನ್ಯೂಸ್

17 Feb 2022
2275

ನವದೆಹಲಿ : ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್‌ನಲ್ಲಿ ಚುನಾವಣಾ ಲಾಭ ಗಳಿಸಲು ಖಾಲಿಸ್ತಾನಿ ಭಯೋತ್ಪಾದಕ ಸಂಘಟನೆಯನ್ನು ಬೆಂಬಲದೊಂದಿಗೆ ಸ್ವತಂತ್ರ ರಾಜ್ಯದ ಮುಖ್ಯಮಂತ್ರಿ ಅಥವಾ ಸ್ವತಂತ್ರ ಖಾಲಿಸ್ತಾನಿ(ಪಂಜಾಬ್) ರಾಷ್ಟ್ರದ ಮೊದಲ ಪ್ರಧಾನಿಯಾಗುತ್ತೇನೆ, ಎಂದು ಒಮ್ಮೆ ಹೇಳಿದ್ದರು ಎಂದು ಆಮ್ ಆದ್ಮಿ ಪಕ್ಷದ ಮಾಜಿ ನಾಯಕ ಕುಮಾರ್ ವಿಶ್ವಾಸ್ ಬಹಿರಂಗ ಪಡಿಸಿದ್ದು, ಸಾಕಷ್ಟು ಕೋಲಾಹಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಡುವಿನ ನೇರ ಸ್ಪರ್ಧೆಯಲ್ಲಿ ಹೊಸ ಸರ್ಕಾರವನ್ನು ಆಯ್ಕೆ ಮಾಡಲು ಪಂಜಾಬ್ ಚುನಾವಣೆಗೆ ಹೋಗುವ ಮೂರು ದಿನಗಳ ಮೊದಲು ಈ ಆರೋಪ ಬಂದಿದ್ದು, ಕಾಂಗ್ರೆಸ್ ಈ ಆರೋಪದ ಸಂಪೂರ್ಣ ಲಾಭ ಪಡೆಯಲು ಮುಂದಾಗಿದ್ದು, ಅರವಿಂದ್ ಕೇಜ್ರಿವಾಲ್ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.

"ಒಂದು ದಿನ, ತಾನು ಮುಖ್ಯಮಂತ್ರಿ(ಪಂಜಾಬ್) ಅಥವಾ ಸ್ವತಂತ್ರ ರಾಷ್ಟ್ರದ(ಖಾಲಿಸ್ತಾನ್) ಮೊದಲ ಪ್ರಧಾನಿಯಾಗುತ್ತೇನೆ ಎಂದು ಅವರು ನನಗೆ ಹೇಳಿದರು" ಎಂದು ವಿಶ್ವಾಸ್ ಸುದ್ದಿ ಸಂಸ್ಥೆ ಎಏನ್ಐ ನೊಂದಿಗೆ ಮಾತನಾಡಿದ ವೀಡಿಯೊದಲ್ಲಿ ಹೇಳಿದ್ದಾರೆ.

ಉಗ್ರಗಾಮಿಗಳು, ಯಾರು ಖಾಲಿಸ್ತಾನಿ ಸಂಘಟನೆಗೆ ಸೇರಿದ್ದವರ ಸಹಕಾರ ತೆಗೆದುಕೊಳ್ಳುವುದು ಬೇಡ, ಎಂದು ಕಳೆದ ಚುನಾವಣೆ ಸಂದರ್ಭದಲ್ಲಿ ನಾನು ಅವರಿಗೆ ಹೇಳಿದ್ದೆ. ಆದರೆ ಅವರು, ಪರವಾಗಿಲ್ಲ ನಡಿಯುತ್ತದೆ, ಚಿಂತೆ ಮಾಡಬೇಡ, ಎಂದಿದ್ದರು. ಅಲ್ಲದೇ, ತಮ್ಮ ಸಂಚನ್ನು ಹಂಚಿಕೊಂಡು, ಭಗವಂತ ಅವರು ಮತ್ತು ಪುಲ್ಕಾ ಅವರೊಳಗೆ ಜಗಳ ಹಚ್ಚಿಸಿ ನಾನು ಗೆಲ್ಲುತ್ತೇನೆ, ಎಂದನು, ಇಲ್ಲಾ ಎಂದರೆ ಯಾರಾದರೂ ಕೈಗೊಂಬೆ ಯನ್ನು ಕುರ್ಚಿ(ಸಿಎಂ)ಗೆ ಆಯ್ಕೆ ಮಾಡುತ್ತಾನೆ.", ಎಂದು ವಿಶ್ವಾಸ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅವರು(ಕೇಜ್ರಿವಾಲ್) ನನಗೆ ಎಂತಹ ಭಯಾನಕ ಮಾತು ಹೇಳಿದರೆಂದರೆ, ಪಂಜಾಬ್‌ನಲ್ಲಿ ಎಲ್ಲರಿಗೂ ಗೊತ್ತಿದೆ, ಅವರು ಹೇಳಿದರು, "ನಾನು ಸ್ವತಂತ್ರ ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ", ಆಗ ನಾನು ಕೇಳಿದೆ, "ಐಎಸ್ಐಎಸ್ ಸೇರಿದಂತೆ ಜಗತ್ತಿನ ಎಲ್ಲಾ ಉಗ್ರಗಾಮಿ ಸಂಸ್ಥೆ ಹಣ ಸಹಾಯ ಮಾಡುತ್ತಿದೆ", ಎಂದು. ಅದಕ್ಕೆ ಅವರು(ಕೇಜ್ರಿವಾಲ್) ಹೇಳಿದರು, "ಅದರಲ್ಲೇನಂತೆ, ಹಾಗಾದರೆ ನಾನು ಸ್ವತಂತ್ರ ರಾಷ್ಟ್ರದ(ಖಾಲಿಸ್ತಾನ್) ಮೊದಲ ಪ್ರಧಾನಿಯಾಗುತ್ತೇನೆ", ಎಂದು ಹೇಳಿದ್ದಾನೆ.

ಈ ವ್ಯಕ್ತಿಯ ವಿಚಾರದಲ್ಲಿ ಉಗ್ರವಾದದ ಕುರಿತು, ಅಂದರೆ, ಅಧಿಕಾರಕ್ಕೆ ಬರಲು, ಸರ್ಕಾರ ಸಿಗಲು ಯಾವುದೇ ಬೆಲೆ ತೆರಲು ಸಿದ್ದ", ಎಂದು ಕುಮಾರ್ ವಿಶ್ವಾಸ್ ಹೇಳಿದರು.

RELATED TOPICS:
English summary :Kejriwal told me he would become the first PM of an independent nation(Khalistan) - Controversy sparked by former AAP leader

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...